ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಶಾಸಕ ಸ್ವರೂಪ್ ಹುಟ್ಟುಹಬ್ಬದ ಅಂಗವಾಗಿ ಉಚಿತ ಕೃತಕ ಕೈಕಾಲು ಜೋಡಣಾ ಶಿಬಿರ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಶಾಸಕ ಸ್ವರೂಪ್ ಹುಟ್ಟುಹಬ್ಬದ ಅಂಗವಾಗಿ ಉಚಿತ ಕೃತಕ ಕೈಕಾಲು ಜೋಡಣಾ ಶಿಬಿರ

ಹಾಸನ : ಸಂಜೀವಿನಿ ಸಹಕಾರಿ ಆಸ್ಪತ್ರೆ ಹಾಗೂ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ,ಹಾಗೂ ರೋಟರಿ ಕ್ಲಬ್ ಹಾಸನ್ ಹೊಯ್ಸಳ, ಬೆಂಗಳೂರು ಸೌತ್ ಪ್ರೈಡ್, ಬೆಂಗಳೂರು ಕೊರವಂಗಳ, ಬೆಂಗಳೂರು ಲೇಕ್ ಸೈಡ್, ಇನ್ನರ್ ವೀಲ್ ಕ್ಲಬ್,  ಶ್ರೀ ಭಗವಾನ್ ಮಹಾವೀರ್ ವಿಕಲಾಂಗ್ ಸಹಾಯತ ಸಮಿತಿ, ಜೈಪುರ್ ಇವರ ವತಿಯಿಂದ ಇಂದಿನಿಂದ ಏ.11 ರ ವರೆಗೆ ನಡೆಯಲಿರುವ ಉಚಿತ ಕೈಕಾಲು ಜೋಡಣಾ ಶಿಬಿರವನ್ನು ರೋಟರಿ ಸದಸ್ಯರು ವಿಘ್ನ ವಿನಾಯಕನಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.

ಅಪಘಾತ, ಹಾಗೂ ಇನ್ನಿತರ ಖಾಯಿಲೆಗಳಿಂದ ಕೈ, ಕಾಲುಗಳನ್ನು ಕಳೆದುಕೊಂಡ ಹಲವರು ಶಿಬಿರದಲ್ಲಿ ಭಾಗವಹಿಸಿ ಆರೋಗ್ಯ ತಪಾಸಣೆಗೆ ಒಳಗಾಗುವ ಜೊತೆಗೆ ಅಲ್ಲೇ ಅಳತೆ ತೆಗೆದುಕೊಂಡು ತುರ್ತಾಗಿ ಅಳವಡಿಸಿದ ಕೃತಕ ಕಾಲುಗಳನ್ನು ಹೊಂದಿ ಸಂತಸ ಪಟ್ಟರು, ಈ ವೇಳೆ ಅವರಿಗೆ ಉಚಿತ ಊಟೋಪಚಾರದ ವ್ಯವಸ್ಥೆ ಕಲ್ಪಿಸಲಾಗಿತ್ತು.

ಈ ವೇಳೆ ಮಾತನಾಡಿದ ರೋಟರಿ ಪದಾಧಿಕಾರಿಗಳು, ರೋಟರಿ ಸಂಸ್ಥೆ ಪ್ರತಿ ವರ್ಷ ಹಾಸನದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಉಚಿತ ಕೃತಕ ಕೈ ಕಾಲು ಜೋಡಣ ಶಿಬಿರಾಯೋದಿಸಿಕೊಂಡು ಬಂದಿದೆ. ಇದಕ್ಕೆ ಹಾಸನ ಮಾತ್ರವಲ್ಲದೆ ಹೋಗಿದ ಜಿಲ್ಲೆಗಳಿಂದ ಫಲಾನುಭವಿಗಳು  ಆಗಮಿಸಿ ಇದರ ಸದುಪಯೋಗಪಡಿಸಿಕೊಂಡಿದ್ದಾರೆ ಎಂದರು.

ಈ ವರ್ಷವೂ ಸ್ಥಳೀಯ ಶಾಸಕ ಸ್ವರೂಪ ಪ್ರಕಾಶ್ ಅವರ ಹುಟ್ಟು ಹಬ್ಬದ ಅಂಗವಾಗಿ ಈ ಶಿಬಿರವನ್ನು ಪುನರ್ ಆಯೋಜಿಸಿದ್ದು ಇದಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಈಗಾಗಲೇ 300ಕ್ಕೂ ಹೆಚ್ಚು ಜನರು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡಿದ್ದು ಇಂದಿನಿಂದ ಜೋಡಣಾ ಶಿಬಿರ ಆರಂಭವಾಗಿದೆ. ಏ.11 ರ ವರೆಗೆ ಶಿಬಿರ ನಡೆಯಲಿದ್ದು ಹೆಚ್ಚಿನ ಜನರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ವಿವಿಧ ಕಾರಣಗಳಿಂದ ಕೈ – ಕಾಲುಗಳನ್ನು ಕಳೆದುಕೊಂಡವರಿಗೆ ಹೊಸಾ ಬದುಕು ಕಟ್ಟಿ ಕೊಡುವ ನಿಟ್ಟಿನಲ್ಲಿ ಈ ಶಿಬಿರ ಹಮ್ಮಿಕೊಂಡಿದ್ದು, ಹೊಸ ಭರವಸೆಯೊಂದಿಗೆ ಬದುಕುವ ಛಲ ಹುಟ್ಟುಹಾಕುವ ಸಲುವಾಗಿ ಈ ಕಾರ್ಯಕ್ರಮ ನಡೆಯುತ್ತಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚು ಈ ರೀತಿಯ ಶಿಬಿರಗಳನ್ನು ಆಯೋಜಿಸಲು ಸಂಸ್ಥೆ ಮುಂದಾಗಿದೆ ಎಂದರು.

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು