ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

‘ಜಾರಿ ನಿರ್ದೇಶನಾಲಯ’ ತನ್ನ ಹೆಸರನ್ನು ‘ಕಾಂಗ್ರೆಸ್ ವಿರೋಧಿ ನಿರ್ದೇಶನಾಲಯ’ ಎಂದು ಬದಲಾಯಿಸಿಕೊಳ್ಳಲಿ: ಸಚಿವ ದಿನೇಶ್‌ ಗುಂಡೂರಾವ್

PPeepal Media

Peepal Media • ರಾಜ್ಯ

• 1 ನಿಮಿಷದ ಓದು

‘ಜಾರಿ ನಿರ್ದೇಶನಾಲಯ’ ತನ್ನ ಹೆಸರನ್ನು ‘ಕಾಂಗ್ರೆಸ್ ವಿರೋಧಿ ನಿರ್ದೇಶನಾಲಯ’ ಎಂದು ಬದಲಾಯಿಸಿಕೊಳ್ಳಲಿ: ಸಚಿವ ದಿನೇಶ್‌ ಗುಂಡೂರಾವ್

ಬೆಂಗಳೂರು: ನಿನ್ನೆ ನಡೆದ ಕಾಂಗ್ರೆಸ್‌ ಸಂಸದರು ಹಾಗೂ ಶಾಸಕರ ಮೇಲಿನ ಇಡಿ ದಾಳಿಯನ್ನು ರಾಜ್ಯ ಸರ್ಕಾರದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಖಂಡಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು ಜಾರಿ ನಿರ್ದೇಶನಾಲಯ ತನ್ನ ಹೆಸರನ್ನು ಕಾಂಗ್ರೆಸ್‌ ವಿರೋಧಿ ನಿರ್ದೇಶನಾಲಯ ಎಂದು ಬದಲಾಯಿಸಿಕೊಳ್ಳುವುದು ಸೂಕ್ತ ಎಂದು ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ಜಾರಿ ನಿರ್ದೇಶನಾಲಯ ಮತ್ತೆ ದಾಳಿ ನಡೆಸಿದೆ. ಜಾರಿ ನಿರ್ದೇಶನಾಲಯದ ವೈಶಿಷ್ಟ್ಯವೇನೆಂದರೆ ಅದು ದಾಳಿ ಮಾಡುವುದು ಬಿಜೆಪಿಯೇತರ ನಾಯಕರ ಮೇಲೆ ಮಾತ್ರ. ಇಲ್ಲಿಯವರೆಗೂ ED ಬಿಜೆಪಿ ನಾಯಕರ ತಂಟೆಗೆ ಹೋಗಿಲ್ಲ. ಹೋಗುವುದು ಇಲ್ಲ. ಇದೊಂದು ವಿಸ್ಮಯ.

ಕಾಂಗ್ರೆಸ್ ನಾಯಕರನ್ನೇ ನಿರ್ಧಿಷ್ಟವಾಗಿ ಗುರಿಯಾಗಿಸಿಕೊಂಡು ದಾಳಿ ನಡೆಸುವ ‘ಜಾರಿ ನಿರ್ದೇಶನಾಲಯ’ ತನ್ನ ಹೆಸರನ್ನು ‘ಕಾಂಗ್ರೆಸ್ ವಿರೋಧಿ ನಿರ್ದೇಶನಾಲಯ’ ಎಂದು ಬದಲಾಯಿಸಿಕೊಳ್ಳುವುದು ಸೂಕ್ತ. ಯಾಕೆಂದರೆ ಜಾರಿ ನಿರ್ದೇಶನಾಲಯದ ಪ್ರೈಮ್ ಟಾರ್ಗೆಟ್ ಕಾಂಗ್ರೆಸ್ ನಾಯಕರೆ‌ ಹೊರತು ಬಿಜೆಪಿಯವರಲ್ಲ.

ಇತ್ತೀಚೆಗಷ್ಟೆ ತಮಿಳುನಾಡಿನ TASMAC ಹಗರಣದಲ್ಲಿ ED ನಡೆಯನ್ನು ಸುಪ್ರೀಂ ಕೋರ್ಟ್ ಕಟು ಮಾತುಗಳಲ್ಲಿ ಟೀಕಿಸಿದೆ. ED ಎಲ್ಲಾ‌ ಮಿತಿಗಳನ್ನು ಮೀರುತ್ತಿದೆ ಎಂದು ಸುಪ್ರೀಂ ಎಚ್ಚರಿಕೆ ನೀಡಿದೆ. ಆದರೂ ED ಅಧಿಕಾರಿಗಳು BJP ಕಾರ್ಯಕರ್ತರಂತೆ ವರ್ತಿಸುತ್ತಿದ್ದಾರೆ.

ಸಾಂವಿಧಾನಿಕ ತನಿಖಾ ಸಂಸ್ಥೆಯಾದ EDಯನ್ನು ಮೋದಿ ಸರ್ಕಾರ ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ. ED ರಾಜಕೀಯ ಪಕ್ಷವೊಂದರ ಆಜ್ಞಾಪಾಲಕರಾದರೆ ಆ ಸಂಸ್ಥೆಗೆ ಸಾಂವಿಧಾನಿಕ ಪಾವಿತ್ರ್ಯತೆ ಇರಲು ಹೇಗೆ ಸಾಧ್ಯ‌.? ಆ ಸಂಸ್ಥೆಯಿಂದ ಪ್ರಜಾಪ್ರಭುತ್ವದ ಮೌಲ್ಯ ಉಳಿಯಲು ಹೇಗೆ ಸಾಧ್ಯ?” ಎಂದು ಅವರು ಪ್ರಶ್ನಿಸಿದ್ದಾರೆ.

ಈ ದಾಳಿಯ ಕುರಿತು ಕಾಂಗ್ರೆಸ್‌ ಪಕ್ಷದ ಹಲವು ನಾಯಕರು ಈಗಾಗಲೇ ಪ್ರತಿಕ್ರಿಯಿಸಿದ್ದು, ಅವರೆಲ್ಲರೂ ಇದೊಂದು ಕಾಂಗ್ರೆಸ್‌ ಪಕ್ಷವನ್ನು ಗುರಿಯಾಗಿಸಿಕೊಂಡು ನಡೆಸಲಾದ ದಾಳಿ ಎಂದಿದ್ದಾರೆ.

ದಾಳಿಗೊಳಗಾದ ಭರತ್‌ ರೆಡ್ಡಿ ಇಡಿಯವರಿಗೆ ತಮ್ಮ ಮನೆಯಲ್ಲಿ ಒಂದು ಕಾಗದದ ಚೂರೂ ಸಿಕ್ಕಿಲ್ಲ ಎಂದಿದ್ದಾರೆ. ಅತ್ತ ಸಂಸದ ತುಕಾರಾಮ್‌ ಅವರು “ನಾನು ಈ ದಾಳಿಯನ್ನು ರಾಜಕೀಯ ಪ್ರೇರಿತ ಎನ್ನುವುದಿಲ್ಲ. ಇಡಿ ಕೇಳಿ ಕೇಳುವ ಎಲ್ಲಾ ದಾಖಲೆಗಳನ್ನು ನೀಡಿ ತನಿಖೆಗೆ ಸಹಕರಿಸುತ್ತೇನೆ” ಎಂದಿದ್ದಾರೆ.


PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು