ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪ್ರತಿ ವರ್ಷ ಸಾಲು ಮರದ ತಿಮ್ಮಕ್ಕನವರ ಹೆಸರಿನಲ್ಲಿ ಐದು ಪರಿಸರವಾದಿಗಳಿಗೆ ಪ್ರಶಸ್ತಿ: ಮುಖ್ಯಮಂತ್ರಿ ಸಿದ್ದರಾಮಯ್ಯ

PPeepal Media

Peepal Media ರಾಜ್ಯ

• 2 ನಿಮಿಷದ ಓದು

ಪ್ರತಿ ವರ್ಷ ಸಾಲು ಮರದ ತಿಮ್ಮಕ್ಕನವರ ಹೆಸರಿನಲ್ಲಿ ಐದು ಪರಿಸರವಾದಿಗಳಿಗೆ ಪ್ರಶಸ್ತಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನವೆಂಬರ್ 19: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಒಂದು ಕೋಟಿ ದತ್ತಿ ನಿಧಿಯನ್ನು ಸ್ಥಾಪಿಸಿ ಠೇವಣಿ ಇರುವ ಹಣದ ಬಡ್ಡಿಯಲ್ಲಿ ಪ್ರತಿ ವರ್ಷವೂ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಹಾಗೂ ಕನಿಷ್ಠ ಐದು ಪರಿಸರವಾದಿಗಳಿಗೆ ತಿಮ್ಮಕ್ಕನವರ ಹೆಸರಿನಲ್ಲಿ ಪ್ರಶಸ್ತಿಯನ್ನು ಪ್ರತಿ ವರ್ಷ ಕೊಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರುಇಂದು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಇವರ ವತಿಯಿಂದ ಆಯೋಜಿಸಲಾಗಿದ್ದ ಸುವರ್ಣ ಮಹೋತ್ಸವ -2025 ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 50 ವರ್ಷಗಳ ಸುವರ್ಣ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಪರಿಸರ ಸಂರಕ್ಷಣೆ ಕೇವಲ ಸರ್ಕಾರದ ಜವಾಬ್ದಾರಿಯಲ್ಲ

ಇಂದು ಮಾಜಿ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರ ಜನ್ಮದಿನ. 1974ರ ಇಂದಿನ ದಿನದಂದು ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾಪಿತವಾಯಿತು. ಶ್ರೀಮತಿ ಇಂದಿರಾಗಾಂಧಿಯವರು ಪರಿಸರ ಮತ್ತು ಅರಣ್ಯ ರಕ್ಷಣೆಗೆ ಹಲವು ಪ್ರಮುಖ ಕಾಯ್ದೆಗಳನ್ನು ಜಾರಿಗೆ ತಂದಿದ್ದರು. ಪರಿಸರ ಸಂರಕ್ಷಣೆಯ ಜವಾಬ್ದಾರಿ ಕೇವಲ ಸರ್ಕಾರದ ಮೇಲಿಲ್ಲ. ಸಾರ್ವಜನಿಕರು ಪರಿಸರ ಸಂರಕ್ಷಣೆಯಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳಬೇಕು. ಭೂಮಿಯ ಮೇಲಿನ ಜೀವಸಂಕುಲಕ್ಕೆ ಉತ್ತಮ ಪರಿಸರದಲ್ಲಿ ಬದುಕಲು ಅವಶ್ಯ. ಮಾಲಿನ್ಯ ರಹಿತ ಪರಿಸರವನ್ನು ನಿರ್ಮಿಸುವುದು ಅತ್ಯಂತ ಅವಶ್ಯವಾಗಿದೆ. ನಾವು ಉಸಿರಾಡುವ ಗಾಳಿ, ನೀರು ಹಾಗೂ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಅಗತ್ಯ. ಕೇಂದ್ರದ ವರದಿಯ ಪ್ರಕಾರ ದೇಶದ ಹಲವು ನಗರಗಳು ಮಾಲಿನ್ಯದಿಂದ ಕೂಡಿವೆ. ಈ ಪಟ್ಟಿಯಲ್ಲಿ ಬೆಂಗಳೂರು , ದಾವಣಗೆರೆ, ಕಲ್ಬುರ್ಗಿ ನಗರವೂ ಸೇರಿರುವುದು ಆತಂಕಕಾರಿ ವಿಷಯ. ನಮ್ಮ ರಾಜ್ಯವನ್ನು ವಾಸಯೋಗ್ಯವಾಗಿಸಲು , ಜನರೆಲ್ಲರೂ ಪರಿಸರ ಬಗ್ಗೆ ಕಾಳಜಿಯನ್ನು ಬೆಳೆಸಿಕೊಳ್ಳಬೇಕು ಎಂದರು.

ಜನ ಸರ್ಕಾರದ ಜೊತೆ ಕೈಜೋಡಿಸಿದಾಗ ಮಾತ್ರ 2030 ರ ಹೊತ್ತಿಗೆ ಬೆಂಗಳೂರನ್ನು ಪ್ಲಾಸ್ಟಿಕ್ ಮುಕ್ತ ನಗರವಾಗಿಸಲು ಸಾಧ್ಯ

ಬೆಂಗಳೂರು ನಗರ ಒಂದರಲ್ಲೇ 900 ಟನ್ ಪ್ಲಾಸ್ಟಿಕ್ ಉತ್ಪಾದನೆಯಾಗುತ್ತದೆ. ಇದನ್ನು ಜನ ಅರ್ಥಮಾಡಿಕೊಳ್ಳದೇ ಹೋದರೆ ಪ್ಲಾಸ್ಟಿಕ್ ಮುಕ್ತ ನಗರವಾಗಲು ಸಾಧ್ಯವಿಲ್ಲ ಪರಿಸರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿ, ಸರ್ಕಾರದ ಜೊತೆ ಕೈಜೋಡಿಸಿದಾಗ ಮಾತ್ರ 2030 ರ ಹೊತ್ತಿಗೆ ಬೆಂಗಳೂರನ್ನು ಪ್ಲಾಸ್ಟಿಕ್ ಮುಕ್ತ ನಗರವಾಗಿಸಲು ಸಾಧ್ಯ ಎಂದರು.

ಅತಿ ಹೆಚ್ಚು ಮಾಲಿನ್ಯ ಹೊಂದಿರುವ ನಗರಗಳ ಪಟ್ಟಿಯಲ್ಲಿ ರಾಜ್ಯದ ನಾಲ್ಕು ಜಿಲ್ಲೆಗಳು

ಕೇಂದ್ರದ ವರದಿಯ ಪ್ರಕಾರ 131 ನಗರಗಳು ಮಾಲಿನ್ಯದಿಂದ ಕೂಡಿದ್ದು, ನಿಗದಿತ ಮಟ್ಟಕ್ಕಿಂತಲೂ ಹೆಚ್ಚಿದೆ. ಅದರಲ್ಲಿ ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ದಾವಣಗೆರೆ ಮತ್ತು ಕಲಬುರಗಿ ಜಿಲ್ಲೆಗಳು ಸೇರಿವೆ. ಇದು ಆತಂಕಕಾರಿ ವಿಷಯ. ಬೆಂಗಳೂರಿನಲ್ಲಿ ವಾಸ ಮಾಡಲು ಸಾಧ್ಯವಾಗದಂತಹ ಪರಿಸ್ಥಿತಿ ಮುಂದಿನ ದಿನಗಳಲ್ಲಿ ನಿರ್ಮಾಣವಾಗುವ ಸಾಧ್ಯತೆ ಇದೆ. ಅದಕ್ಕಾಗಿ ಎಲ್ಲರೂ ಪರಿಸರದ ಬಗ್ಗೆ ಪ್ರೀತಿಯನ್ನು ಬೆಳೆಸಿಕೊಳ್ಳಬೇಕು. ಸಾಲು ಮರದ ತಿಮ್ಮಕ್ಕ ಇದಕ್ಕೆ ಶ್ರೇಷ್ಠ ಉದಾಹರಣೆ ಎಂದರು. ಇತ್ತೀಚೆಗೆ ನಿಧನರಾದ ಅವರು ಬಹಳಷ್ಟು ಮರಗಿಡಗಳನ್ನು ತಮ್ಮ ಮಕ್ಕಳಂತೆ ಬೆಳೆಸುವ ಪ್ರವೃತ್ತಿಯನ್ನು ಬೆಳೆಸಿಕೊಂಡಿದ್ದರು. ಪ್ರತಿಯೊಬ್ಬರೂ ಸಾಲಮರದ ತಿಮ್ಮಕ್ಕನವರಂತೆ ಆಗಬೇಕು ಎನ್ನುವ ಆಶಯ ನಮ್ಮದು ಎಂದರು.

ಬೆಂಗಳೂರು ಪ್ಲಾಸ್ಟಿಕ್ ಮತ್ತು ಕಸ ಮುಕ್ತ ನಗರವಾಗಬೇಕು

ಬೆಂಗಳೂರು ಗಾರ್ಬೇಜ್ ನಗರ ಎಂಬ ಟೀಕೆಗೆ ನಗರ ಗುರಿಯಾಗುತ್ತಿದ್ದು,ಬೆಂಗಳೂರನ್ನು ಗಾರ್ಬೇಜ್ ನಗರವಾಗಿಸುವುದು ನಮ್ಮ ಉದ್ದೇಶವಲ್ಲ. ಪ್ಲಾಸ್ಟಿಕ್ ಮತ್ತು ಕಸ ಮುಕ್ತ ನಗರವಾಗಿಸಬೇಕು ಎನ್ನುವುದು ಸರ್ಕಾರದ ಉದ್ದೇಶ. ಜನರೂ ಹಸಿ ಮತ್ತು ಒಣ ತ್ಯಾಜ್ಯವನ್ನು ಬೇರ್ಪಡಿಸಬೇಕು ಎಂದು ಮನವಿ ಮಾಡಿದರು. ಕೈಗಾರಿಕೋದ್ಯಮಿಗಳು ತ್ಯಾಜ್ಯವನ್ನು ಸಾರ್ವಜನಿಕರಿಗೆ, ಸಮಾಜಕ್ಕೆ ಹಾಗೂ ಪರಿಸರಕ್ಕೆ ಹಾನಿಯಾಗದಂತೆ ನಿರ್ವಹಿಸುವುದು ಕೈಗಾರಿಕೋದ್ಯಮಿಗಳ ಜವಾಬ್ದಾರಿ ಎಂದರು.

ನಿರುದ್ಯೋಗದ ಸಮಸ್ಯೆ ಬಗೆಹರಿಸಲು ಕೈಗಾರಿಕೆಗಳು ಅಗತ್ಯ. ಆದರೆ ಪರಿಸರ ಮಾಲಿನ್ಯ ಉಂಟಾಗದಂತೆ ಎಚ್ಚರ ವಹಿಸುವುದು ಅವಶ್ಯಕ . ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯಲ್ಲಿ ತೊಡಗಿ ಇತರರಿಗೆ ಮಾದರಿಯಾಗಬೇಕು. ತಿಮ್ಮಕ್ಕ ಪರಿಸರವಾದಿಯಾಗಿದ್ದರಿಂದ ನಾವು ಅವರನ್ನು ನೆನೆಸುತ್ತಿದ್ದೇವೆ. ವಿದ್ಯಾರ್ಥಿಗಳು ಪ್ರತಿ ವರ್ಷ ಇಂಥ ಸಮಾರಂಭಗಳನ್ನು ಆಯೋಜಿಸಿ ಜಾಗೃತಿ ಉಂಟುಮಾಡಬೇಕು ಎಂದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು