ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಜ್ಯದಲ್ಲಿ ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಸರ್ಕಾರ ಚಿಂತನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

PPeepal Media Desk

Peepal Media Desk • ರಾಜ್ಯ

• 1 ನಿಮಿಷದ ಓದು

ರಾಜ್ಯದಲ್ಲಿ ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಸರ್ಕಾರ ಚಿಂತನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಸರ್ಕಾರ ಗಂಭೀರ ಚಿಂತನೆ ನಡೆಸಿರುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಮಾಜಿ ಸಚಿವ ಅಬ್ದುಲ್‌ ನಜೀರ್‌ ಸಾಬ್‌ ಅವರಿದ್ದಾಗ ಗ್ರಾಮ ನ್ಯಾಯಾಲಯಗಳ ಬಗ್ಗೆ ಪ್ರಸ್ತಾಪಿಸಿದ್ದರು. ಈಗ ಆ ನಿಟ್ಟಿನಲ್ಲಿ ನಾವು ಕೆಲಸ ಮಾಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ‌.

ವಿಧಾನಸೌಧದ ಬ್ಯಾಂಕ್ವಟ್ ಹಾಲ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆ ಸೋಮವಾರ ಹಮ್ಮಿಕೊಂಡಿದ್ದ 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ಸ್ವಚ್ಚ ಸರ್ವೇಕ್ಷಣಾ ಗ್ರಾಮೀಣ ರಾಜ್ಯ ಮಟ್ಟದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

ಈ ಹಿಂದೆ ನಜೀರ್ ಸಾಬ್ ಗ್ರಾಮ ನ್ಯಾಯಾಲಯಗಳ ಬಗ್ಗೆ ಮಹತ್ವದ ಕನಸು ಇಟ್ಟಿದ್ದರು. ಈಗ ಕಾನೂನು ಸಚಿವ ಎಚ್‌ ಕೆ ಪಾಟೀಲ್‌ ಅವರು ಕೂಡ ಗ್ರಾಮ ನ್ಯಾಯಾಲಯಗಳನ್ನು ಅಸ್ತಿತ್ವಕ್ಕೆ ತರುವ ಬಗ್ಗೆ ಪ್ರಸ್ತಾಪಿಸುತ್ತಲೇ ಇದ್ದಾರೆ. ಗ್ರಾಮ ಮಟ್ಟದ ವ್ಯಾಜ್ಯಗಳು ನ್ಯಾಯಾಲಯಗಳ ಮೆಟ್ಟಿಲು ಏರಿ ವರ್ಷಗಟ್ಟಲೆ ಮುಂದೂಡುವುದಕ್ಕಿಂತ, ಸ್ಥಳೀಯವಾಗಿ ಬಗೆಹರಿಯಬೇಕು ಎಂಬ ಆಶಯ ಸರ್ಕಾರದ್ದಾಗಿದೆ ಎಂದು ಅವರು ವಿವರಿಸಿದರು.

“ಹಳ್ಳಿಗಳಲ್ಲಿಯೇ ಗ್ರಾಮಗಳ ವ್ಯಾಜ್ಯಗಳನ್ನು ಬಗೆಹರಿಸಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಷ್ಟ್ರಪಿತ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಗ್ರಾಮ ಸ್ವರಾಜ್ಯ ಮತ್ತು ಅಧಿಕಾರ ವಿಕೇಂದ್ರೀಕರಣದ ಆಶಯದಂತೆ ಗ್ರಾಮ ನ್ಯಾಯಾಲಯಗಳ ಸ್ಥಾಪನೆಯಾದರೆ ಗ್ರಾಮಸ್ಥರಿಗೆ ಬಹಳ ಸಹಾಯಕವಾಗಲಿದೆ” ಎಂದು ಅವರು ಹೇಳಿದರು.

ವಿಷಯಗಳು: #peepal #peepalmedia #politics #Siddaramaiah
PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು