ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಚಿನ್ನದ ಸಿಂಹಾಸನ, ಅಂಬಾರಿ ಮೈಸೂರು ರಾಜಮನೆತನದ ಆಸ್ತಿ: ಪ್ರಮೋದಾದೇವಿ ಒಡೆಯರ್

P

Peepal Media • ರಾಜ್ಯ

• 1 ನಿಮಿಷದ ಓದು

ಚಿನ್ನದ ಸಿಂಹಾಸನ, ಅಂಬಾರಿ ಮೈಸೂರು ರಾಜಮನೆತನದ ಆಸ್ತಿ: ಪ್ರಮೋದಾದೇವಿ ಒಡೆಯರ್

ಮೈಸೂರು: ಚಿನ್ನದ ಸಿಂಹಾಸನ ಮತ್ತು ಅಂಬಾರಿ ಎರಡೂ ಹಿಂದಿನ ಮೈಸೂರು ರಾಜಮನೆತನದ ಖಾಸಗಿ/ವೈಯಕ್ತಿಕ ಆಸ್ತಿಎಂದು ಮೈಸೂರಿನ ಹಿಂದಿನ ರಾಜಮನೆತನದ ಸದಸ್ಯೆ ಪ್ರಮೋದಾದೇವಿ ಒಡೆಯರ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆಯನ್ನು ಹೊರಡಿಸಿರುವ ಅವರು “ಸಿಂಹಾಸನ ಹಾಗೂ ಅಂಬಾರಿಯ ಮಾಲೀಕತ್ವದ ಕುರಿತು ತಪ್ಪು ಕಲ್ಪನೆಗಳಿವೆ. ಈ ನಿಟ್ಟಿನಲ್ಲಿ ತಾನು ಈ ಪತ್ರಿಕಾ ಪ್ರಕಟಣೆ ಹೊರಡಿಸಿರುವುದಾಗಿ ತಿಳಿಸಿದ್ದಾರೆ.

ಸಾರ್ವಜನಿಕರು, ಮಾಧ್ಯಮಗಳು ಹಾಗೂ ಯೂಟ್ಯೂಬರ್‌ಗಳು ಈ ವಿಷಯಗಳಿಗೆ ಸಂಬಂಧಿಸಿದಂತೆ ಇನ್ನಷ್ಟು ತಪ್ಪು ಮಾಹಿತಿಗಳನ್ನು ಹರಡದಂತೆ ಅವರು ಕೋರಿದ್ದಾರೆ.

ಅಂಬಾರಿ ಹಾಗೂ ಸಿಂಹಾಸನದ ಮಾಲಿಕತ್ವ, ಅವುಗಳ ಪಾಲನೆ, ಬಳಕೆ ಮತ್ತು ಸಂರಕ್ಷಣೆ ನಮ್ಮ ಜವಾಬ್ದಾರಿಯಾಗಿದೆ ಮತ್ತು ಅದು ಮುಂದುವರಿಯುತ್ತದೆ. ಮತ್ತು ಇದಕ್ಕೆ ವಿರುದ್ಧವಾಗಿ ಯಾವುದೇ ರೀತಿಯ ಹಕ್ಕು ಸ್ಥಾಪನೆ ಅಥವಾ ಹೇಳಿಕೆಗಳು ಆಧಾರರಹಿತವಾಗಿವೆ ಮತ್ತು ಸತ್ಯಗಳ ತಪ್ಪು ನಿರೂಪಣೆಯಾಗಿದೆ” ಎಂದು ಪ್ರಮೋದಾದೇವಿ ಒತ್ತಿ ಹೇಳಿದ್ದಾರೆ.

ವ್ಯಾಪಾರ ಹಾಗೂ ಉತ್ಪಾದನಾ ಸಮುದಾಯದಲ್ಲಿ ಕೆಲವರು ಪ್ರಚಾರದ ಸಲುವಾಗಿ ಅಂಬಾರಿಯ ಚಿತ್ರವನ್ನು ತಮ್ಮ ಉತ್ಪನ್ನಗಳ ಮೇಲೆ ಬಳಸುತ್ತಿದ್ದಾರೆ. ಆದರೆ ಅಂಬಾರಿ ಮತ್ತು ಸಿಂಹಾಸನವು ಅಪಾರ ಮಹತ್ವ ಮತ್ತು ಗೌರವವನ್ನು ಹೊಂದಿವೆ. ಆದ್ದರಿಂದ, ಈ ವಸ್ತುಗಳು ಯಾವುದೇ ರೀತಿಯ ಜಾಹೀರಾತು ಅಥವಾ ಪ್ರಚಾರ ಕಾರ್ಯಗಳಿಗೆ ಬಳಸಬಾರದು” ಎಂದು ಪ್ರಮೋದಾದೇವಿ ಆಗ್ರಹಿಸಿದ್ದಾರೆ.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version