ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಾವಿತ್ರಿ ಬಾಪುಲೆ ಅವರ ಸಾಮಾಜಿಕ ಕಳಕಳಿ ಹಾಗೂ ಚಿಂತನೆಗಳನ್ನು ಅರಿಯಬೇಕು: ಮರಿತಿಬ್ಬೇಗೌಡ

PPeepal Media Desk

Peepal Media Desk • ರಾಜ್ಯ

• 1 ನಿಮಿಷದ ಓದು

ಸಾವಿತ್ರಿ ಬಾಪುಲೆ ಅವರ ಸಾಮಾಜಿಕ ಕಳಕಳಿ ಹಾಗೂ ಚಿಂತನೆಗಳನ್ನು ಅರಿಯಬೇಕು: ಮರಿತಿಬ್ಬೇಗೌಡ

ದೇಶದ ಹೆಣ್ಣು ಮಕ್ಕಳ ಸಮಗ್ರತೆ, ಸಮಾನತೆ ಹಾಗೂ ಐಕ್ಯತೆಗಾಗಿ ಸಾವಿತ್ರಿ ಬಾ ಪುಲೆ ಅವರು ಮಾಡಿದಂತಹ ಸಾಮಾಜಿಕ ಕಳಕಳಿ, ಚಿಂತನೆಗಳನ್ನು ಶಿಕ್ಷಕರು ಅಧ್ಯಯನ ಮಾಡಬೇಕು ಈ ಮೂಲಕ ಮಹಿಳೆಯರು ಹೊಸ ಚಿಂತನೆಗಳನ್ನು ಮೂಡಿಸಿಕೊಳ್ಳಬೇಕು ವಿಧಾನ ಪರಿಷತ್ ಶಾಸಕ ಮರಿತಿಬ್ಬೇಗೌಡ ಅವರು ತಿಳಿದರು.

ಭಾರತ ದೇಶದ ಪ್ರಥಮ ಮಹಿಳಾ ಶಿಕ್ಷಕಿ ಸಾವಿತ್ರಿ ಬಾ ಪುಲೆ ಅಂದಿನ ಕಾಲಘಟ್ಟದಲ್ಲಿ ಹೆಣ್ಣು ಮಕ್ಕಳಿಗೆ ಶಿಕ್ಷಣವನ್ನು ನೀಡಬೇಕು ಎಂಬ ದೃಷ್ಟಿಯಿಂದ ಶ್ರಮಿಸಿದ್ದಾರೆ ಎಂದರು.

ಮಹಿಳೆಯರ ಸಬಲೀಕರಣಕ್ಕಾಗಿ ಇಂದಿನ ಸರ್ಕಾರ ಜಾರಿಗೆ ತಂದಂತಹ ಗ್ಯಾರಂಟಿ ಯೋಜನೆಗಳು ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ದೊಡ್ಡ ಮೈಲಿಗಲ್ಲು ಎಂದರು.

ಮಂಡ್ಯ ಜಿಲ್ಲೆಗೆ ನೀರಾವರಿ ಅಭಿವೃದ್ಧಿಗೆ ಎರಡು ಕೋಟಿ ರೂ ಅನುದಾನವನ್ನು ಕೃಷಿ ಹಾಗು ಜಿಲ್ಲಾ ಉಸ್ತುವಾರಿ ಸಚಿವರು ನೀಡಿದ್ದಾರೆ ಜೊತೆಗೆ ಮಹಿಳೆಯರ ಸಮಗ್ರ ಸಬಲೀಕರಣಕ್ಕೆ ಬಹಳಷ್ಟು ಶ್ರಮಿಸಿದ್ದಾರೆ ಎಂದು ಅವರಿಗೆ ಅಭಿನಂದನೆಯನ್ನು ತಿಳಿಸಿದರು.

ಮಹಿಳೆಯರು ಸ್ವಾವಲಂಬಿಗಳಾಗಿ ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಬೇಕು. ದೇಶವನ್ನು ಕಟ್ಟುವಲ್ಲಿ ಮಹಿಳೆಯ ಪಾತ್ರ ಅಪಾರವಾಗಿದೆ. ಮಹಿಳೆಯರು ಬುದ್ಧ, ಬಸವ, ಅಂಬೇಡ್ಕರ್ ಅವರ ಚಿಂತನೆಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅರಿವು ಮೂಡಿಸಿ ಅವುಗಳನ್ನು ಅನುಕರಣೆ ಮಾಡಿಕೊಂಡರೆ ಈ ದೇಶದಲ್ಲಿ ದೊಡ್ಡ ಬದಲಾವಣೆಯನ್ನು ಮಾಡಲು ಸಾಧ್ಯ ಎಂದು ತಿಳಿಸಿದರು.

ಮಹಿಳಾ ಸಬಲೀಕರಣ, ಮಹಿಳೆಯರ ಮಾನಸಿಕ ಮತ್ತು ದೈಹಿಕ ಸ್ವಾಸ್ಥ್ಯ ವಿಷಯ ಕುರಿತು ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳ ಮಾನಸ ಉಪನ್ಯಾಸ ನೀಡಿದರು.

ಇದೇ ಸಂದರ್ಭದಲ್ಲಿ ಅನುಪಮಾ ಸೇವಾ ಪ್ರಶಸ್ತಿ ಪುರಸ್ಕೃತ ಮಹಿಳೆಯರನ್ನು ಸನ್ಮಾನಿಸಲಾಯಿತು.

ತದನಂತರ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ, ನಾಗಮಂಗಲ ತಾಲೂಕಿನ ಹಕ್ಕಿಪಿಕ್ಕಿ ಜನಾಂಗದ ನಿವಾಸರಹಿತರಿಗೆ ಹಕ್ಕು ಪತ್ರ ವಿತರಣೆ, ದೃಷ್ಟಿ ದೋಷವುಳ್ಳ 60 ವರ್ಷ ಮೇಲ್ಪಟ್ಟವರಿಗೆ ಕನ್ನಡಕ ವಿತರಣೆ, ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ಕಿಟ್ ಅನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಸಮಾಜ ಸೇವಕರು ಹಾಗೂ ಉದ್ಯಮಿಗಳಾದ ವೆಂಕಟರಮಣಗೌಡ( ಸ್ಟಾರ್ ಚಂದ್ರು), ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯದ್ಯಕ್ಷರಾದ ಕೆ. ನಾಗೇಶ್, ಜಿಲ್ಲಾಧ್ಯಕ್ಷ ಜೆ.ವೈ.ಮಂಜುನಾಥ್, ಪಾಂಡವಪುರ ಉಪ ವಿಭಾಗಾಧಿಕಾರಿ ಜೆ.ವಿ.ಮಾರುತಿ, ತಹಶೀಲ್ದಾರ್ ನಯೀಂಉನ್ನೀಸಾ, ತಾ.ಪಂ. ಇಓ ಚಂದ್ರಮೌಳಿ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಯೋಗೇಶ್, ಬಿ.ಆರ್.ಸಿ. ಸಮನ್ವಯಾಧಿಕಾರಿ ಕೆ.ರವೀಶ್, ಶಿಕ್ಷಕರ ಪತ್ತಿನ ಸಹಕಾರ ಸಂಘದ ಸಂಸ್ಥಾಪಕ ಅಧ್ಯಕ್ಷ ಬಿ.ಎಂ.ಪ್ರಕಾಶ್ ಸೇರಿದಂತೆ ಜಿಲ್ಲಾ ಸಂಘದ ಪದಾಧಿಕಾರಿಗಳು, ತಾಲೂಕು ಸಂಘದ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು