ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಳಪೆ ಮೊಟ್ಟೆ ಪೂರೈಕೆ ಮಾಡಿದರೆ ಕಪ್ಪು ಪಟ್ಟಿಗೆ: ಲಕ್ಷ್ಮೀ ಹೆಬ್ಬಾಳ್ಕರ್

P

Peepal Media Desk • ರಾಜ್ಯ

• 1 ನಿಮಿಷದ ಓದು

ಕಳಪೆ ಮೊಟ್ಟೆ ಪೂರೈಕೆ ಮಾಡಿದರೆ ಕಪ್ಪು ಪಟ್ಟಿಗೆ: ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಕಳಪೆ ಮೊಟ್ಟೆ ಪೂರೈಕೆ ಕುರಿತು ಮಾಧ್ಯಮಗಳ ವರದಿಯ ಹಿನ್ನೆಲೆಯಲ್ಲಿ ಇವತ್ತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು. ಯಾರು ಕಳಪೆ ಮೊಟ್ಟೆ ಪೂರೈಕೆ ಮಾಡುತ್ತಾರೆ ಅವರನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು. ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದು , ಸಪ್ಲೈ ಲಿಸ್ಟ್ ನಿಂದಲೂ ಕೈ ಬಿಡುವಂತೆ ಸೂಚನೆ ನೀಡಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.  

“ಖರೀದಿ ವಿಕೇಂದ್ರೀಕರಣ ಮಾಡಿದ ಕಾರಣದಿಂದ ಗ್ರಾಮ ಪಂಚಾಯತಿ ಮಟ್ಟದಲ್ಲೂ ಮೊಟ್ಟೆ ಖರೀದಿಯಾಗುತ್ತಿದೆ. ಯಾವುದೇ ಕಂಟ್ರೋಲ್ ಇಲ್ಲದೆ ಖರೀದಿ ನಡೆಯುತ್ತಿದೆ. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು ಎಂಬುದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮುಖ್ಯ ಉದ್ದೇಶವಾಗಿದೆ” ಎಂದು ಅವರು ಹೇಳಿದ್ದಾರೆ.

“ಕಳಪೆ ಮೊಟ್ಟೆ ವಿತರಣೆ ವಿಚಾರ ಕ್ಯಾಬಿನೆಟ್ ನಲ್ಲಿ ಪ್ರಸ್ತಾಪ ಮಾಡುತ್ತೇನೆ. ವಿಕೇಂದ್ರೀಕರಣ ಮಾದರಿಯ ಖರೀದಿಯಿಂದ ಪ್ರಾಮಾಣಿಕ ಪೂರೈಕೆ ಆಗ್ತಿಲ್ಲ. ಈ ನಿಟ್ಟಿನಲ್ಲಿ ಖರೀದಿ ವ್ಯವಸ್ಥೆ ಕೇಂದ್ರೀಕರಣ ಮಾಡಲು ಕ್ರಮವಹಿಸಲಾಗುವುದು. ಜತೆಗೆ ಟಾಸ್ಕ್ ಫೋರ್ಸ್ ರಚನೆ ಮಾಡಿ ಮೊಟ್ಟೆ ವಿತರಣೆ ಕುರಿತು ನಿಗಾವಹಿಸುವುದಾಗಿ ತಿಳಿಸಿದೆ. ಸರ್ಕಾರದ ಸಂಸ್ಥೆಗಳಿಂದ ಖರೀದಿಗೆ ಚಿಂತನೆ ನಡೆಯುತ್ತಿದ್ದು, ಎಲ್ಲಾ ಪ್ರಸ್ತಾಪಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು.” ಎಂದು ಅವರು ಹೇಳಿದರು.

ಕಳಪೆ ಮೊಟ್ಟೆ ಪೂರೈಕೆಯ ಕುರಿತು ಮಡಿಕೇರಿ, ಹಾಸನ ಸೇರಿದಂತೆ ಹಲವು ಜಿಲ್ಲೆಗಳಿಂದ ದೂರು ಬಂದ ಹಿನ್ನೆಲೆಯಲ್ಲಿ ಸಚಿವರು ಮೇಲಿನ ಹೇಳಿಕೆ ನೀಡಿದ್ದಾರೆ.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version