ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಒಳಮೀಸಲಾತಿಗೆ ಆಯೋಗ ರಚನೆ: ವಿಳಂಬ ನೀತಿ ಅಲ್ಲ: ಸಿದ್ದರಾಮಯ್ಯ

P

Peepal Media • ರಾಜ್ಯ

• 1 ನಿಮಿಷದ ಓದು

ಒಳಮೀಸಲಾತಿಗೆ ಆಯೋಗ ರಚನೆ: ವಿಳಂಬ ನೀತಿ ಅಲ್ಲ: ಸಿದ್ದರಾಮಯ್ಯ

ರಾಜ್ಯದಲ್ಲಿ ಒಳ ಮೀಸಲಾತಿ ಕುರಿತು 3 ದಶಕಗಳ ನಿರಂತರ ಬೇಡಿಕೆ, ಒತ್ತಾಯಗಳ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟವು ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸಲು ತಾತ್ವಿಕವಾಗಿ ಒಪ್ಪಿಗೆ ನೀಡಿದೆ. ಪರಿಶಿಷ್ಟ ಜಾತಿಗಳಲ್ಲಿ 101 ಒಳ ಪಂಗಡಗಳಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ವೈಜ್ಞಾನಿಕವಾಗಿ ಒಳ ಮೀಸಲಾತಿಯನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಜ್ಯ ಹೈಕೋರ್ಟ್‌ ನ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಕಮಿಷನ್‌ ಆಫ್‌ ಇನ್‌ಕ್ವೈರಿ ಅಕ್ಟ್‌ 1952 ಅನ್ವಯ ಆಯೋಗವನ್ನು ರಚಿಸಲು ನಿರ್ಧರಿಸಲಾಗಿದೆ. ಸದರಿ ಆಯೋಗವು ಎರಡು ತಿಂಗಳ ಒಳಗಾಗಿ ವರದಿ ಸಲ್ಲಿಸುವ ಷರತ್ತು ವಿಧಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಮುಂದಿನ ತೀರ್ಮಾನದವರೆಗೆ ರಾಜ್ಯ ಸರ್ಕಾರದ ಅಧೀನದ ಸಿವಿಲ್‌ ಸೇವೆಗಳಲ್ಲಿನ ಹಾಗೂ ಮೀಸಲಾತಿ ಅನ್ವಯವಾಗುವ ವೃಂದಗಳ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಹೊರಡಿಸದಿರುವ ನಿರ್ಧಾರವನ್ನು ಸಹ ಕೈಗೊಳ್ಳಲಾಗಿದೆ.

ತೆಲಂಗಾಣ ಸರ್ಕಾರ ಸಹ ಒಳ ಮೀಸಲಾತಿ ಜಾರಿ ಸಂಬಂಧ ಈಗಾಗಲೇ ಇದೇ ಮಾದರಿಯಲ್ಲಿ ಒಂದು ಆಯೋಗ ರಚನೆ ಮಾಡಿದೆ.

ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಒಳ ಮೀಸಲಾತಿಯನ್ನು ವೈಜ್ಞಾನಿಕವಾಗಿ, ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸೂಕ್ತ ಅಂಕಿ ಅಂಶಗಳ ಅಗತ್ಯವಿರುತ್ತದೆ. ಈ ಅಂಕಿ ಅಂಶಗಳನ್ನು ವೈಜ್ಞಾನಿಕವಾಗಿ ನಿರ್ಧರಿಸಲು ರಾಜ್ಯ ಸರ್ಕಾರವು ಆಯೋಗವನ್ನು ರಚನೆ ಮಾಡಲು ನಿರ್ಧರಿಸಿದೆ. ಆಯೋಗವು ನಿಗಧಿತ ಗಡುವಿನೊಳಗೆ ವರದಿಯನ್ನು ಸಲ್ಲಿಸಲು ಬೇಕಾದ ಅಗತ್ಯ ಕ್ರಮಗಳನ್ನು ಸರ್ಕಾರವು ತೆಗೆದುಕೊಳ್ಳಲಿದೆ. ಆಯೋಗದ ವರದಿ ಬಂದ ತಕ್ಷಣ ಒಳ ಮೀಸಲಾತಿಯನ್ನು ಜಾರಿಗೊಳಿಸಲು ಕ್ರಮವಹಿಸಲಾಗುವುದು ಎಂದು ಅವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಒಳ ಮೀಸಲಾತಿ ನೀಡುವುದು ಸಂವಿಧಾನ ಬದ್ಧವಾದ ಕ್ರಮ ಎಂದು ಸುಪ್ರೀಂಕೋರ್ಟ್‌ ಇತ್ತೀಚೆಗೆ ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸುವ ಕ್ರಾಂತಿಕಾರಿ ನಿರ್ಣಯ ಕೈಗೊಂಡಿದೆ. ಸಮರ್ಪಕವಾಗಿ, ವೈಜ್ಞಾನಿಕವಾಗಿ ಹಾಗೂ ವಿವಾದಗಳಿಗೆ ಆಸ್ಪದ ನೀಡದಂತೆ ಒಳ ಮೀಸಲಾತಿಯನ್ನು ಅನುಷ್ಠಾನಗೊಳಿಸಬೇಕೆಂಬ ಉದ್ದೇಶದಿಂದ ಸರ್ಕಾರ ಆಯೋಗ ಸರ್ಕಾರ ರಚಿಸಿದ್ದು, ಇದರಲ್ಲಿ ಯಾವುದೇ ವಿಳಂಬ ನೀತಿ ಅಥವಾ ಕಾಲಹರಣ ತಂತ್ರ ಇರುವುದಿಲ್ಲ. ಸಾಮಾಜಿಕ ನ್ಯಾಯದ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರ ಕಾರ್ಯ ನಿರ್ವಹಿಸಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಇತ್ತೀಚೆಗಷ್ಟೇ ಒಳ ಮೀಸಲಾತಿ ಜಾರಿಗಾಗಿ ಹತ್ತು ಹಲವು ಸಂಘಟನೆಗಳು ಹೋರಾಟ ಆರಂಭಿಸಿದ್ದು, ಬಳ್ಳಾರಿಯ ಸೊಂಡೂರಿನಲ್ಲಿ ಈ ಬಾರಿಯ ಉಪಚುನಾವಣೆಯಲ್ಲಿ ಮಾದಿಗ ಸಮುದಾಯವು ತಟಸ್ಥವಾಗಿ ಉಳಿಯಲು ನಿರ್ಧರಿಸಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಸರ್ಕಾರ ಏಕವ್ಯಕ್ತಿ ಆಯೋಗವೊಂದನ್ನು ಈ ವಿಚಾರವಾಗಿ ರಚಿಸಿತ್ತು. ಆದರೆ ಸಂಘಟನೆಗಳ ನಾಯಲು ಒಳ ಮೀಸಲಾತಿ ಜಾರಿಯನ್ನು ತಡ ಮಾಡುವ ಸಲುವಾಗಿ ಸರ್ಕಾರ ಇಂತಹ ನಾಟಕವಾಡುತ್ತಿದೆ ಎಂದು ಟೀಕಿಸಿದ್ದರು.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version