ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪತ್ರಿಕೋದ್ಯಮದ ಆದ್ಯತೆ ಸತ್ಯ ನಿಷ್ಠೆಯಿಂದ ಪಕ್ಷ ನಿಷ್ಠೆಗೆ ಜಾರಿ ಈಗ ವ್ಯಕ್ತಿ ನಿಷ್ಠತೆ ಕಡೆಗೆ ಜಾರುತ್ತಿದೆ: ಕೆ.ವಿ.ಪಿ

P

Peepal Media • ರಾಜ್ಯ

• 1 ನಿಮಿಷದ ಓದು

ಪತ್ರಿಕೋದ್ಯಮದ ಆದ್ಯತೆ ಸತ್ಯ ನಿಷ್ಠೆಯಿಂದ ಪಕ್ಷ ನಿಷ್ಠೆಗೆ ಜಾರಿ ಈಗ ವ್ಯಕ್ತಿ ನಿಷ್ಠತೆ ಕಡೆಗೆ ಜಾರುತ್ತಿದೆ: ಕೆ.ವಿ.ಪಿ

ಮೈಸೂರು ಫೆ 28: ಪತ್ರಿಕೋದ್ಯಮದ ಆದ್ಯತೆ ಸತ್ಯ ನಿಷ್ಠೆಯಿಂದ ಪಕ್ಷ ನಿಷ್ಠೆಗೆ ಜಾರಿ ಈಗ ವ್ಯಕ್ತಿ ನಿಷ್ಠತೆ ಕಡೆಗೆ ಜಾರುತ್ತಿದೆ. ಹೀಗಾಗಿ ವೃತ್ತಿ ನೈತಿಕತೆ ಮತ್ತು ತಂತ್ರಜ್ಞಾನದ ಸವಾಲುಗಳನ್ನು ಜೀರ್ಣಿಸಿಕೊಂಡು ವೃತ್ತಿಪರತೆ ರೂಪಿಸಲು ಮಾಧ್ಯಮ ಅಕಾಡೆಮಿಯಿಂದ ಕಾರ್ಯಾಗಾರ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ನುಡಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಮಾಧ್ಯಮ ಅಕಾಡೆಮಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಮೈಸೂರು ವಿಶ್ವವಿದ್ಯಾಲಯದ ಸಹಭಾಗಿತ್ವದ “ಏನ್‌ ಸಮಾಚಾರ ಮೀಡಿಯಾ ಹಬ್ಬ” ಎರಡು ದಿನಗಳ ಕಾರ್ಯಾಗಾರದ ಸಮಾರೋಪ ಭಾಷಣದಲ್ಲಿ ನುಡಿದರು.

ಪತ್ರಿಕೋದ್ಯಮಕ್ಕೆ ಭವಿಷ್ಯ ಇಲ್ಲಪ್ಪಾ, ಬೇರೆ ಏನಾದ್ರೂ ಮಾಡೋಣ ಅಂತಿದೀನಿ ಅಂತ ನನ್ನ ಸ್ನೇಹಿತರು ಹೇಳ್ತಾನೇ ಇರ್ತಾರೆ. ನಿಜ, ಇವತ್ತು ನಾವು-ನೀವು ಅನುಭವಿಸುತ್ತಿರುವ ದಾವಂತದ, ಊಹಾ ಪತ್ರಿಕೋದ್ಯಮಕ್ಕೆ ಭವಿಷ್ಯ ಇಲ್ಲ. ಆದರೆ, ವೃತ್ತಿಪರ ಸತ್ಯ ನಿಷ್ಠ ಪತ್ರಿಕೋದ್ಯಮಕ್ಕೆ ಭವಿಷ್ಯ ಉಜ್ವಲವಾಗಿದೆ. ಸತ್ಯನಿಷ್ಠೆಯ ಪತ್ರಿಕೋದ್ಯಮಕ್ಕೆ ಸಂದರ್ಭ ಹದವಾಗಿದೆ ಎಂದರು.

ವಿದ್ಯಾರ್ಥಿಗಳು ಪತ್ರಿಕೋದ್ಯಮದ ಕೌಶಲ್ಯ, ತಂತ್ರಜ್ಞಾನ ಎಲ್ಲವನ್ನು ಕಲಿಯುವ ಜೊತೆಗೆ ಹೊಣೆಗಾರಿಕೆಯನ್ನೂ ಅರಿತುಕೊಳ್ಳುವುದು ಅತ್ಯಂತ ಅಗತ್ಯವಾಗಿದೆ.

ಪತ್ರಿಕೋದ್ಯಮ ಹಿಂದೆ ಸೇವೆಯಾಗಿತ್ತು. ಇಂದು ಉದ್ಯಮವಾಗಿದೆ. ಹಿಂದೆ ವಸ್ತುನಿಷ್ಠತೆ ಪತ್ರಿಕೋದ್ಯಮದ ಜೀವ ಸೆಲೆ ಆಗಿತ್ತು. ಆದರೆ ಇಂದು ವ್ಯಕ್ತಿ ನಿಷ್ಠತೆ ಪಿಡುಗು ಆತಂಕಕಾರಿಯಾಗಿ ಬೆಳೆಯುತ್ತಿದೆ ಎಂದರು.

ಕಳೆದ ವಾರ ಕಲಬುರಗಿಯಲ್ಲಿ ಇದೇ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಲ್ಲಿಗಿಂತ ಮೈಸೂರಿನ ಮಾಧ್ಯಮ ಹಬ್ಬ ಹೆಚ್ಚು ಯಶಸ್ವಿಯಾಗಿದೆ. ಇದಕ್ಕೆ ವಿದ್ಯಾರ್ಥಿಗಳ ಪರಿಣಾಮಕಾರಿ ಪಾಲ್ಗೊಳ್ಳುವಿಕೆ ಪ್ರಮುಖ ಕಾರಣ ಎಂದರು.‌

ಆದ್ದರಿಂದ ಜನರಿಗೆ ಸರಿಯಾದ ಮಾಹಿತಿ ನೀಡುವ ನಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳುವಂತಿಲ್ಲ. ಇದನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಮಾಧ್ಯಮ ರಂಗದಲ್ಲಿ ನಾವು ಅಪೇಕ್ಷಿಸುವ ಬದಲಾವಣೆ ನಿಮ್ಮಿಂದಲೇ ಪ್ರಾರಂಭವಾಗಲಿ.

ಸತ್ಯದ ಅನ್ವೇಷಣೆ ಹಾಗೂ ವಾಸ್ತವವನ್ನೇ ಜನರ ಮುಂದಿಡುವ ಸಂಕಲ್ಪವನ್ನು ನೀವು, ವಿದ್ಯಾರ್ಥಿಗಳು ಮಾಡಬೇಕು ಎಂದು ಕರೆ ನೀಡಿದರು.

ಎರಡು ದಿನಗಳ ಕಾರ್ಯಾಗಾರದಲ್ಲಿ ನಡೆದ ವಿವಿಧ ವಿಭಾಗಗಳ ಸ್ಫರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಕೆ.ವಿ.ಪ್ರಭಾಕರ್ ಅವರು ಪ್ರಶಸ್ತಿ ಮತ್ತು ಪ್ರಶಸ್ತಿಪತ್ರಗಳನ್ನು ವಿತರಿಸಿ ಶುಭ ಹಾರೈಸಿದರು.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version