ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ತಂಬಾಕು ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸಿದ ಸರ್ಕಾರ: ಕರ್ನಾಟಕದಲ್ಲಿ ಹೊಸ ತಿದ್ದುಪಡಿ ಜಾರಿ

P

Peepal Media • ರಾಜ್ಯ

• 1 ನಿಮಿಷದ ಓದು

ತಂಬಾಕು ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸಿದ ಸರ್ಕಾರ: ಕರ್ನಾಟಕದಲ್ಲಿ ಹೊಸ ತಿದ್ದುಪಡಿ ಜಾರಿ

ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಸೇವನೆಯ ವಿರುದ್ಧ ತನ್ನ ಹೋರಾಟವನ್ನು ತೀವ್ರಗೊಳಿಸಿದ್ದು, ಇತ್ತೀಚೆಗೆ ಸಿಗರೇಟುಗಳ ಮತ್ತು ಇತರೆ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ಮತ್ತು ವಿತರಣೆ) (ಕರ್ನಾಟಕ ತಿದ್ದುಪಡಿ) ಅಧಿನಿಯಮ 2024ಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಈ ಹೊಸ ಕಾನೂನು ಜಾರಿಯಾದ ನಂತರ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆಗೆ ಕಠಿಣ ನಿರ್ಬಂಧಗಳು ಜಾರಿಗೆ ಬಂದಿವೆ.

ಹೊಸ ನಿಯಮಗಳು ಏನು?
ಹುಕ್ಕಾ ಬಾರ್‌ಗಳ ಸಂಪೂರ್ಣ ನಿಷೇಧ: ಈ ಅಧಿನಿಯಮದಡಿ ಹುಕ್ಕಾ ಬಾರ್‌ಗಳನ್ನು ತೆರೆಯುವುದು ಅಥವಾ ನಡೆಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆಯ ನಿಷೇಧ: ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಜಗಿಯುವುದು, ಉಗುಳುವುದು, ಅಥವಾ ಧೂಮಪಾನ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಉಲ್ಲಂಘಿಸಿದವರಿಗೆ 1,000 ರೂಪಾಯಿ ದಂಡ ವಿಧಿಸಲಾಗುತ್ತದೆ.

ವಯಸ್ಸಿನ ಮಿತಿ ಮತ್ತು ದಂಡ ಹೆಚ್ಚಳ: ತಂಬಾಕು ಖರೀದಿಸುವ ವಯಸ್ಸಿನ ಮಿತಿಯನ್ನು 21 ವರ್ಷಕ್ಕೆ ಏರಿಸಲಾಗಿದ್ದು, ಉಲ್ಲಂಘನೆಗೆ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು ಹೆಚ್ಚಿಸಲಾಗಿದೆ.

ಸಾರ್ವಜನಿಕ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಸರ್ಕಾರ ಹೇಳಿದೆ. ತಂಬಾಕು ಸೇವನೆಯಿಂದ ಆಗುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟುವ ಜೊತೆಗೆ, ಯುವ ಜನರಲ್ಲಿ ಈ ದುಶ್ಚಟವನ್ನು ತಡೆಯುವ ಗುರಿಯನ್ನು ಸರ್ಕಾರ ಹೊಂದಿದೆ. “ತಂಬಾಕು ಕೇವಲ ಆರೋಗ್ಯವನ್ನಷ್ಟೇ ಹಾಳು ಮಾಡುವುದಿಲ್ಲ, ಇದು ನಮ್ಮ ಮನೆ, ಭವಿಷ್ಯ ಹಾಗೂ ದೇಶವನ್ನೇ ದುರ್ಬಲಗೊಳಿಸುತ್ತದೆ” ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version