ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಒದಗಿಸಿರುವ ಹಣ ಸರ್ಕಾರಿ ಶಾಲೆಗಳನ್ನು ಬಲಪಡಿಸಲು  ಪೂರಕವಾಗಿದೆ |ನಿರಂಜನಾರಾಧ್ಯ ವಿ.ಪಿ.

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಒದಗಿಸಿರುವ ಹಣ ಸರ್ಕಾರಿ ಶಾಲೆಗಳನ್ನು ಬಲಪಡಿಸಲು  ಪೂರಕವಾಗಿದೆ |ನಿರಂಜನಾರಾಧ್ಯ ವಿ.ಪಿ.

2023-24 ನೇ ಸಾಲಿಗೆ ಆಯವ್ಯಯದಲ್ಲಿ ಶಿಕ್ಷಣಕ್ಕೆ 37,587 ಕೋಟಿಯನ್ನು (ಒಟ್ಟು ಆಯವ್ಯಯದಲ್ಲಿ ಶೇಕಡ.11) ಮೀಸಲಿಟ್ಟಿರುವುದು ನಿಜಕ್ಕೂ ಸ್ವಾಗತಾರ್ಹ. ಶಿಕ್ಷಣ ಇಲಾಖೆಗೆ, ಉಳಿದೆಲ್ಲ ಇಲಾಖೆಗಳಿಗಿಂತ ಅತಿ ಹೆಚ್ಚು ಹಣವನ್ನು ಒದಗಿಸಿರುವುದು, ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಗೊಳಿಸಲು ಸತತವಾಗಿ ನಾಲ್ಕು ದಶಕಗಳಿಂದ ಹೋರಾಡುತ್ತಿರುವ ನನ್ನಂಥವರಿಗೆ ಒಂದು ಹೊಸ ಭರವಸೆಯನ್ನು ಮೂಡಿಸಿದೆ- ಶಿಕ್ಷಣ ತಜ್ಞ ನಿರಂಜನಾರಾಧ್ಯ ವಿ.ಪಿ.

ಮಾನ್ಯ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರದಲ್ಲಿ  ಹಣಕಾಸು ಜವಾಬ್ದಾರಿ ಹೊತ್ತಿರುವ ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು ಇಂದು ಮಂಡಿಸಿದ ಆಯವ್ಯಯದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಒದಗಿಸಿರುವ ಹೊಸ ಕಾರ್ಯಕ್ರಮ, ಯೋಜನಾ ಅನುದಾನಗಳು ಹಾಗು ಆಯವ್ಯಯದಲ್ಲಿ ಮೀಸಲಿಟ್ಟಿರುವ ಒಟ್ಟು ಹಣ, ರಾಜ್ಯದಲ್ಲಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಸಹಾಯಕಾರಿಯಾಗದೆ,

ಈ ಮೂಲಕ ಶಿಕ್ಷಣ ಹಕ್ಕು ಕಾಯಿದೆಯ ಆಶಯಗಳನ್ನು  ಸಾಕಾರಗೊಳಿಸಲು ಮತ್ತು ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಸರ್ಕಾರವು ಬದ್ಧವಾಗಿದೆ ಎಂಬ ಭರವಸೆಯನ್ನು ಆಯವ್ಯಯ ನೀಡಿದೆ. ಈ ಕಾರಣಕ್ಕಾಗಿ ನಾನು ಮಾನ್ಯ ಮುಖ್ಯ ಮಂತ್ರಿಗಳನ್ನು ಸರ್ಕಾರಿ ಶಾಲೆಗಳ ಸಮಸ್ತ ಮೂಲ ವಾರಸುದಾರರ ಪರವಾಗಿ ಅದರಲ್ಲೂ  ವಿಶೇಷವಾಗಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಪರವಾಗಿ ಅಭಿನಂದಿಸುತ್ತೇನೆ. 

ಆಯವ್ಯಯದಲ್ಲಿ, ಹೊಸ ತರಗತಿ ಕೋಣೆಗಳ ನಿರ್ಮಾಣಕ್ಕೆ 540 ಕೋಟಿ; ಶೌಚಾಲಯಗಳನ್ನು ನಿರ್ಮಿಸಲು 200 ಕೋಟಿ; ಅತ್ಯಂತ ಶಿಥಿಲವಾದ  ಹಾಗು ದುರಸ್ಥಿಗೆ ಬಂದಿರುವ ಕಟ್ಟಡಗಳ ದುರಸ್ತಿಗೆ 1೦೦ ಕೋಟಿ ಪ್ರಾಥಮಿಕ ಹಾಗು ಪ್ರೌಢ ಶಾಲೆಗಳ ನಿರ್ವಹಣೆ ಮತ್ತು ಸುಸ್ಥಿತಿ ಕಾಪಾಡಲು  ಈಗಿನ ಅನುದಾನವನ್ನು 20000 ದಿಂದ 45000 ಕ್ಕೆ ಏರಿಸಲು 153 ಕೋಟಿ;  ವಾರಕ್ಕೆ ಎರಡು ಬಾರಿ ಮೊಟ್ಟೆ ನೀಡುವ ಮೂಲಕ ಮಕ್ಕಳ ಪೌಷ್ಠಿಕತೆಯನ್ನು ಸುಧಾರಿಸಲು 280 ಕೋಟಿ; ಕಲಿಕಾ ನ್ಯೂನತೆಯನ್ನು ಸರಿಪಡಿಸಿ ಗುಣಾತ್ಮಕ ಶಿಕ್ಷಣವನ್ನು ಖಾತರಿಗೊಳಿಸಲು 80 ಕೋಟಿ; ಮಕ್ಕಳ ಸೃಜನಾತ್ಮಕ ಚಿಂತನೆ ಹಾಗು ಚಟುವಟಿಕೆಗಳ ಅನ್ವೇಷಣೆಗೆ 2 ಕೋಟಿ;  ಸಾಟ್ಸ್‌ (Students Achievement Tracking System) ನ್ನು 2.0 ಗೆ ಮೇಲ್ದರ್ಜೆಗೇರಿಸಲು ಕ್ರಮ ; ಪರಿಸರ ರಕ್ಷಣೆಗೆ ಶಾಲೆಗಳ ಸುತ್ತಮುತ್ತ ಸುಮಾರು 50 ಲಕ್ಷ ಗಿಡಗಳನ್ನು ನೆಡುವ ಯೋಜನೆ ಹಾಗು ಸಾರ್ವಜನಿಕ ಗ್ರಂಥಾಲಯಗಳಿಗೆ ಸದಭಿರುಚಿಯ ಪುಸ್ತಕಗಳನ್ನು ಒದಗಿಸಲು 10 ಕೋಟಿ ಹಣವನ್ನು ಒದಗಿಸಿರುವುದು, ಮಾನ್ಯ ಮುಖ್ಯ ಮಂತ್ರಿಗಳಿಗೆ ಹಾಗೂ ಸರ್ಕಾರಕ್ಕೆ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಇರುವ ಸದಾಶಯವನ್ನು ಸಾಬೀತು ಪಡಿಸಿದೆ.

ಒಟ್ಟಾರೆ, 2023-24 ನೇ ಸಾಲಿಗೆ ಆಯವ್ಯಯದಲ್ಲಿ ಶಿಕ್ಷಣಕ್ಕೆ 37,587 ಕೋಟಿಯನ್ನು (ಒಟ್ಟು ಆಯವ್ಯಯದಲ್ಲಿ ಶೇಕಡ.11) ಮೀಸಲಿಟ್ಟಿರುವುದು ನಿಜಕ್ಕೂ ಸ್ವಾಗತಾರ್ಹ. ಶಿಕ್ಷಣ ಇಲಾಖೆಗೆ, ಉಳಿದೆಲ್ಲ ಇಲಾಖೆಗಳಿಗಿಂತ ಅತಿ ಹೆಚ್ಚು ಹಣವನ್ನು ಒದಗಿಸಿರುವುದು, ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಗೊಳಿಸಲು ಸತತವಾಗಿ ನಾಲ್ಕು ದಶಕಗಳಿಂದ ಹೋರಾಡುತ್ತಿರುವ ನನ್ನಂಥವರಿಗೆ ಒಂದು ಹೊಸ ಭರವಸೆಯನ್ನು ಮೂಡಿಸಿದೆ.

ನಿರಂಜನಾರಾಧ್ಯ ವಿ.ಪಿ.

ಅಭಿವೃದ್ಧಿ ಶಿಕ್ಷಣ ತಜ್ಞ ಹಾಗು ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಹರಿಕಾರ

ಇದನ್ನೂ ಓದಿ-ರಾಜ್ಯ ಬಜೆಟ್: ಬುಡಕಟ್ಟು ಪಂಗಡಗಳ ಪೌಷ್ಠಿಕತೆಗೆ ಒತ್ತು

ವಿಷಯಗಳು: #india #kannada #karnataka #peepal #peepalmedia
PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು