ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಜ್ಯದಲ್ಲಿ 435 ಕಿ.ಮೀ. ಉದ್ದದ ಪಾದಚಾರಿ ಮಾರ್ಗ ಒತ್ತುವರಿ ತೆರವು – ಸಿಎಂ

ರ

ರಮೇಶ್‌ ಹಾಸನ್‌ • ರಾಜ್ಯ

• 2 ನಿಮಿಷದ ಓದು

ರಾಜ್ಯದಲ್ಲಿ 435 ಕಿ.ಮೀ. ಉದ್ದದ ಪಾದಚಾರಿ ಮಾರ್ಗ ಒತ್ತುವರಿ ತೆರವು – ಸಿಎಂ

ಬೆಂಗಳೂರು : ಜುಲೈ 1 ರಿಂದ ಇಲ್ಲಿಯವರೆಗು ಒಟ್ಟು 435 ಕಿ.ಮೀ. ಉದ್ದದ ಪಾದಚಾರಿ ಮಾರ್ಗಗಳಲ್ಲಿ ಒಟ್ಟು 9,878 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ. ಐದೂ ಪಾಲಿಕೆಗಳ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ಹೇಳಿದರು.

ನಗರದ ವಿವಿಧ ಕಡೆಗಳಲ್ಲಿ ಪಾದಚಾರಿ ಮಾರ್ಗ ಒತ್ತುವರಿ ಹಾಗೂ ವ್ಯಾಪಾರಿಗಳ ತೆರವು ಕಾರ್ಯಾಚರಣೆ ಕುರಿತು ಸಿಎಂ ಡಿ ಕೆ ಶಿವಕುಮಾರ್ ಅವರು ಶುಕ್ರವಾರ ನಗರ ಪ್ರದಕ್ಷಿಣೆ ನಡೆಸಿ ಬೆಂಗಳೂರು ನಗರಾಭಿವೃದ್ದಿ ಸಚಿವರಾದ ಕೃಷ್ಣ ಬೈರೇಗೌಡರಿಂದ ಮಾಹಿತಿ ಪಡೆದರು. ನಂತರ ಜಯನಗರದ ಅಶೋಕ ಸ್ಥಂಭದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದರು.

“ಒಟ್ಟು 1,340 ಅಂಗಡಿಗಳಿದ್ದವು, ಸುಮಾರು 1,800 ತಳ್ಳುವ ಗಾಡಿಗಳಿದ್ದವು. ತಳ್ಳುವ ಗಾಡಿಗಳನ್ನು ತೆಗೆದುಕೊಂಡು ಹೋಗಲು ಅವಕಾಶ ನೀಡಲಾಗಿದೆ. ಸುಮಾರು 2,267 ಅಂಗಡಿ ಮುಂಭಾಗದಲ್ಲಿ ತಗಡಿನ ಶೀಟ್ ಗಳನ್ನು ಅಳವಡಿಸಲಾಗಿತ್ತು ಅದನ್ನೂ ಸಹ ತೆಗೆಯಲಾಗಿದೆ. 2,300 ಮೆಟ್ಟಿಲು, ರ್ಯಾಂಪ್ ಗಳು, 2,662 ಪಿಲ್ಲರ್ ಗಳು ಬೋರ್ಡ್ ಗಳು, 2,247 ಶೆಡ್ ಗಳನ್ನು ತೆರವುಗೊಳಿಸಲಾಗಿದೆ. ತೆರವಾದ ತ್ಯಾಜ್ಯವನ್ನು ವಿಲೇವಾರಿ ಮಾಡಿದ್ದು ಜೊತೆಗೆ ಪಾದಚಾರಿ ಮಾರ್ಗಗಳನ್ನು ದುರಸ್ಥಿ ಮಾಡುವ ಕೆಲಸವನ್ನೂ ಮಾಡಿಕೊಂಡು ಬರಲಾಗುತ್ತಿದೆ” ಎಂದು ವಿವರಿಸಿದರು.

ಬೀದಿ ಬದಿ ವ್ಯಾಪಾರಿಗಳು ನಮ್ಮವರೇ

“ಆತಂಕ ಬೇಡ. ಬಡವರು ನಮ್ಮವರೇ. ಖಾಸಗಿ ಅಥವಾ ಸರ್ಕಾರಿ ಜಾಗ ಇರಬಹುದು ಯಾವುದೋ ಜಾಗದಲ್ಲಿ ವ್ಯಾಪಾರ ಮಾಡುವುದಕ್ಕೆ ಆಗುವುದಿಲ್ಲ. ಬೀದಿಬದಿ ವ್ಯಾಪಾರಿಗಳಿಗೂ ನಮ್ಮ ಸರ್ಕಾರ ಅವಕಾಶ ಮಾಡಿಕೊಡುತ್ತದೆ. ಬೀದಿ ಬದಿ ವ್ಯಾಪಾರಿಗಳು ಬದುಕಬೇಕು ಎಂಬ ಆಸೆ ನಮಗೂ ಇದೆ” ಎಂದರು.

“ನಾವು ಬೀದಿಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಿದ್ದೆವು. ಅದಕ್ಕೆ ನ್ಯಾಯಲಯ ತಡೆಯಾಜ್ಞೆ ನೀಡಿತ್ತು, ಈಗ ಮತ್ತೆ ಈ ಪ್ರಕ್ರಿಯೆ ಪ್ರಾರಂಭ ಮಾಡುತ್ತೇವೆ. ನಿಮಗಾಗಿಯೇ ಸೂಚಿತ ಜಾಗಗಳನ್ನು ಗುರುತಿಸಲಾಗುವುದು. ಅಲ್ಲಿ ನೀವು ವ್ಯಾಪಾರ ನಡೆಸಬಹುದು” ಎಂದರು.

ದೊಡ್ಡ ಮಾಫಿಯಾ ಇದರ ಹಿಂದೆಯಿದೆ

“ಟೀಕೆ ಇರುತ್ತದೆ. ಬೆಂಗಳೂರಿನ ಸುಧಾರಣೆಗಾಗಿ ನಾವು ಟೀಕೆಗಳನ್ನು ಸ್ವೀಕರಿಸಲು ಸಿದ್ಧರಿದ್ದೇವೆ. ಇದರ ಹಿಂದೆ ದೊಡ್ಡ ಮಾಫಿಯಾ ಇದೆ. ರೌಡಿಗಳು ವ್ಯಾಪಾರಿಗಳಿಂದ ವಸೂಲಿ ಮಾಡುವ ಕೆಲಸಗಳು ನಡೆದಿವೆ. ಈ ಬಗ್ಗೆ ಮಾಹಿತಿಯೂ ನಮಗಿದೆ. ಪೊಲೀಸ್ ಹಾಗೂ ಜಿಬಿಎ ಅಧಿಕಾರಿಗಳಿಗೆ ನಾವು ಸ್ವಾತಂತ್ರ್ಯ ನೀಡಿದ್ದೇವೆ. ಸ್ವಚ್ಚ ಬೆಂಗಳೂರು ನಮ್ಮ ಗುರಿ. ಇಡೀ ದೇಶ ಬೆಂಗಳೂರನ್ನು ಗಮನಿಸುತ್ತಿದೆ” ಎಂದರು.

“ಈಗಾಗಲೇ ಮೂರು ವರ್ಷಗಳಲ್ಲಿ ಸುಮಾರು 900 ಕ್ಕೂ ಹೆಚ್ಚು ಪಾದಚಾರಿಗಳ ಸಾವಾಗಿದೆ. ಅದ್ದರಿಂದ ನಾಗರಿಕರು ಅನುಕೂಲಕ್ಕಾಗಿ ನಾವು ಈ ಕೆಲಸ ಮಾಡುತ್ತಿದ್ದೇವೆ. ಇದೇನು ನಮ್ಮ ಸ್ವಂತ ಲಾಭಕ್ಕಾಗಿ ಮಾಡುತ್ತಿರುವ ಕೆಲಸವಲ್ಲ. ಪಾದಚಾರಿ ಮಾರ್ಗ ಇಲ್ಲ ಎಂದರೆ ಜನ ರಸ್ತೆಯಲ್ಲಿ ನಡೆಯುತ್ತಾರೆ. ಆಗ ವಾಹನಗಳ ಓಡಾಟಕ್ಕೂ ತೊಂದರೆ ಉಂಟಾಗಲಿದೆ. ಕಳೆದ ಹದಿನೈದು ದಿನದಿಂದ ಏನೇನು ಕೆಲಸವಾಗಿದೆ ಎಂದು ಅವಲೋಕಿಸಿದ್ದೇನೆ” ಎಂದರು.

ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಿಲ್ಲ ಎಂದು ಆರೋಪ ಮಾಡಲಾಗುತ್ತಿದೆ ಎಂದು ಕೇಳಿದಾಗ, “ಬಹಳ ಸಂತೋಷ, ಆರೋಪ ಮಾಡುವವರೆಲ್ಲಾ ಆರೋಪ ಮಾಡಲಿ. ಅವರಿಗೆ ಬೇರೆ ಜಾಗಗಳನ್ನು ನಾವು ಗುರುತಿಸಿ ನೀಡುತ್ತೇವೆ. ಹೆಚ್ಚು ವಾಹನಗಳು ಓಡಾಡುವ ಕಡೆ ಹಾಗೂ ಯಾರದೋ ಆಸ್ತಿಯ ಮುಂದೆ ವ್ಯಾಪಾರ ಮಾಡಲು ಅವಕಾಶವಿಲ್ಲ. ಯಾವುದೇ ತೊಂದರೆಯಿಲ್ಲದ ಜಾಗವನ್ನು ನೋಡಲಾಗುವುದು. ಯಾರಿಗೂ ಅನಾನುಕೂಲವಾಗದ ಸ್ಥಳಗಳಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಲಾಗುವುದು. ಬೆಳಗ್ಗೆ ಬರಬೇಕು, ಸಾಯಂಕಾಲ ಹೋಗಬೇಕು” ಎಂದು ಹೇಳಿದರು.

ವಿಜಯನಗರ ಅಂಡರ್ ಪಾಸ್ ಮಾರುಕಟ್ಟೆ ನಿರ್ಮಿಸಿ ಪರ್ಯಾಯ ವ್ಯವಸ್ಥೆ ಮಾಡಿತ್ತು. ಆದರೆ ಬೀದಿ ಬದಿ ವ್ಯಾಪಾರಸ್ಥರು ಒಳಗಡೆ ವ್ಯಾಪಾರ ಮಾಡುತ್ತಿಲ್ಲ ಎಂದು ಕೇಳಿದಾಗ, “ನಿಮ್ಮ ಸಲಹೆ, ಜ್ಞಾನಕ್ಕೆ ನಾವು ಗೌರವ ಕೊಡುವ ಕೆಲಸ ಮಾಡಲಿದ್ದೇವೆ” ಎಂದರು.

ಜಯನಗರ ಮಾರುಕಟ್ಟೆ ಬಗ್ಗೆ ಶೀಘ್ರ ತೀರ್ಮಾನ
“ಜಯನಗರ ಮಾರುಕಟ್ಟೆ ಬಗ್ಗೆ ಸದ್ಯದಲ್ಲೇ ತೀರ್ಮಾನ ಮಾಡಲಾಗುವುದು. ಅರ್ಧ ಕಟ್ಟಡ ನಿರ್ಮಾಣವಾಗಿದೆ. ಇನ್ನರ್ಧ ಕೆಲಸವಾಗಬೇಕು. ಶೀಘ್ರದಲ್ಲೇ ಈ ಕೆಲಸವನ್ನೂ ಮಾಡಲಾಗುವುದು. ಯಾವುದಾದರೂ ಒಂದು ಯೋಜನೆಯ ಅಡಿಯಲ್ಲಿ ಈ ಕೆಲಸ ಮಾಡಲಾಗುವುದು. ನಮ್ಮ ಆಸ್ತಿಗಳನ್ನ ರಕ್ಷಣೆ ಮಾಡಿ ನಾಗರಿಕರಿಗೆ ಗೌರವ ಕೊಡುವಂತಹ ಕೆಲಸಗಳನ್ನು ನಾವು ಮಾಡುತ್ತೇವೆ” ಎಂದು ಹೇಳಿದರು.

ವಿಷಯಗಳು: #karnataka #news
ರ

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version