ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮೇಕೆದಾಟು ವಿಳಂಬ ಹಿನ್ನೆಲೆ ಕೋಳಿ ಹಿಡದು – ರೈತರ ಪ್ರತಿಭಟನೆ

ರ

ರಮೇಶ್‌ ಹಾಸನ್‌ • ರಾಜ್ಯ

• 1 ನಿಮಿಷದ ಓದು

ಮೇಕೆದಾಟು ವಿಳಂಬ ಹಿನ್ನೆಲೆ ಕೋಳಿ ಹಿಡದು – ರೈತರ ಪ್ರತಿಭಟನೆ

ಬೆಂಗಳೂರು : ಮೇಕೆದಾಟು ಅಣೆಕಟ್ಟು (Mekedatu project) ನಿರ್ಮಾಣ ಯೋಜನೆಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ, ಕರ್ನಾಟಕ ರಾಜ್ಯ ರೈತ ಹಿತರಕ್ಷಣಾ ಸಂಘದ ನೇತೃತ್ವದಲ್ಲಿ ರೈತರು (Farmers protest)  ಕೋಳಿ ಹಾಗೂ ಮಸಾಲೆ ಹಿಡಿದು ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕು ವ್ಯಾಪ್ತಿಯ ಸೋಮನಹಳ್ಳಿ ಗ್ರಾಮದಲ್ಲಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ರೈತ ಮುಖಂಡರು, “ಮೇಕೆದಾಟು ಅಣೆಕಟ್ಟು ಕಟ್ಟುತ್ತೇವೆ ಎಂದು ಹೇಳಿಯೇ ಅಧಿಕಾರಕ್ಕೆ ಬಂದವರು, ಈಗ ಯೋಜನೆಯ ಜಾರಿಗೆ ಕ್ರಮ ಕೈಗೊಳ್ಳದೆ ಮೀನ ಮೇಷ ಎಣಿಸುತ್ತಿದ್ದಾರೆ. ಈಗಾಗಲೇ ಸರ್ಕಾರದ 3 ವರ್ಷಗಳ ಅವಧಿ ಪೂರ್ಣಗೊಂಡಿದ್ದು, ಉಳಿದ 2 ವರ್ಷಗಳಲ್ಲಿ ಅಣೆಕಟ್ಟು ನಿರ್ಮಿಸುತ್ತಾರೋ ಇಲ್ಲವೋ ಎಂಬ ದೊಡ್ಡ ಆತಂಕ ರೈತರಲ್ಲಿ ಮೂಡಿದೆ” ಎಂದು ಕಳವಳ ವ್ಯಕ್ತಪಡಿಸಿದರು.

ಕೋಳಿ ಮತ್ತು ಮಸಾಲೆ ಪ್ರದರ್ಶಿಸಿ ಪ್ರತಿಭಟನೆ ಏಕೆ?

ಇತ್ತೀಚಿನ ದಿನಗಳಲ್ಲಿ ನಡೆದ ಬೆಳವಣಿಗೆಯು ರಾಜ್ಯದ ಪರವಾಗಿದ್ದು ಸುಪ್ರೀಂ ಕೋರ್ಟ್ ಹಾಗೂ ಕೇಂದ್ರ ಸರ್ಕಾರ ಅಣೆಕಟ್ಟು ಕಟ್ಟಲು ಹಸಿರು ನಿಶಾನೆ ತೋರಿವೆ. ಇಷ್ಟಾದರೂ ಮೇಕೆದಾಟು ಅಣೆಕಟ್ಟು ಕಟ್ಟಲು ಮುಂದಾಗದ ರಾಜ್ಯ ಸರ್ಕಾರ ಕಾಲಹರಣ ಮಾಡಿದ್ದಾರೆ. ಯಾವುದೇ ಯೋಜನೆ ಜಾರಿಗೆ ಇಚ್ಛಾಶಕ್ತಿ ತೋರದ ರಾಜ್ಯ ಸರ್ಕಾರವು ಸಮಸ್ಯೆಗೆ ಮಸಾಲೆಯನ್ನೇ ಅರೆಯುತ್ತಿಲ್ಲ. ಈ ಕಾರಣದಿಂದಲೇ ಪ್ರತಿಭಟನೆಯಲ್ಲಿ ಕೋಳಿಗಳನ್ನು ಹಾಗೂ ಮಸಾಲೆಯನ್ನು ತೋರಿಸಿ ರಾಜ್ಯ ಸರ್ಕಾರದ ಗಮನ ಸೆಳೆಯಲಾಯಿತು ಎಂದು ತಿಳಿಸಿದರು.

ನಮ್ಮಲ್ಲೇ ಜಲವನ್ನು ಸಂರಕ್ಷಿಸಬೇಕು. ಸಮುದ್ರಕ್ಕೆ ಪೋಲಾಗಿ ಹರಿದು ಹೋಗುವ ನೀರನ್ನು ಶೇಖರಣೆ ಮಾಡಿ ಅಣೆಕಟ್ಟನ್ನು ನಿರ್ಮಿಸಲು ತಮಿಳುನಾಡಿನ ಅನುಮತಿ ಬೇಕಾಗಿಲ್ಲ ಎಂಬುದನ್ನು ಸರ್ಕಾರ ತೋರಿಸಬೇಕು ಎಂಬುದು ನಮ್ಮ ಒತ್ತಾಯ ಎಂದಿದ್ದಾರೆ.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಹಿತರಕ್ಷಣಾ ಸಂಘದ ರಾಜ್ಯಾಧ್ಯಕ್ಷ ನದೀಮ್ ಪಾಷ ಪಟ್ಟರೆಡ್ಡಿಪಾಳ್ಯ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಹೊಸದುರ್ಗ, ಮುಖಂಡರಾದ ಶ್ರೀನಿವಾಸ್‌  ಇನ್ನಿತರರು ಪಾಲ್ಗೊಂಡಿದ್ದರು.

ವಿಷಯಗಳು: #karnataka #news
ರ

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version