ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

“ರೈತರ ಸಾಲಮನ್ನಾ ಬಗ್ಗೆ ಬಿವೈ ವಿಜಯೇಂದ್ರ ಬೇಡಿಕೆ ಸರಿಯಿದೆ, ಈ ಕುರಿತು ಕೇಂದ್ರ ಸರ್ಕಾರವೂ ಮುಂದಾಗಬೇಕು”: ಸಿಎಂ ಡಿಕೆ ಶಿವಕುಮಾರ್

PPeepal Media Desk

Peepal Media Desk ದೇಶ, ರಾಜ್ಯ

• 2 ನಿಮಿಷದ ಓದು

“ರೈತರ ಸಾಲಮನ್ನಾ ಬಗ್ಗೆ ಬಿವೈ ವಿಜಯೇಂದ್ರ ಬೇಡಿಕೆ ಸರಿಯಿದೆ, ಈ ಕುರಿತು ಕೇಂದ್ರ ಸರ್ಕಾರವೂ ಮುಂದಾಗಬೇಕು”: ಸಿಎಂ ಡಿಕೆ ಶಿವಕುಮಾರ್

ಬಾಗಲಕೋಟೆ: ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಿಸುತ್ತಿರುವ ರೈತರ ನೆರವಿಗೆ ಕೇಂದ್ರ ಸರ್ಕಾರವೂ ಮುಂದಾಗಬೇಕು. ರೈತರ ₹5 ಲಕ್ಷದವರೆಗಿನ ಸಾಲ ಮನ್ನಾ ಮಾಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾಡಿರುವ ಬೇಡಿಕೆ ಸರಿಯಾಗಿದ್ದು, ಈ ಸಂಬಂಧ ಕೇಂದ್ರದ ನೆರವು ಪಡೆಯಲು ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕರೆದೊಯ್ಯಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಬಾಗಲಕೋಟೆ ಪ್ರವಾಸ ಕೈಗೊಂಡ ಅವರು ಬರಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ, ಬಾಗಲಕೋಟೆ ತಾಲೂಕಿನ ಶಿರೂರು ಗ್ರಾಮದಲ್ಲಿ ರೈತರ ಜಮೀನುಗಳಿಗೆ ತೆರಳಿ ಬೆಳೆಗಳ ಸ್ಥಿತಿಗತಿಯನ್ನು ಪರಿಶೀಲಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಸಂಕಷ್ಟಕ್ಕೆ ರಾಜ್ಯ ಸರ್ಕಾರ ಸ್ಪಂದಿಸುತ್ತಿದ್ದು, ಕೇಂದ್ರ ಸರ್ಕಾರವೂ ಸೂಕ್ತ ನೆರವು ನೀಡಬೇಕು ಎಂದು ಒತ್ತಾಯಿಸಿದರು.

“ರೈತರ ಸಾಲಮನ್ನಾ ಬೇಡಿಕೆ ಸರಿಯಿದೆ. ರೈತರ ಸಾಲಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯುತ್ತೇವೆ. ರಾಜ್ಯ ಬಿಜೆಪಿ ನಾಯಕರು ಕೇಂದ್ರ ಸರ್ಕಾರದಿಂದ ರೈತರ ಸಾಲಮನ್ನಾ ಮಾಡಿಸುವ ಜವಾಬ್ದಾರಿ ಹೊರಬೇಕು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ ಬಿಜೆಪಿ ನಾಯಕರು ನಮ್ಮೊಂದಿಗೆ ದೆಹಲಿಗೆ ಬಂದು ಕೇಂದ್ರದಿಂದ ಅನುದಾನ ಬಿಡುಗಡೆ ಹಾಗೂ ರೈತರ ಸಾಲಮನ್ನಾಕ್ಕೆ ಆಗ್ರಹಿಸಬೇಕು” ಎಂದು ಶಿವಕುಮಾರ್ ಹೇಳಿದರು.

ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು. ಬರಗಾಲದ ಬಗ್ಗೆ ಪ್ರಧಾನಮಂತ್ರಿಗಳೇ ಮಾತನಾಡಿರುವುದರಿಂದ ಕೇಂದ್ರವೂ ರೈತರ ನೆರವಿಗೆ ಧಾವಿಸಬೇಕು. ಈ ಕುರಿತು ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.

ಬೆಳೆ ಇದ್ದಂತೆ ಕಂಡರೂ ಇಳುವರಿ ಇಲ್ಲ
ರಾಜ್ಯದಲ್ಲಿ ಬರ ಪರಿಸ್ಥಿತಿ ಒಂದೇ ರೀತಿಯಾಗಿಲ್ಲ. ಕೆಲವೆಡೆ ಹಸಿರು ಕಾಣಿಸಿಕೊಂಡರೂ ನಿರೀಕ್ಷಿತ ಪ್ರಮಾಣದಲ್ಲಿ ಬೆಳೆ ಬಂದಿಲ್ಲ. ಮತ್ತೆ ಕೆಲವು ಕಡೆ ಬೆಳೆ ಸಂಪೂರ್ಣ ಒಣಗಿದೆ. ಪರಿಸ್ಥಿತಿ ಅರಿತು ಕೆಲವು ರೈತರು ಹೊಲದಲ್ಲಿ ಬೀಜವನ್ನೇ ಹಾಕಿಲ್ಲ. ಇನ್ನೂ ಕೆಲವರು ಉಳುಮೆ ಮಾಡಲು ಹೋಗಿ ನಷ್ಟ ಅನುಭವಿಸಿದ್ದಾರೆ ಎಂದು ಮುಖ್ಯಮಂತ್ರಿ ವಿವರಿಸಿದರು.

ಬರ ಪರಿಹಾರ ವಿತರಣೆಯಲ್ಲಿ ಇರುವ ಕೆಲವು ಮಾನದಂಡಗಳಿಂದ ರೈತರಿಗೆ ತೊಂದರೆಯಾಗುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ಈ ಕುರಿತು ಈಗಾಗಲೇ ವರದಿ ಸಿದ್ಧಪಡಿಸಿ ಕಳುಹಿಸಲಾಗಿದೆ. ಆದಷ್ಟು ಬೇಗ ಎರಡನೇ ಪಟ್ಟಿಯನ್ನೂ ಸಿದ್ಧಪಡಿಸಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಜಿಲ್ಲೆಗಳಲ್ಲಿ ಬೆಳೆ ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ. ಉಪಮುಖ್ಯಮಂತ್ರಿಯೂ ದಕ್ಷಿಣ ಕರ್ನಾಟಕದ ವಿವಿಧ ಭಾಗಗಳಿಗೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

ಬೆಳೆ ವಿಮೆಯಲ್ಲಿ ಮಧ್ಯವರ್ತಿಗಳ ಜಾಲ
ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರಿಗೆ ದೊರೆಯಬೇಕಾದ ಬೆಳೆ ವಿಮೆ ಪರಿಹಾರದಲ್ಲಿ ಮಧ್ಯವರ್ತಿಗಳ ಹಾವಳಿ ಕುರಿತು ಸರ್ಕಾರದ ಗಮನಕ್ಕೆ ಬಂದಿದೆ ಎಂದು ಶಿವಕುಮಾರ್ ಹೇಳಿದರು.

“ಬೆಳೆ ವಿಮೆ ಪರಿಹಾರದಲ್ಲಿ ಮಧ್ಯವರ್ತಿಗಳ ಹಾವಳಿ ಇದೆ. ರಾಜ್ಯಾದ್ಯಂತ ದೊಡ್ಡ ಜಾಲವೇ ಇದೆ ಎಂಬ ಮಾಹಿತಿ ಬಂದಿದೆ. ಈ ಬಗ್ಗೆ ಸಂಪೂರ್ಣ ವರದಿ ಪಡೆದುಕೊಂಡು ಬೆಂಗಳೂರಿನಲ್ಲಿ ಸಭೆ ನಡೆಸುತ್ತೇನೆ. ರೈತರಿಗೆ ನೇರವಾಗಿ ಪರಿಹಾರ ದೊರೆಯುವಂತೆ ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಭರವಸೆ ನೀಡಿದರು.

ಬರದ ನಡುವೆ ರೈತರ ಬೆಳೆ ನಷ್ಟ, ಸಾಲದ ಹೊರೆ ಮತ್ತು ಬೆಳೆ ವಿಮೆ ಪರಿಹಾರದ ಸಮಸ್ಯೆಗಳು ಸರ್ಕಾರದ ಮುಂದಿರುವ ಪ್ರಮುಖ ಸವಾಲುಗಳಾಗಿದ್ದು, ಕೇಂದ್ರದ ನೆರವು ಪಡೆಯಲು ರಾಜ್ಯ ಸರ್ಕಾರ ಸರ್ವಪಕ್ಷ ನಿಯೋಗದ ಮೂಲಕ ಒತ್ತಡ ಹೇರುವ ನಿರ್ಧಾರ ಕೈಗೊಂಡಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು