ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಚಿಕ್ಕಮಗಳೂರಿನಲ್ಲಿ ಹಾಸ್ಟೆಲ್ ಹುಡುಗಿಯರನ್ನು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಮೂವರ ಬಂಧನ

P

Peepal Media Desk • ರಾಜ್ಯ

• 1 ನಿಮಿಷದ ಓದು

ಚಿಕ್ಕಮಗಳೂರಿನಲ್ಲಿ ಹಾಸ್ಟೆಲ್ ಹುಡುಗಿಯರನ್ನು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಮೂವರ ಬಂಧನ

ಚಿಕ್ಕಮಗಳೂರು: ಸರ್ಕಾರಿ ಹಾಸ್ಟೆಲ್‌ನಲ್ಲಿ ಅಪ್ರಾಪ್ತ ಬಾಲಕಿಯರನ್ನು ಅರೆವೈದ್ಯಕೀಯ ಕೋರ್ಸ್‌ಗೆ ಪ್ರವೇಶ ಕೊಡಿಸುವ ನೆಪದಲ್ಲಿ ಆಮಿಷವೊಡ್ಡಿ ಲೈಂಗಿಕ ಶೋಷಣೆ ಮಾಡಿರುವ ಆಘಾತಕಾರಿ ಘಟನೆ ಕರ್ನಾಟಕದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಶನಿವಾರ ಬೆಳಕಿಗೆ ಬಂದಿದೆ.

ವಂಚನೆಗೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಗ್ಯಾಂಗ್ ಕಟ್ಟಿಕೊಂಡು ಹಲವು ನರ್ಸಿಂಗ್ ವಿದ್ಯಾರ್ಥಿಗಳನ್ನು ಶೋಷಿಸುತ್ತಿದ್ದರು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಬಂಧಿತರನ್ನು ವಸತಿ ನಿಲಯದ ಡಿ ಗ್ರೂಪ್ ಕಾರ್ಯಕರ್ತ ಸುರೇಶ್, ಮಹಿಳಾ ನರ್ಸ್ ಚಂದನಾ ಮತ್ತು ಆಕೆಯ ಪ್ರಿಯಕರ ವಿನಯ್ ಎಂದು ಗುರುತಿಸಲಾಗಿದೆ.

ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸಂತ್ರಸ್ತರಿಗೆ ಪಾನೀಯ ಮತ್ತು ಆಹಾರದಲ್ಲಿ ನಿದ್ರೆ ಮಾತ್ರೆ ಹಾಕಿ ಕೊಟ್ಟು, ನಂತರ ಲೈಂಗಿಕವಾಗಿ ಶೋಷಣೆ ಮಾಡಲಾಗಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ.

ಪ್ಯಾರಾಮೆಡಿಕಲ್ ಕೋರ್ಸ್‌ಗೆ ಪ್ರವೇಶ ನೀಡುವುದಾಗಿ ಹಾಸ್ಟೆಲ್ ಹುಡುಗಿಯರಿಗೆ ಸುರೇಶ್ ಆಮಿಷವೊಡ್ಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಪರೀಕ್ಷೆ ಮುಗಿದ ತಕ್ಷಣ ಕೆಲಸ ಸಿಗುತ್ತದೆ ಎಂದು ಹುಡುಗಿಯರನ್ನು ನಂಬಿಸಲಾಗಿತ್ತು.

ಹುಡುಗಿಯರಿಗೆ ಮನವರಿಕೆ ಮಾಡಿಕೊಟ್ಟ ನಂತರ ಅವರ ಪೋಷಕರ ಬಳಿಯೂ ಮಾತನಾಡಿ ಅವರ ಹೆಣ್ಣು ಮಕ್ಕಳಿಗೆ ಕೆಲಸ ಸಿಗುತ್ತದೆ ಎಂದು ಹೇಳಿ ಅವರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿದ್ದರು. ಸುರೇಶ್ ಅಂತಹ ಹೆಣ್ಣುಮಕ್ಕಳನ್ನು ಸ್ಥಳೀಯ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುವ ಚಂದನಾ ಬಳಿ ಕಳುಹಿಸುತ್ತಿದ್ದ.

ಹೆಣ್ಣು ಮಕ್ಕಳನ್ನು ಹೆಲ್ತ್ ಸೆಂಟರಿನಲ್ಲಿ ಇರುವಂತೆ ಮಾಡಿ ಅವರಿಗೆ ನಿದ್ರೆ ಮಾತ್ರೆ ಬೆರೆಸಿದ ಪಾನೀಯ ಮತ್ತು ಆಹಾರ ನೀಡುತ್ತಿದ್ದಳು. ಹೀಗೆ ಸಂತ್ರಸ್ತರು ಪ್ರಜ್ಞಾಹೀನರಾದ ಮೇಲೆ ಚಂದನಾಳ ಪ್ರೇಮಿ ವಿನಯ್ ಅವರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ.

ಅವ್ಯವಹಾರದ ವಿಷಯ ತಿಳಿದ ಪೋಷಕರು ದೂರು ದಾಖಲಿಸಿದ್ದು, ಪೊಲೀಸರು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಹಗರಣ ಹೇಗೆ ಬೆಳಕಿಗೆ ಬಂತು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಮುಂದಿನ ತನಿಖೆ ನಡೆಯುತ್ತಿದೆ.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version