ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬೆಂಗಳೂರು ಜನರಿಗೆ ಸುಗಮ ಆಡಳಿತ, ಸಮರ್ಪಕ‌ ಅಭಿವೃದ್ಧಿಗಾಗಿ GBA ಅಸ್ತಿತ್ವಕ್ಕೆ: ಸಿ.ಎಂ.ಸಿದ್ದರಾಮಯ್ಯ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಬೆಂಗಳೂರು ಜನರಿಗೆ ಸುಗಮ ಆಡಳಿತ, ಸಮರ್ಪಕ‌ ಅಭಿವೃದ್ಧಿಗಾಗಿ GBA ಅಸ್ತಿತ್ವಕ್ಕೆ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು ಅ 10: ಅತಿ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದ ಸಮಸ್ತ ಜನರಿಗೆ ಸುಗಮ ಆಡಳಿತ, ಸಮರ್ಪಕ‌ ಅಭಿವೃದ್ಧಿಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದು ಐದು ಕಾರ್ಪೋರೇಷನ್ ಗಳು ರಚನೆಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೊದಲ ಸಭೆಯಲ್ಲಿ ಆರಂಭಿಕ ಮಾತುಗಳಲ್ಲಿ GBA ರಚನೆ ಹಿಂದಿನ‌ ಉದ್ದೇಶಗಳನ್ನು ಪ್ರಸ್ತಾಪಿಸಿ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

ಬೆಂಗಳೂರಿನ ಜನಸಂಖ್ಯೆ 1.40 ಕೋಟಿ ತಲುಪಿದೆ. ಒಂದು ಕಾರ್ಪೋರೇಷನ್ ನಿಂದ ಇಷ್ಟು ದೊಡ್ಡ ನಗರದ ಸಮರ್ಪಕ ಅಭಿವೃದ್ಧಿ ಬಹಳ ದೊಡ್ಡ ಸವಾಲಿನದ್ದು. ಈ ಚರ್ಚೆ ಹಲವು ವರ್ಷಗಳಿಂದ ಇದ್ದೇ ಇದೆ. ಒಂದಕ್ಕಿಂತ ಹೆಚ್ಚು ಕಾರ್ಪೋರೇಷನ್ ಗಳಿದ್ದರೆ ಅಭಿವೃದ್ಧಿ ಸಾಧ್ಯ ಎನ್ನುವ ಕಾರಣಕ್ಕೆ ಈ ಬಗ್ಗೆ ವರದಿ ಕೊಡಲು ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗಲೇ ಸಮಿತಿ ರಚಿಸಲಾಗಿತ್ತು. ನಂತರ ಬಂದ ಸರ್ಕಾರಗಳು ಈ ದಿಕ್ಕಿನಲ್ಲಿ ಗಮನ ಹರಿಸಲೇ ಇಲ್ಲ. ಹೀಗಾಗಿ ನಮ್ಮ ಸರ್ಕಾರವೇ ಪುನಃ ಅಧಿಕಾರಕ್ಕೆ ಬಂದ ಬಳಿಕ ಸಮಿತಿಯನ್ನು ಪುನರ್ ರಚಿಸಲಾಯಿತು. ಈ ಸಮಿತಿ ವರದಿಯಂತೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದು 5 ನಗರ ಪಾಲಿಕೆಗಳ ರಚನೆಯಾಗಿವೆ ಎಂದರು.

ಸುಗಮ ಕಸ ವಿಲೇವಾರಿ ಆಗಬೇಕು. ಪಾಲಿಕೆಗಳ ಆದಾಯ ಹೆಚ್ಚಳ ಆಗಬೇಕು. ಟ್ರಾಫಿಕ್ ದಟ್ಟಣೆ ನಿವಾರಣೆ ಆಗಬೇಕು. ನಗರವನ್ನು ಚೊಕ್ಕವಾಗಿಡಬೇಕು. ರಸ್ತೆ/ಚರಂಡಿ/ಫುಟ್ಪಾತ್/ಪಾರ್ಕ್ಗಳ ನಿರ್ಮಾಣಕ್ಕೆ ಆದ್ಯತೆ ನೀಡಿ ಮಾದರಿ ಪಾಲಿಕೆಗಳನ್ನಾಗಿ ರೂಪಿಸಬೇಕು ಎನ್ನುವ ಮಹತ್ತರ ಗುರಿ ಮತ್ತು ಉದ್ದೇಶಳನ್ನು ಇಟ್ಟುಕೊಂಡು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾರ್ಯ ನಿರ್ವಹಿಸಬೇಕು ಎಂದು ಸಿ.ಎಂ ಸೂಚನೆ ನೀಡಿದರು.

ನಾವು ನಿರೀಕ್ಷೆ ಮಾಡಿರುವ ಈ ಗುರಿ ಮತ್ತು ಉದ್ದೇಶ ನೆರವೇರಲು BWSSB, BDA, BESCOM ಸೇರಿ ಎಲ್ಲಾ ಇಲಾಖೆಗಳು GBA ಜೊತೆ ಪರಸ್ಪರ ಸಹಕಾರ ಸಹಯೋಗವನ್ನು ಅತ್ಯಂತ ಕಡ್ಡಾಯವಾಗಿ ಆಚರಣೆಗೆ ತರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಸೂಚನೆ ನೀಡಿದರು.

ಅಧಿಕಾರ ವಿಕೇಂದ್ರೀಕರಣಕ್ಕೆ ವಿರೋಧ: ಕುಟುಕಿದ ಸಿಎಂ

ಚರ್ಚೆ-ಸಂವಾದದಿಂದ ಪ್ರಜಾಪ್ರಭುತ್ವ ಗಟ್ಟಿಯಾಗುತ್ತದೆ. ಏನೇ ವಿರೋಧಗಳಿದ್ದರೂ ಸಭೆಗೆ ಹಾಜರಾಗಿ ಚರ್ಚೆ ನಡೆಸಿ ಅಭಿವೃದ್ಧಿಗೆ ಪೂರಕವಾಗಿ ಸಹಕಾರ ನೀಡಬೇಕು.
ಅಧಿಕಾರ ವಿಕೇಂದ್ರೀಕರಣವನ್ನು ವಿರೋಧಿಸುವವರು ಮತ್ತು ಬೆಂಗಳೂರಿನ ಅಭಿವೃದ್ಧಿ ಒಲ್ಲದವರು ಸಭೆಯನ್ನು ವಿರೋಧಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಕುಟುಕಿದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು