ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕೋಮು ಸಂಘರ್ಷ ತಡೆಯಲು ಪ್ರಥಮ ಹೆಜ್ಜೆ; ಅಡ್ಡಿಪಡಿಸಿದರೆ ಮುಲಾಜಿಲ್ಲದೆ ಕ್ರಮ: ದಕ್ಷಿಣ ಕನ್ನಡ ಎಸ್ಪಿ ಕೆ ಅರುಣ್

PPeepal Media Desk

Peepal Media Desk • ರಾಜ್ಯ

• 1 ನಿಮಿಷದ ಓದು

ಕೋಮು ಸಂಘರ್ಷ ತಡೆಯಲು ಪ್ರಥಮ ಹೆಜ್ಜೆ; ಅಡ್ಡಿಪಡಿಸಿದರೆ ಮುಲಾಜಿಲ್ಲದೆ ಕ್ರಮ: ದಕ್ಷಿಣ ಕನ್ನಡ ಎಸ್ಪಿ ಕೆ ಅರುಣ್

ಕಳೆದ ಹತ್ತು ವರ್ಷಗಳ ಈಚೆಗೆ ನಡೆದಿರುವ ಕೋಮು ಸಂಬಂಧಿತ ಹತ್ಯೆಗಳ ಬಗ್ಗೆ ಅವಲೋಕಿಸಿದಾಗ ಆರೋಪಿಗಳು ಕೋಮುವಾದಿ ಸಂಘಟನೆಗಳ ಸಂಪರ್ಕದಲ್ಲಿ ಇರುವುದು ಕಂಡುಬಂದಿದೆ. ಈ ಸಂಬಂಧ ಆರೋಪಿಗಳು ಮತ್ತು ಘಟನೆಗೆ ಸಂಬಂಧಿಸಿದವರ ದೈನಂದಿನ ಚಟುವಟಿಕೆ ಬಗ್ಗೆ ಗಮನವಿಡಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಈ ಹಂತದಲ್ಲಿ ನಮ್ಮ ಕರ್ತವ್ಯಕ್ಕೆ ಯಾರೇ ಅಡ್ಡಿಪಡಿಸಿದರೂ ಮುಲಾಜಿಲ್ಲದೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಎಸ್ಪಿ ಕೆ ಅರುಣ್ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡುಬ ಪೊಲೀಸ್ ಠಾಣೆಯಲ್ಲಿ ನಡೆದ ಪ್ರತಿಭಟನೆ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪೊಲೀಸ್ ವರಿಷ್ಠಾಧಿಕಾರಿ ಕೆ ಅರುಣ್, ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಕಳೆದ ಒಂದು ತಿಂಗಳಿನಿಂದ ಕಾನೂನು ಸುವ್ಯವಸ್ಥೆ ತೀರಾ ಹದಗೆಟ್ಟಿದೆ. ವಿಶೇಷವಾಗಿ ಕೋಮು ಸಂಘರ್ಷದ ಹಿನ್ನೆಲೆಯಲ್ಲಿ ಹೆಚ್ಚು ಗುಂಪು ಹಲ್ಲೆ, ಹತ್ಯೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಕೋಮು ಸಂಬಂಧಿತ ಗಲಭೆಗಳಲ್ಲಿ ಭಾಗಿಯಾಗುವವರ ದೈನಂದಿನ ಚಟುವಟಿಕೆಗಳು, ಅವರು ಎಲ್ಲಿರುತ್ತಾರೆ, ಅವರ ಚಲನವಲನಗಳೇನು ಎಂಬುದಕ್ಕೆ ಸಂಬಂಧಿಸಿದಂತೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಈ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿ ಕೆಲವರು ಕಡಬ ಪೊಲೀಸ್ ಠಾಣೆ ಮುಂದೆ ಅಕ್ರಮವಾಗಿ ಗುಂಪು ಸೇರಿ ಪ್ರತಿಭಟನೆ ಮಾಡಿದ್ದಾರೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು.

ಕಡಬ ಠಾಣೆ ಮುಂದೆ ಪ್ರತಿಭಟನೆ ನಡೆಸಿದವರು ಅವರ ಕುಟುಂಬ ಸದಸ್ಯರನ್ನೂ ಕರೆತಂದು ಪ್ರತಿಭಟಿಸುವುದಾಗಿ ಹೇಳಿದ್ದಾರೆ. ಹಾಗೆ ಮಾಡಿದರೆ ಕುಟುಂಬ ಸದಸ್ಯರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದ್ದಾರೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು