ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರಲ್ಲಿ ವಲ್ಲಭಭಾಯಿ ಪಟೇಲರು ಅಗ್ರಗಣ್ಯರು | ಇಂದಿರಾ ಗಾಂಧಿಯವರ ಆದರ್ಶಗಳನ್ನು ಪಾಲಿಸುವುದೇ ಅವರಿಗೆ ಸಲ್ಲಿಸುವ ಗೌರವ: ಸಿಎಂ ಸಿದ್ದರಾಮಯ್ಯ

PPeepal Media

Peepal Media ರಾಜ್ಯ

• 2 ನಿಮಿಷದ ಓದು

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರಲ್ಲಿ ವಲ್ಲಭಭಾಯಿ ಪಟೇಲರು ಅಗ್ರಗಣ್ಯರು | ಇಂದಿರಾ ಗಾಂಧಿಯವರ ಆದರ್ಶಗಳನ್ನು ಪಾಲಿಸುವುದೇ ಅವರಿಗೆ ಸಲ್ಲಿಸುವ ಗೌರವ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಅಕ್ಟೋಬರ್ 31: . ಇಂದಿರಾ ಗಾಂಧಿಯವರು ಹುತಾತ್ಮರಾಗಿ ಅವರ ಆದರ್ಶಗಳನ್ನು ಬಿಟ್ಟು ಹೋಗಿದ್ದಾರೆ. ಅವರ ಆದರ್ಶಗಳನ್ನು ಪಾಲಿಸುವುದೇ ನಾವು ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಧಾನಿ ದಿವಂಗತ ಶ್ರೀಮತಿ ಇಂದಿರಾ ಗಾಂಧಿಯವರ ಪುಣ್ಯಸ್ಮರಣೆ ಹಾಗೂ ದಿವಂಗತ ಸರ್ದಾರ ವಲ್ಲಭಬಾಯಿ ಪಟೇಲ್ ಅವರ 150ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ದಿಟ್ಟ ಮಹಿಳೆಯಾಗಿದ್ದು, ಅವರನ್ನು ಉಕ್ಕಿನ ಮಹಿಳೆ ಎಂದು ಕರೆಯಲಾಗುತ್ತಿತ್ತು. ಬಾಂಗ್ಲಾದೇಶದ ವಿಮೋಚನಾ ಸಂದರ್ಭದಲ್ಲಿ ವಾಜಪೇಯಿಯವರು ದುರ್ಗೆಯೆಂದು ಇಂದಿರಾ ಅವರನ್ನು ಸಂಭೋಧಿಸಿದ್ದರು. ಪಾಕಿಸ್ತಾನವನ್ನು ಸದೆಬಡೆದು ಬಾಂಗ್ಲಾದೇಶವನ್ನು ವಿಮೋಚನೆಗೊಳಿಸಿದ ಈ ಯುದ್ಧದಲ್ಲಿ ಸುಮಾರು 90 ಸಾವಿರ ಪಾಕಿಸ್ತಾನ ಸೈನಿಕರು ಸೆರೆಯಾಗಿದ್ದರು ಎಂದರು.

ಇಂದಿರಾಗಾಂಧಿಯವರು ಧೀಮಂತ ನಾಯಕಿ

ಇಂದಿರಾಗಾಂಧಿಯವರು ಧೀಮಂತ ನಾಯಕಿ. ದೀರ್ಘ ಕಾಲದವರೆಗೆ ದೇಶವನ್ನಾಳಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಅವರ ಅವಧಿಯಲ್ಲಿ ಬಡತನ ನಿರ್ಮೂಲನೆಗೊಳಿಸುವ ‘ಗರೀಬಿ ಹಠಾವೋ’ ಘೋಷಣೆಯನ್ನು ಮಾಡಿದ್ದರು. ಭಾರತದಲ್ಲಿ ಅಸಮಾನತೆಯಿದೆ. ಇಂದಿರಾಗಾಂಧಿಯವರ ಕಾಲಘಟ್ಟದಲ್ಲಿ ಬಡವರ ಸಂಖ್ಯೆ ಹೆಚ್ಚಿತ್ತು. ಆದ್ದರಿಂದ ಬಡತನ ಹೋಗಲಾಡಿಸಲು 20 ಅಂಶಗಳ ಕಾರ್ಯಕ್ರಮವನ್ನು ಜಾರಿಗೆ ತಂದರು ಎಂದು ತಿಳಿಸಿದರು.

ಜಾತಿವ್ಯವಸ್ಥೆಯಿಂದ ಅಸಮಾನತೆ ಹೆಚ್ಚಿದೆ

ನಮ್ಮ ಸಂವಿಧಾನ ಎಲ್ಲರಿಗೂ ಬದುಕುವ ಹಕ್ಕನ್ನು ನೀಡಿದೆ. ಜಾತಿವ್ಯವಸ್ಥೆಯಿಂದ ಅಸಮಾನತೆ ಹೆಚ್ಚಿದ್ದು, ಬಹುಸಂಖ್ಯಾತ ಜನರು, ಮಹಿಳೆಯರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ . ಚತುರ್ವರ್ಣ ವ್ಯವಸ್ಥೆಯಲ್ಲಿ ಮೊದಲ ಮೂರು ವರ್ಗಗಳಿಗೆ ಎಲ್ಲ ಅವಕಾಶಗಳು ಸಿಗುತ್ತಿತ್ತು. ಆದರೆ ಮೇಲ್ವರ್ಗದ ಹೆಣ್ಣುಮಕ್ಕಳೂ ಸಹ ಶಿಕ್ಷಣದಿಂದ ವಂಚಿತರಾಗಿದ್ದರು. ಸಮಸಮಾಜ ಪರಿಕಲ್ಪನೆಗೆ ಜೀವತುಂಬಿದ್ದ ಬಸವಣ್ಣನವರು ಸಾಮಾಜಿಕ ಕ್ರಾಂತಿಗೆ ನಾಂದಿ ಹಾಡಿದರು. ನಮ್ಮ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ. ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣವರ ಫೋಟೋವನ್ನು ಅಳವಡಿಸಲು ಆದೇಶ ನೀಡಿದೆ ಎಂದರು.

ಇಂದಿರಾ ಗಾಂಧಿಯವರು ಬಸವಣ್ಣನವರು ಹಾಕಿಕೊಟ್ಟ ದಾರಿಯಲ್ಲೇ ನಡೆಯುವ ಪ್ರಯತ್ನವನ್ನು ಮಾಡಿದ್ದರು ಎಂದರು.

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರಲ್ಲಿ ವಲ್ಲಭಭಾಯಿ ಪಟೇಲರು ಅಗ್ರಗಣ್ಯರು

ವಲ್ಲಭಭಾಯಿ ಪಟೇಲರು ದೇಶದ ಉಪಪ್ರಧಾನಿಗಳಾಗಿದ್ದರಲ್ಲದೇ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರಲ್ಲಿ ಅಗ್ರಗಣ್ಯರು. ಸ್ವಾತಂತ್ರ್ಯ ಗಳಿಸಿದಾಗ ದೇಶದಲ್ಲಿ 562 ಸಂಸ್ಥಾನಗಳನ್ನು ಭಾರತಕ್ಕೆ ಸೇರಿಸಲು ಗೃಹ ಸಚಿವರಾಗಿದ್ದ ವಲ್ಲಭ ಭಾಯಿ ಪಟೇಲರ ಪ್ರಯತ್ನವೇ ಕಾರಣ. ಅದಕ್ಕಾಗಿಯೇ ಅವರನ್ನು ಉಕ್ಕಿನ ಮನುಷ್ಯ ಎಂದು ಕರೆಯುತ್ತೇವೆ. ಅವರ 150 ನೇ ಜನ್ಮ ದಿನದಂದು ಗೌರವದಿಂದ ಸ್ಮರಿಸುತ್ತೇವೆ ಎಂದರು.

ಬಿಜೆಪಿಯವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಯೇ ಇಲ್ಲ

ಬಿಜೆಪಿ ಯವರು ನೆಹರೂ ಅವರನ್ನು ಟೀಕಿಸುತ್ತಾರೆ. ಆದರೆ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಮಹಾತ್ಮಾ ಗಾಂಧಿಯವರ ನೇತೃತ್ವದಲ್ಲಿ ನೆಹರೂ, ವಲ್ಲಭಭಾಯಿ ಪಟೇಲ್ ಸುಭಾಷ್ ಚಂದ್ರ ಬೋಸ್ ಸೇರಿದಂತೆ ಅನೇಕರು ಹೋರಾಡಿದರು. ಇಂದು ದೇಶ ಸ್ವತಂತ್ರವಾಗಿದ್ದರೆ ಅದು ಅವರ ಹೋರಾಟದ ಫಲ. ಬಿಜೆಪಿಯವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಯೇ ಇಲ್ಲ. ಸಾವರ್ಕರ್, ಗೋಲ್ವಾಲ್ಕರ್ ಆಗಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿಲ್ಲ. ಈಗ ಬಿಜೆಪಿಯವರು ಮಹಾನ್ ದೇಶಭಕ್ತರಂತೆ ಮಾತನಾಡುತ್ತಾರೆ. ಇದನ್ನು ಬಿಜೆಪಿಯವರ ಢೋಂಗಿತನ ಎಂದು ಮುಖ್ಯಮಂತ್ರಿಗಳು ಹೇಳಿದರು.

ಹೆಡ್ಗೆವಾರ್ ಯಾವತ್ತೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಎಂದು ಆರ್. ಎಸ್. ಎಸ್ ಕಾರ್ಯಕರ್ತರಿಗೆ ಕರೆ ನೀಡಲಿಲ್ಲ

ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದು ಕಾಂಗ್ರೆಸ್ ಹೊರತು ಬೇರ್ಯಾರೂ ಅಲ್ಲ ಎಂದರು. 1925 ರಲ್ಲಿಯೇ ಆರ್.ಎಸ್.ಎಸ್ ಸ್ಥಾಪನೆಯಾಗಿತ್ತು. ಆಗ ಸ್ವಾತಂತ್ರ್ಯ ಹೋರಾಟ ಬಹಳ ಬಿರುಸಾಗಿ ನಡೆಯುತ್ತಿದ್ದ ಕಾಲ. ಕೆ.ಬಿ. ಹೆಡ್ಗೆವಾರ್ ಯಾವತ್ತೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಎಂದು ಆರ್. ಎಸ್. ಎಸ್ ಕಾರ್ಯಕರ್ತರಿಗೆ ಕರೆ ನೀಡಲಿಲ್ಲ. ಸಾವರ್ಕರ್ ಮತ್ತು ಹಿಂದೂ ಮಹಾ ಸಭಾದ ಅಧ್ಯಕ್ಷ ಗೋಲ್ವಾಲ್ಕರ್ ಇಬ್ಬರೂ ಸಂವಿಧಾನವನ್ನು ವಿರೋಧಿಸಿದವರು. ಮನುವಾದಿಗಳು, ಚತುರ್ವಣ ವ್ಯವಸ್ಥೆಯಲ್ಲಿ ನಂಬಿಕೆಯಿಟ್ಟುಕೊಂಡವರು ಯಾವತ್ತೂ ಸಂವಿಧಾನದ ಪರವಾಗಿಲ್ಲ ಎಂದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು