ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಜಾಗ ಕಬಳಿಕೆ ಕ್ರಮ ತೆಗೆದುಕೊಳ್ಳದಿದ್ರೆ ಸಾಮೂಹಿಕ ಆತ್ಮಹತ್ಯೆ- ರೈತರಿಂದ ಡಿಸಿಗೆ ಮನವಿ

ರ

ರಮೇಶ್‌ ಹಾಸನ್‌ • ರಾಜ್ಯ

• 2 ನಿಮಿಷದ ಓದು

ಜಾಗ ಕಬಳಿಕೆ ಕ್ರಮ ತೆಗೆದುಕೊಳ್ಳದಿದ್ರೆ ಸಾಮೂಹಿಕ ಆತ್ಮಹತ್ಯೆ- ರೈತರಿಂದ ಡಿಸಿಗೆ ಮನವಿ
filter: 0; fileterIntensity: 0.000000; filterMask: 0; captureOrientation: 0; hdrForward: 6; shaking: 0.092657; highlight: 1; algolist: 0; multi-frame: 1; brp_mask: 8; brp_del_th: 0.0000,0.0000; brp_del_sen: 0.0000,0.0000; delta:null; module: photo;hw-remosaic: false;touch: (-1.0, -1.0);sceneMode: 7864320;cct_value: 0;AI_Scene: (12, 0);aec_lux: 311.0;aec_lux_index: 0;albedo: ;confidence: ;motionLevel: -1;weatherinfo: null;temperature: 27;zeissColor: bright;


ಹಾಸನ : ಸಕಲೇಶಪುರ ತಾಲ್ಲೂಕು ಕಸಬಾ ವ್ಯಾಪ್ತಿಯ ರಸ್ತೆ ಅಗಲೀಕರಣಕ್ಕೆ ಬೇಕಾಗುವ ಸರ್ಕಾರಿ ಜಾಗವನ್ನು ಕಬಳಿಸುತ್ತಿರುವವರ ವಿರುದ್ಧ ಕಸಬಾ ವ್ಯಾಪ್ತಿಯ ಇನ್ಸೆಕ್ಟರ್ ರೆವಿನ್ಯೂ ಮತ್ತು ಸಕಲೇಶಪುರ ಉಪವಿಭಾಗಾಧಿಕಾರಿಗಳು ಕ್ರಮ ತೆಗೆದುಕೊಳ್ಳಲು ವಿಳಂಬವಾದರೆ ನೊಂದ ರೈತರು ಮತ್ತು ಸಾರ್ವಜನಿಕರು ನಿಮ್ಮ ಕಛೇರಿಯ ಮುಂದೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ರಾಜ್ಯ ರೈತ ಸಂಘದಿಂದ ಸೋಮವಾರದಂದು ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಿದರು.


ಇದೆ ವೇಳೆ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಹೆಚ್.ಬಿ. ಧರ್ಮರಾಜ್ ಮಾಧ್ಯಮದೊಂದಿಗೆ ಮಾತನಾಡಿ, ಸಕಲೇಶಪುರ ತಾಲ್ಲೂಕು ಕಸಬಾ ಹೋಬಳಿ, ಕಡಬನಹಳ್ಳಿ ಗ್ರಾಮದ ಸರ್ವೆ ನಂಬರ್ 14ರ ರಾಜ್ಯ ಹೆದ್ದಾರಿಯ ಬದಿಯ ರಸ್ತೆ ಅಗಲೀಕರಣಕ್ಕೆ ಬೇಕಾದ ಸರ್ಕಾರಿ ಜಾಗವನ್ನು ಚಂದ್ರೇಗೌಡ ಮತ್ತು ರವೀಂದ್ರ ಎಂಬ ಪ್ರಿಂಟಿಂಗ್ ಪ್ರೆಸ್ ಉದ್ಯಮ ನಡೆಸುವ ಅಪ್ಪ ಮಕ್ಕಳು ಇತ್ತೀಚಿನ ದಿನಗಳಲ್ಲಿ ಆಕ್ರಮವಾಗಿ ಒತ್ತುವರಿ ಮಾಡಿರುತ್ತಾರೆ. ಇದರಿಂದ ಸಾರ್ವಜನಿಕರಿಗೆ ಮತ್ತು ತರಿ ಜಮೀನಿಗೆ ಕೃಷಿ ಯಂತ್ರೋಪಕರಣಗಳನ್ನು ತೆಗೆದುಕೊಂಡು ಓಡಾಡುವ ರೈತರಿಗೆ ತೊಂದರೆ ಆಗಿದಿದ್ದಲ್ಲದೆ ರಸ್ತೆ ಆಗಲೀಕರಣ ಸಂದರ್ಭದಲ್ಲಿ ಸರ್ಕಾರಕ್ಕೆ ಸರ್ಕಾರದ ಆಸ್ತಿಪಾಸ್ತಿಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲೂ ಕೂಡ ತೊಂದರೆಯಾಗಿರುತ್ತದೆ ಎಂದು ದೂರಿದರು. ಇದಕ್ಕೆ ಜನವರಿಯಿಂದ ನಿರಂತರವಾಗಿ ತಶೀಲ್ದಾರರಿಗೆ ಮತ್ತು ಉಪ ವಿಭಾಗ ಅಧಿಕಾರಿಗಳಿಗೆ ನೊಂದ ರೈತರು ವಿವಿಧ ಸಂಘಟನೆಗಳ ಮುಖಾಂತರ ಮನವಿ ಸಲ್ಲಿಸಿದರು ಕೂಡ ಪ್ರಯೋಜನವಾಗಿಲ್ಲ ತಹಶೀಲ್ದಾರ್ ರವರು ಚಂದ್ರೇಗೌಡ ಅವರಿಗೆ ಒಂದು ನೋಟಿಸ್ ಜಾರಿ ಮಾಡಿರುತ್ತಾರೆ ಅಷ್ಟೇ ಉಪವಿಭಾಗಾಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗಲಿಲ್ಲ ಬದಲಾಗಿ ಹತ್ತಾರು ವರ್ಷಗಳ ಹಿಂದೆ ಮಂಜೂರಾದ ಭೂಮಿಯನ್ನು ಕಾಡುಪ್ರಾಣಿಗಳ ಹಾವಳಿಯ ನಡುವೆಯೂ ಕೂಡ ಬಡ ರೈತ ತಮ್ಮ ಕುಟುಂಬ ನಿರ್ವಹಣೆಗಾಗಿ ತನ್ನ ಬದುಕನ್ನು ಕಟ್ಟಿಕೊಂಡಿರುವ ಮಂಜೂರಾದ ಭೂಮಿಯನ್ನು ಇಲ್ಲಸಲ್ಲದ ಕಾರಣಗಳ ಹೇಳಿ ಮಂಜೂರಾತಿಯನ್ನು ರದ್ದುಪಡಿಸಿ ರೈತ ಕುಟುಂಬಗಳನ್ನು ಬೀದಿಗೆ ತಳ್ಳುವ ಪ್ರಯತ್ನವನ್ನು ಸಕಲೇಶಪುರ ವಿಭಾಗಾಧಿಕಾರಿಗಳು ಮಾಡಿರುತ್ತಾರೆ ಎಂದರು.

ತಹಶೀಲ್ದಾರ್ ಮಾಡಿರುವ ನೋಟಿಸ್ ಮೇರೆಗೆ ಕ್ರಮ ತೆಗೆದುಕೊಂಡು ಸರ್ಕಾರಿ ಆಸ್ತಿಪಾಸ್ತಿ ಉಳಿಸುವ ನಿಟ್ಟಿನಲ್ಲಿ ಮತ್ತು ರೈತರ ಹಿತದೃಷ್ಟಿ ಕಾಪಾಡುವಲ್ಲಿ ತನ್ನ ಕರ್ತವ್ಯವನ್ನು ನಿಭಾಯಿಸದೆ ಸರ್ಕಾರಕ್ಕೆ ಮತ್ತು ಬಡ ರೈತರಿಗೆ ಅನ್ಯಾಯವನ್ನು ಎಸೆಗುತ್ತಿರುವ ಕಸಬಾ ವ್ಯಾಪ್ತಿಯ ರೆವಿನ್ಯೂ ಇನ್ಸೆಪ್ಟರ್ ಅನ್ನು ಕೂಡಲೇ ಅಮಾನತ್ತಿಗೆ ಕ್ರಮ ತೆಗೆದುಕೊಂಡು ಸರ್ಕಾರಕ್ಕೆ ಮತ್ತು ರೈತರಿಗೆ ನ್ಯಾಯ ಕೊಟ್ಟು ತನ್ನ ಕರ್ತವ್ಯವನ್ನು ಸರಿಯಾಗಿ ನಿಭಾಯಿಸದೆ ತನ್ನ ಮನಸು ಇಚ್ಛೆ ಬಡ ರೈತರ ಮತ್ತು ಸಾರ್ವಜನಿಕರ ಮುಂದೆ ನಡೆದುಕೊಳ್ಳುವ ಪ್ರಸ್ತುತ ಸಕಲೇಶಪುರ ಉಪವಿಭಾಗಾಧಿಕಾರಿಗಳನ್ನು ಮುಂದೆ ಯಾವುದೇ ಸಾರ್ವಜನಿಕ ಮತ್ತು ರೈತರಿಗೆ ನ್ಯಾಯ ತೀರ್ಮಾನ ಕೊಡುವ ಹುದ್ದೆಗಳಿಗೆ ನೇಮಿಸಬಾರದೆಂದು ಸರ್ಕಾರಕ್ಕೆ ಮೇಲ್ಮನವಿ ಸಲ್ಲಿಸಬೇಕೆಂದು ಈ ಮೂಲಕ ತಮ್ಮಲ್ಲಿ ಕಳಕಳಿಯಿ ಮನವಿ ಮಾಡುವುದಾಗಿ ಹೇಳಿದರು. ಸಕಲೇಶಪುರ ತಾಲ್ಲೂಕು ಕಸಬಾ ಹೋಬಳಿ ವ್ಯಾಪ್ತಿಯ ರೆವಿನ್ಯೂ ಇನ್ಸೆಪೆಕ್ಟರ್ ಮತ್ತು ಉಪ ವಿಭಾಗಾಧಿಕಾರಿಗಳು ಮೇಲೆ ಕ್ರಮ ತೆಗೆದುಕೊಳ್ಳಲು ವಿಳಂಬವಾದರೆ ಸಕಲೇಶಪುರ ಕಸಬಾ ವ್ಯಾಪ್ತಿಯ ನೊಂದ ರೈತರು ಮತ್ತು ಸಾರ್ವಜನಿಕರು ನಿಮ್ಮ ಕಛೇರಿಯ ಮುಂದೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಈ ಮೂಲಕ ರೈತರ ತೀರ್ಮಾನವಾಗಿರುತ್ತದೆ. ಮುಂದಿನ ಪರಿಣಾಮಗಳಿಗೆ ಸರ್ಕಾರವೇ ನೇರ ಹೊಣೆಯಾಗಲಿದೆ ಎಂದು ಎಚ್ಚರಿಸಿ ಮನವಿ ಮಾಡಿದರು. ಇದೆ ವೇಳೆ ರೈತ ಸಂಘದ ತಾಲೂಕು ಅಧ್ಯಕ್ಷ ಪವನ್, ಉಪಾಧ್ಯಕ್ಷ ಕೃಷ್ಣಮೂರ್ತಿ, ಮಹೇಶ್, ನಾಗೇಶ್, ಕನ್ನಡ ಹೋರಾಟ ಸಂಘಟನೆಯ ನಾಗರಾಜು ಇತರರು ಉಪಸ್ಥಿತರಿದ್ದರು.

ವಿಷಯಗಳು: #news #peepalmedia
ರ

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version