ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಎರಡು ಬಾರಿ ಡಿಗ್ರಿಯಲ್ಲಿ ಫೇಲ್‌, ಕೆಪಿಎಸ್ ಸಿ ಪರೀಕ್ಷೆ ಟಾಪ್‌ – CID ಶಾಕ್

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಎರಡು ಬಾರಿ ಡಿಗ್ರಿಯಲ್ಲಿ ಫೇಲ್‌, ಕೆಪಿಎಸ್ ಸಿ ಪರೀಕ್ಷೆ ಟಾಪ್‌ – CID ಶಾಕ್

ಬೆಂಗಳೂರು: ಪಶುವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯಲ್ಲಿ (KPSC) ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಿಐಡಿ (CID) ತನಿಖೆ ಮುಂದುವರಿದಿರುವ ನಡುವೆಯೇ, ಅಭ್ಯರ್ಥಿಯೊಬ್ಬರ ಶೈಕ್ಷಣಿಕ ದಾಖಲೆಗಳು ಹಲವು ಅನುಮಾನಗಳಿಗೆ ಕಾರಣವಾಗಿವೆ.ಪಶುವೈದ್ಯಕೀಯ ಪದವಿ ವ್ಯಾಸಂಗದ ವೇಳೆ ಎರಡು ಬಾರಿ ಅನುತ್ತೀರ್ಣರಾಗಿದ್ದ ಅಭ್ಯರ್ಥಿ, ನೇಮಕಾತಿ ಪರೀಕ್ಷೆಯಲ್ಲಿ ಬರೋಬ್ಬರಿ 600 ಅಂಕಗಳಿಗೆ 478 ಅಂಕ ಪಡೆದು ಟಾಪ್‌-2 ರ‍್ಯಾಂಕ್‌ ಪಡೆದಿರುವುದು ತನಿಖಾಧಿಕಾರಿಗಳ ಗಮನ ಸೆಳೆದಿದೆ.ತನಿಖೆಯ ಭಾಗವಾಗಿ ಪರಿಶೀಲಿಸಲಾಗಿರುವ ಅಭ್ಯರ್ಥಿ ಸುಗರೇಶ್ ಜಾಕ್ ಅವರ ಡಿಗ್ರಿ ಅಂಕಪಟ್ಟಿಯಲ್ಲಿ ಅವರು ಪದೇಪದೇ ಅನುತ್ತೀರ್ಣರಾಗಿರುವ ಮಾಹಿತಿ ಲಭ್ಯವಾಗಿದೆ ಎನ್ನಲಾಗಿದೆ. ಆದರೆ ಇದೇ ಅಭ್ಯರ್ಥಿ ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ 600ಕ್ಕೆ 478 ಅಂಕ ಗಳಿಸಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ.

ವಿಶೇಷವೆಂದರೆ, ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳೂ 350 ಅಂಕಗಳ ಗಡಿ ದಾಟಿಲ್ಲ ಎನ್ನಲಾಗುತ್ತಿದ್ದು, ಸುಗರೇಶ್ ಜಾಕ್‌ 478 ಅಂಕ ಗಳಿಸಿರುವುದು ತನಿಖಾಧಿಕಾರಿಗಳಿಗೆ ಅಚ್ಚರಿ ಮೂಡಿಸಿದೆ. ಸಾಮಾನ್ಯವಾಗಿ ಅತ್ಯಂತ ಸ್ಪರ್ಧಾತ್ಮಕವಾಗಿರುವ ನೇಮಕಾತಿ ಪರೀಕ್ಷೆಯಲ್ಲಿ ಇಷ್ಟು ಹೆಚ್ಚಿನ ಅಂಕ ಗಳಿಸಿರುವುದರ ಬಗ್ಗೆ ಸಿಐಡಿ ಅಧಿಕಾರಿಗಳು ವಿವಿಧ ಆಯಾಮಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.ಸುಗರೇಶ್ ಜಾಕ್ ಅವರ ಹಿಂದಿನ ಶೈಕ್ಷಣಿಕ ಸಾಧನೆ ಮತ್ತು ನೇಮಕಾತಿ ಪರೀಕ್ಷೆಯ ಫಲಿತಾಂಶದ ನಡುವಿನ ಭಾರೀ ವ್ಯತ್ಯಾಸವೇ ಇದೀಗ ತನಿಖೆಯ ಪ್ರಮುಖ ಅಂಶವಾಗಿದೆ. ಡಿಗ್ರಿ ವ್ಯಾಸಂಗದ ಸಂದರ್ಭದಲ್ಲಿ ಎರಡು ಬಾರಿ ಫೇಲ್‌ ಆಗಿದ್ದ ಅಭ್ಯರ್ಥಿ, ನೇಮಕಾತಿ ಪರೀಕ್ಷೆಯಲ್ಲಿ ಹೇಗೆ ಅಷ್ಟು ಹೆಚ್ಚಿನ ಅಂಕ ಗಳಿಸಿದರು ಎಂಬ ಪ್ರಶ್ನೆ ತನಿಖಾಧಿಕಾರಿಗಳ ಮುಂದಿದೆ.ಇನ್ನು ಈ ಪ್ರಕರಣದಲ್ಲಿ ಮತ್ತೊಂದು ಪ್ರಮುಖ ವಿಚಾರವೂ ಮುನ್ನೆಲೆಗೆ ಬಂದಿದೆ. ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದ ಶಿವಶಂಕರಪ್ಪ ಸಾಹುಕಾರ್‌ ಅವರೊಂದಿಗೆ ಸುಗರೇಶ್ ಜಾಕ್‌ ಸಂಬಂಧ ಹೊಂದಿದ್ದಾರೆ ಎನ್ನಲಾಗಿದ್ದು, ಈ ಸಂಬಂಧವೂ ತನಿಖೆಯ ವ್ಯಾಪ್ತಿಗೆ ಬಂದಿರುವ ಸಾಧ್ಯತೆ ಇದೆ. ಶಿವಶಂಕರಪ್ಪ ಸಾಹುಕಾರ್‌ ಅವರ ಪ್ರಭಾವ ಅಥವಾ ಕೃಪಾಕಟಾಕ್ಷದಿಂದ ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆದಿದೆಯೇ ಎಂಬ ಅನುಮಾನಗಳು ಕೇಳಿಬಂದಿವೆ.

ಆದರೆ ಈ ಆರೋಪಗಳು ಇನ್ನೂ ತನಿಖೆಯ ಹಂತದಲ್ಲಿದ್ದು, ಸಿಐಡಿ ತನಿಖೆಯಿಂದಲೇ ವಾಸ್ತವಾಂಶ ಹೊರಬರಬೇಕಿದೆ. ಅಭ್ಯರ್ಥಿಯ ಅಸಾಮಾನ್ಯ ಪರೀಕ್ಷಾ ಫಲಿತಾಂಶಕ್ಕೆ ಕಾರಣವೇನು, ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆದಿದೆಯೇ ಮತ್ತು ಸಂಬಂಧಿಕರ ಪ್ರಭಾವ ಬಳಕೆಯಾಗಿದೆಯೇ ಎಂಬ ಪ್ರಶ್ನೆಗಳಿಗೆ ತನಿಖೆಯ ಬಳಿಕ ಸ್ಪಷ್ಟ ಉತ್ತರ ಸಿಗುವ ನಿರೀಕ್ಷೆಯಿದೆ. ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮದ ಆರೋಪ ಈಗಾಗಲೇ ಗಂಭೀರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ, ಅಭ್ಯರ್ಥಿಗಳ ಶೈಕ್ಷಣಿಕ ದಾಖಲೆಗಳು, ಪರೀಕ್ಷಾ ಅಂಕಗಳು ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿನ ವಿವಿಧ ಹಂತಗಳನ್ನು ಸಿಐಡಿ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎನ್ನಲಾಗಿದೆ. ಸುಗರೇಶ್ ಜಾಕ್ ಪ್ರಕರಣದಲ್ಲಿನ ಈ ಅಂಕಗಳ ವ್ಯತ್ಯಾಸವೂ ತನಿಖೆಗೆ ಮತ್ತಷ್ಟು ಕುತೂಹಲ ಮೂಡಿಸಿದೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು