ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಚಂದ್ರಶೇಖರ ಸ್ವಾಮೀಜಿಯವರ ಮೇಲೆ ಎಫ್ ಐ ಆರ್: ಕಾನೂನಿನ ಚೌಕಟ್ಟಿನೊಳಗೆ ಬಂದರೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಚಂದ್ರಶೇಖರ ಸ್ವಾಮೀಜಿಯವರ ಮೇಲೆ ಎಫ್ ಐ ಆರ್: ಕಾನೂನಿನ ಚೌಕಟ್ಟಿನೊಳಗೆ ಬಂದರೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹುಬ್ಬಳ್ಳಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು. ಜೊತೆಯಲ್ಲಿ ಸಚಿವ ಈಶ್ವರ ಖಂಡ್ರೆ ಸೇರಿದಂತೆ ಹಲವು ನಾಯಕರಿದ್ದರು

ಬೆಂಗಳೂರು, ಡಿಸೆಂಬರ್ 1: ಚಂದ್ರಶೇಖರ ಸ್ವಾಮೀಜಿ ಅವರ ಪ್ರಕರಣದಲ್ಲಿ ಪೊಲೀಸರು ಕಾನೂನಿನ ದೃಷ್ಟಿಯಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತಾರೆ. ಕಾನೂನಿನ ಚೌಕಟ್ಟಿನೊಳಗೆ ಬಂದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಇಲ್ಲವಾದರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಅವರು ಇಂದು ಕೆಂಗಲ್ ಹನುಮಂತಯ್ಯ ಅವರ ಪುಣ್ಯ ಸ್ಮರಣೆಯ ಪ್ರಯುಕ್ತ ಅವರ ಪ್ರತಿಮೆಗೆ ಮಾಪಾರ್ಪಣೆ ಮಾಡಿದ ಬಳಿಕ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.

ಜೆಡಿಎಸ್ ನಿಂದ ನನ್ನನ್ನು ಉಚ್ಛಾಟಿಸಲಾಯಿತು. ನಾನು ಬಿಡಲಿಲ್ಲ

ಜೆ ಡಿ ಎಸ್ ಬಿಡುವಾಗ ಮಾಡಿದ್ದ ನಾಟಕವನ್ನೇ ಈಗ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಜೆಡಿಎಸ್ ನಿಂದ ನನ್ನನ್ನು ಉಚ್ಛಾಟಿಸಲಾಯಿತು. ನಾನು ಬಿಡಲಿಲ್ಲ ಎಂದರು. ಅವರು ಹೇಳಿದ್ದನ್ನು ಮಾಧ್ಯಮಗಳು ಹೇಳಿದ್ದಾದರೆ ಮಾಧ್ಯಮಗಳು ಏಕಿರಬೇಕು ಎಂದು ಸಿಎಂ ಖಾರವಾಗಿ ಮಾಧ್ಯಮದವರನ್ನು ಪ್ರಶ್ನಿಸಿದರು.

ರಾಜ್ಯದ ಜನರಿಗೆ ಕೃತಜ್ಞತೆ ಹೇಳಲು ಸಮಾವೇಶ

ನಾನು ಪಕ್ಷವನ್ನು ಬಿಡಲಿಲ್ಲ. ನನ್ನನ್ನು ದೇವೇಗೌಡರು ಉಚ್ಚಾಟಿಸಿದರು. ನಂತರ ನಾನು ಬೇರೆ ದಾರಿ ಇಲ್ಲದೆ ಅಹಿಂದ ಸಮಾವೇಶ ನಡೆಸಿದೆ, ಹಾಸನದಲ್ಲಿಯೂ ಸಮಾವೇಶ ಮಾಡಿದ್ದೆ . ಈಗ ಇಡೀ ರಾಜ್ಯದ ಜನರಿಗೆ ಕೃತಜ್ಞತೆ ಹೇಳಲು ಕಾಂಗ್ರೆಸ್ ಪಕ್ಷ ಮತ್ತು ಸ್ವಾಭಿಮಾನಿಗಳ ಒಕ್ಕೂಟದಿಂದ ಸಮಾವೇಶ ಏರ್ಪಡಿಸಲಾಗಿದೆ. ಕಾಂಗ್ರೆಸ್ ಪಕ್ಷ ಮತ್ತು ಸ್ವಾಭಿಮಾನಿಗಳ ಜಂಟಿ ಆಶ್ರಯದಲ್ಲಿ ನಡೆಯುತ್ತಿದೆ ಎಂದು ತಿಳಿಸಿದರು. ಇದಕ್ಕೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಲಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನೂ ಆಹ್ವಾನಿಸಲಾಗಿದೆ. ಪಕ್ಷವು ಇದರಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದೆ ಎಂದರು.

ಜೆಡಿಎಸ್ ಪಕ್ಷ ವನ್ನು ಕಟ್ಟಿದವರು ನಾವು. ಜೆಡಿಎಸ್ ಈಗ ಜಾತ್ಯಾತೀತವಾಗಿ ಉಳಿದಿದೆಯೇ ? ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಕೋಮುವಾದಿಗಳ ಜೊತೆಗೆ ಸೇರಿದ ಮೇಲೆ ಯಾವ ಸೆಕ್ಯುಲರ್ ಆಗಿದೆ ? ಸಂವಿಧಾನದಲ್ಲಿ ಜಾತ್ಯಾತೀತ, ಸಮಾಜವಾದಿ ಎಂದು ಸೇರ್ಪಡೆಯಾಗಿದೆ. ಸರ್ವೋಚ್ಚ ನ್ಯಾಯಾಲಯವೂ ಜಾತ್ಯಾತೀತ ಇರಲೇಬೇಕೆಂದು ಹೇಳಿದ್ದಾರೆ. ಜೆಡಿಎಸ್ ನವರಿಗೆ ಪಕ್ಷ ಯಾವ ಹಿನ್ನೆಲೆಯಲ್ಲಿ ಕಟ್ಟಲಾಗಿದೆ ಎಂದು ಗೊತ್ತಿಲ್ಲ. ಪಕ್ಷ ರಚನೆಗೊಂಡಾಗ ಕುಮಾರಸ್ವಾಮಿ ಇರಲಿಲ್ಲ . ನಾನು ದೇವೇಗೌಡ, ಇಬ್ರಾಹಿಂ, ಸತೀಶ್ ಜಾರಕಿಹೊಳಿ, ಮಹದೇವಪ್ಪ, ವೆಂಕಟೇಶ್, ಲಕ್ಷ್ಮೀ ಸಾಗರ್ ಸೇರಿ ಆಗಿದ್ದು. ದೇವೇಗೌಡರು ರಾಷ್ಟ್ರೀಯ ಅಧ್ಯಕ್ಷರಾದರು, ನಾನು ರಾಜ್ಯಾಧ್ಯಕ್ಷನಾದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು