ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಹಾತ್ಮ ಗಾಂಧಿ ಕುರಿತು ಪ್ರಬಂಧ ಬರೆದು 31 ಸಾವಿರ ಗೆಲ್ಲಿ!

PPeepal Media

Peepal Media • ರಾಜ್ಯ

• 2 ನಿಮಿಷದ ಓದು

ಮಹಾತ್ಮ ಗಾಂಧಿ ಕುರಿತು ಪ್ರಬಂಧ ಬರೆದು 31 ಸಾವಿರ ಗೆಲ್ಲಿ!

ಬೆಂಗಳೂರು ಆಗಸ್ಟ್ 20:ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ / ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.


ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ ಒಟ್ಟು 3 ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಲು ಉದ್ದೇಶಿಸಲಾಗಿದೆ. ವಿಜೇತರಿಗೆ ರಾಜ್ಯಮಟ್ಟದಲ್ಲಿ ಪ್ರಥಮ 31 ಸಾವಿರ ರೂ. ದ್ವಿತೀಯ 21 ಸಾವಿರ ರೂ. ಮತ್ತು ತೃತೀಯ 11 ಸಾವಿರ ರೂ. ಹಾಗೂ ಜಿಲ್ಲಾಮಟ್ಟದಲ್ಲಿ ಪ್ರಥಮ 3 ಸಾವಿರ ರೂ. ದ್ವಿತೀಯ 2 ಸಾವಿರ ರೂ ಮತ್ತು ತೃತೀಯ 1 ಸಾವಿರ ರೂ. ಬಹುಮಾನ ನೀಡಲಾಗುವುದು.


ಪ್ರೌಢ ಶಾಲಾ ವಿಭಾಗ :- 1) ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, 2) ಗಾಂಧೀಜಿಯವರ ವಿಚಾರದಲ್ಲಿ ಸತ್ಯಾಗ್ರಹ, 3) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ, 4) ಗಾಂಧೀಜಿಯವರ ತತ್ವಗಳಿಂದ ದೇಶ ಕಟ್ಟುವ ಬಗೆ, ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಈ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 900 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.


ಪದವಿ ಪೂರ್ವ ಶಿಕ್ಷಣ ವಿಭಾಗ :- 1) ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, 2) ದೇಶದ ಕಳಂಕವಾದ ಅಸ್ಪೃಶ್ಯತೆ ನಿವಾರಿಸುವಲ್ಲಿನ ಗಾಂಧೀಜಿಯವರ ಪ್ರಯೋಗಗಳು, 3) ಗಾಂಧೀಜಿಯವರನ್ನು ಜಗತ್ತು ಗ್ರಹಿಸಿದ ರೀತಿ, 4) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ, ಪದವಿ ಪೂರ್ವ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳು ಈ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 1500 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.

ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗ :- 1) ಇಂದಿನ ಪ್ರಜಾಪ್ರಭುತ್ವದಲ್ಲಿ ಸತ್ಯಾಗ್ರಹದ ಮಹತ್ವ, 2) ದೇಶ ನಿರ್ಮಾಣದಲ್ಲಿ ಗಾಂಧೀಜಿಯವರ ಜಾತ್ಯಾತೀತ ನಿಲುವುಗಳು, 3) ಗಾಂಧೀಜಿಯವರ ಧಾರ್ಮಿಕ ಸಹಿಷ್ಣುತೆ ಚಿಂತನೆ, ಸ್ವಾತಂತ್ರ್ಯ ಮತ್ತು ಸಮಾನತೆಯ ಪರಿಕಲ್ಪನೆಗಳು, 4) ಗಾಂಧೀಜಿಯವರ ವಿಚಾರದಲ್ಲಿ ಸತ್ಯದ ಪರಿಕಲ್ಪನೆ, 5) ಗಾಂಧೀಜಿಯವರು ಕಂಡ ಸ್ವರಾಜ್ಯ ಮತ್ತು ಆರ್ಥಿಕ ಚಿಂತನೆಗಳು. ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳು ಈ ಐದು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 2000 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.


ದಿನಾಂಕ : 06-09-2024 ರೊಳಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಜಿಲ್ಲಾಡಳಿತದ ಸಹಯೋಗದೊಂದಿಗೆ ಸ್ಪರ್ಧೆ ಏರ್ಪಡಿಸಿ ದಿನಾಂಕ : 10-09-2024 ರೊಳಗಾಗಿ ಮೌಲ್ಯಮಾಪನ ಮಾಡಿ, ವಿಜೇತರ ವಿವರಗಳು ಹಾಗೂ ಪ್ರಬಂಧಗಳನ್ನು ಕೇಂದ್ರ ಕಚೇರಿಗೆ ಕಳುಹಿಸಲಿದೆ. ಜಿಲ್ಲಾಮಟ್ಟದ ಪ್ರಥಮ ಬಹುಮಾನ ವಿಜೇತ ಪ್ರಬಂಧಗಳನ್ನು ರಾಜ್ಯಮಟ್ಟದಲ್ಲಿ ಮರುಮೌಲ್ಯಮಾಪನ ಮಾಡಿ, ರಾಜ್ಯಮಟ್ಟದ ಫಲಿತಾಂಶ ಘೋಷಿಸಲಾಗುವುದು.


ಪ್ರತಿ ವಿಭಾಗದಲ್ಲಿನ ಅತ್ಯುತ್ತಮವಾದ ಮೂರು (3) ಪ್ರಬಂಧಗಳಿಗೆ ಅಕ್ಟೋಬರ್ 02 ರಂದು ಜಿಲ್ಲಾ ಮಟ್ಟದ ಗಾಂಧೀ ಜಯಂತಿ ದಿನಾಚರಣೆ ಸಂದರ್ಭದಲ್ಲಿ ಬಹುಮಾನ ನೀಡಿ ಪ್ರಬಂಧ ರಚನೆಕಾರರಿಗೆ ಗೌರವಿಸಲಾಗುವುದು.


ನಿಬಂಧನೆಗಳು :-
ಪ್ರಬಂಧವು ಸಂಪೂರ್ಣವಾಗಿ ಸ್ವರಚಿತವಾಗಿರಬೇಕು. ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿಯೇ ಶುದ್ಧ ಕೈಬರಹದಲ್ಲಿ ಪ್ರಬಂಧ ಬರೆಯಬೇಕು. ಆಕರವಾಗಿ ಬಳಸಿದ ಪರಾಮರ್ಶನ / ಆಧಾರ ಗ್ರಂಥಗಳ ವಿವರಗಳನ್ನು ಪ್ರಬಂಧದ ಕೊನೆಯಲ್ಲಿ ನಮೂದಿಸಬೇಕು. ಆದರೆ, ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿ ಪರಾಮರ್ಶನ / ಆಧಾರ ಗ್ರಂಥಗಳು / ಮೊಬೈಲ್ ಗಳ ಬಳಕೆಗೆ ಅವಕಾಶವಿರುವುದಿಲ್ಲ. ಪ್ರಬಂಧಕಾರರ ಹೆಸರು, ವಿಳಾಸ ನಮೂದಿಸಿರಬೇಕು. ಪ್ರಬಂಧವು ಈ ಮೊದಲು ಎಲ್ಲಿಯೂ ಪ್ರಕಟವಾಗಿರಬಾರದು. ಆಯ್ದ ಪ್ರಬಂಧಗಳ ಪ್ರಕಟಣೆಯ ಹಕ್ಕನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊಂದಿರುತ್ತದೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು