ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಸತತ 7 ನೇ ಬಾರಿಗೆ ತುಮಕೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಮಾಜಿ ಸಚಿವ ಕೆಎನ್ ರಾಜಣ್ಣ ಅವಿರೋಧ ಆಯ್ಕೆ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಸತತ 7 ನೇ ಬಾರಿಗೆ ತುಮಕೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಮಾಜಿ ಸಚಿವ ಕೆಎನ್ ರಾಜಣ್ಣ ಅವಿರೋಧ ಆಯ್ಕೆ

ತುಮಕೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಮಾಜಿ ಸಚಿವ ಕೆ ಎನ್ ರಾಜಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.  ಅಧ್ಯಕ್ಷ ಸ್ಥಾನಕ್ಕೆ ಕೆ.ಎನ್‌.ರಾಜಣ್ಣ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆ ಮೂಲಕ ಸಹಕಾರಿ ಕ್ಷೇತ್ರದಲ್ಲಿ ಇನ್ನೂ ತಮ್ಮ ಹಿಡಿತ ತಪ್ಪಿಲ್ಲ ಎಂಬುದನ್ನು ರಾಜಣ್ಣ ಸಾಬೀತುಪಡಿಸಿದ್ದಾರೆ.

ತುಮಕೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು. ರಾಜಣ್ಣ ಸತತ 7ನೇ ಬಾರಿಗೆ ಡಿಸಿಸಿ ಬ್ಯಾಂಕ್​ ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿ, ಸಹಕಾರ ಕ್ಷೇತ್ರದಲ್ಲಿ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ.

ತಿಪಟೂರು ತಾಲ್ಲೂಕಿನಿಂದ ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಹಾಗೂ ಪಾವಗಡ ತಾಲ್ಲೂಕಿನಿಂದ ಕಾಂಗ್ರೆಸ್ ಶಾಸಕ ವೆಂಕಟೇಶ್ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾಗಿದ್ದರು. ಇನ್ನುಳಿದ ಬೇರೆ ಬೇರೆ ತಾಲ್ಲೂಕುಗಳಿಂದಲೂ ರಾಜಣ್ಣ ಬೆಂಬಲಿಗರೇ ಡಿಸಿಸಿ ಬ್ಯಾಂಕ್‌ಗೆ ನಿರ್ದೇಶಕರಾಗಿ ಆಯ್ಕೆಯಾಗಿದ್ದರು. ಇದರಿಂದಾಗಿ ರಾಜಣ್ಣ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗುವುದು ಖಚಿತವಾಗಿತ್ತು. ಅದರಂತೆ ಇಂದು ಅವರು ಅವಿರೋಧವಾಗಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಗುಬ್ಬಿ ಮತ್ತು ಕುಣಿಗಲ್ ನಲ್ಲಿ ಶಾಸಕರ ಆಪ್ತರೇ ನಿಂತಿದ್ದರೂ ಅಲ್ಲೂ ಸಹ ರಾಜಣ್ಣ ಬೆಂಬಲಿಗರೇ ಮೇಲುಗೈ ಸಾಧಿಸಿದ್ದಾರೆ. ಗುಬ್ಬಿ ಮತ್ತು ಕುಣಿಗಲ್ ನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಪ್ತ ಬಳಗದಿಂದ ನಿರ್ದೇಶಕ ಸ್ಥಾನಕ್ಕೆ ಕಣಕ್ಕಿಳಿಸಲಾಗಿತ್ತು. ಆದರೆ ಅಲ್ಲೂ ಶಾಸಕರ ಆಪ್ತರು ಸೋಲುವ ಮೂಲಕ ಸಹಕಾರಿ ಕ್ಷೇತ್ರದ ತಮ್ಮ ಹಿಡಿತವನ್ನು ರಾಜಣ್ಣ ಮತ್ತಷ್ಟು ಗಟ್ಟಿಗೊಳಿಸಿದ್ದಾರೆ.

ಶಿರಾ ಕ್ಷೇತ್ರದಿಂದ ಕೆಎನ್‌ಆರ್ ಬೆಂಬಲಿಗ ಜಿ.ಎಸ್. ರವಿ ಈ ಭಾರಿಯೂ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಪುನಾರಾಯ್ಕೆ ಆಗಿದ್ದಾರೆ. ಜಿ.ಎಸ್‌. ರವಿ ಶಿರಾ ಕ್ಷೇತ್ರದ ಕಾಂಗ್ರೆಸ್ ನಾಯಕರಾಗಿದ್ದಾರೆ. ಜೆಡಿಎಸ್‌ ಪಕ್ಷದ ಎಸ್‌.ಆರ್. ಗೌಡ ಅವರನ್ನು ಸೋಲಿಸಿ ಜಿ.ಎಸ್.ರವಿ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ತುರುವೇಕೆರೆ ಕ್ಷೇತ್ರದಿಂದ ಸಿದ್ದಲಿಂಗಪ್ಪ ಪುನಾರಾಯ್ಕೆ ಆಗಿದ್ದಾರೆ. ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಸಿಂಗದಹಳ್ಳಿ ರಾಜಕುಮಾರ್ ಅವರು ಜೆ.ಸಿ.ಮಾಧುಸ್ವಾಮಿ ಬೆಂಬಲಿಗ ವೈ.ಎಸ್.ನಂಜೇಗೌಡ ಅವರನ್ನು ಸೋಲಿಸಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಡಿಸಿಸಿ ಬ್ಯಾಂಕ್‌ನ ಸಿ ವರ್ಗದಿಂದ ಲಕ್ಷ್ಮಿನಾರಾಯಣ್ ಅವರು ನಿರ್ದೇಶಕರಾಗಿ ಪುನರಾಯ್ಕೆ ಆಗಿದ್ದಾರೆ. ಬಿ ವರ್ಗದಿಂದ ಕೆ.ಎನ್‌.ರಾಜಣ್ಣ ಪುತ್ರ ರಾಜೇಂದ್ರ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು