ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮತದಾರರ ಪಟ್ಟಿಯಲ್ಲಿ ಹೆಸರು ವ್ಯತ್ಯಾಸ: ಭಾರತ ರತ್ನ ಪ್ರೊ. ಸಿ.ಎನ್.ಆರ್. ರಾವ್‌ ಅವರಿಗೆ ನೋಟಿಸ್ ನೀಡಿಲ್ಲ ಎಂದ ಚುನಾವಣಾ ಆಯೋಗ

P

Peepal Media • ರಾಜ್ಯ

• 1 ನಿಮಿಷದ ಓದು

ಮತದಾರರ ಪಟ್ಟಿಯಲ್ಲಿ ಹೆಸರು ವ್ಯತ್ಯಾಸ: ಭಾರತ ರತ್ನ ಪ್ರೊ. ಸಿ.ಎನ್.ಆರ್. ರಾವ್‌ ಅವರಿಗೆ ನೋಟಿಸ್ ನೀಡಿಲ್ಲ ಎಂದ ಚುನಾವಣಾ ಆಯೋಗ

ಭಾರತ ರತ್ನ ಪುರಸ್ಕೃತ, ಖ್ಯಾತ ವಿಜ್ಞಾನಿ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ಮತದಾರರ ಪಟ್ಟಿಯಲ್ಲಿನ ಹೆಸರು ವ್ಯತ್ಯಾಸಕ್ಕೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ಮುಖ್ಯ ಚುನಾವಣಾಧಿಕಾರಿಗಳ (ಸಿಇಒ) ಕಚೇರಿ ಸ್ಪಷ್ಟವಾಗಿ ತಳ್ಳಿಹಾಕಿದೆ.

ಇತ್ತೀಚೆಗೆ ಪತ್ರಿಕೆಯೊಂದರಲ್ಲಿ ಪ್ರಕಟವಾದ “ವಿಶೇಷ ಮಾಹಿತಿ ಪರಿಷ್ಕರಣೆ (SIR): ಹೆಸರು ವ್ಯತ್ಯಾಸಕ್ಕೆ ಸಂಬಂಧಿಸಿದಂತೆ ಭಾರತ ರತ್ನ ಸಿ.ಎನ್.ಆರ್. ರಾವ್‌ಗೆ ನೋಟಿಸ್ ಜಾರಿ” ಎಂಬ ಶೀರ್ಷಿಕೆಯ ವರದಿಯಿಂದ ವಿವಾದ ಸೃಷ್ಟಿಯಾಗಿತ್ತು. ಈ ಕುರಿತು ಸ್ಪಷ್ಟನೆ ನೀಡಿದ ಚುನಾವಣಾ ಅಧಿಕಾರಿಗಳು, ಆ ವರದಿಯು ಸತ್ಯಕ್ಕೆ ದೂರವಾಗಿದ್ದು, ಪ್ರೊ. ಸಿ.ಎನ್.ಆರ್. ರಾವ್ ಅವರಿಗಾಗಲಿ ಅಥವಾ ಅವರ ಕುಟುಂಬಕ್ಕಾಗಲಿ ಯಾವುದೇ ನೋಟಿಸ್ ಜಾರಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಅಧಿಕೃತ ಪ್ರಕಟಣೆಯ ಪ್ರಕಾರ, ಪ್ರೊ. ಸಿ.ಎನ್.ಆರ್. ರಾವ್ ಅವರು 157-ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಭಾಗ ಸಂಖ್ಯೆ 59ರಲ್ಲಿ ಮತದಾರರಾಗಿ ನೋಂದಾಯಿಸಿಕೊಂಡಿದ್ದಾರೆ. ವಿಶೇಷ ಮಾಹಿತಿ ಪರಿಷ್ಕರಣೆ (SIR) ಪ್ರಕ್ರಿಯೆಯ ಪರಿಶೀಲನೆ ವೇಳೆ, ಪ್ರಸ್ತುತ ಕರಡು ಮತದಾರರ ಪಟ್ಟಿಯಲ್ಲಿ “ಪ್ರೊ. ಸಿ.ಎನ್.ಆರ್. ರಾವ್, ತಂದೆ: ನಾಗೇಶ್ ರಾವ್ ಹೆಚ್.” ಎಂದಿದ್ದು, 2002ರ ಮತದಾರರ ಪಟ್ಟಿಯಲ್ಲಿ “ರಾಮ, ತಂದೆ: ಹೆಚ್. ನಾಗೇಶ್” ಎಂದು ನಮೂದಾಗಿರುವುದು ಕಂಡುಬಂದಿತ್ತು.

ದೇಶಕ್ಕೆ ಅವರ ಅಗಾಧ ಕೊಡುಗೆ ಮತ್ತು ಗಣ್ಯ ಸ್ಥಾನಮಾನವನ್ನು ಗಮನದಲ್ಲಿಟ್ಟುಕೊಂಡು, ಯಾವುದೇ ನೋಟಿಸ್ ನೀಡುವ ಬದಲು ರಾಜ್ಯ ಸ್ವೀಪ್ (SVEEP) ನೋಡಲ್ ಅಧಿಕಾರಿ, ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರು, ಮಲ್ಲೇಶ್ವರಂ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ಹಾಗೂ ಸ್ಥಳೀಯ ಬಿಎಲ್‌ಒ ಖುದ್ದಾಗಿ ಅವರ ನಿವಾಸಕ್ಕೆ ತೆರಳಿ ನಮೂನೆಯನ್ನು ನೀಡಿದ್ದರು.

ಪ್ರೊ. ರಾವ್ ಅವರ ಮೇಲಿನ ಅಪಾರ ಗೌರವದಿಂದಾಗಿ ಯಾವುದೇ ಔಪಚಾರಿಕ ನೋಟಿಸ್ ನೀಡದೆ, ದಾಖಲೆಯನ್ನು ನೇರವಾಗಿ ಹೆಚ್ಚುವರಿ ಚುನಾವಣಾ ನೋಂದಣಿ ಅಧಿಕಾರಿಗೆ (ಎಇಆರ್‌ಒ) ಅನುಮೋದನೆಗಾಗಿ ಕಳುಹಿಸಲಾಗಿತ್ತು. ಎಇಆರ್‌ಒ ಅವರು ಸೆಪ್ಟೆಂಬರ್ 8, 2026 ರಂದು ಅಂತಿಮ ಮತದಾರರ ಪಟ್ಟಿಗೆ ಅವರ ಹೆಸರನ್ನು ಅನುಮೋದಿಸಿದ್ದಾರೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ. ಈ ಕುರಿತಂತೆ ಹರಿದಾಡುತ್ತಿರುವ ತಪ್ಪು ವರದಿಗಳಿಗೆ ತೆರೆ ಎಳೆಯಲು ಮಲ್ಲೇಶ್ವರಂ ಇಆರ್‌ಒ ಅವರ ಅಧಿಕೃತ ಹೇಳಿಕೆ ಮತ್ತು ಸ್ಥಳೀಯ ಬಿಎಲ್‌ಒ ಅವರ ವಿಡಿಯೋ ದಾಖಲಾತಿಯನ್ನು ಚುನಾವಣಾ ಕಚೇರಿ ಬಿಡುಗಡೆ ಮಾಡಿದೆ.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version