ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಾಲ್ತುಳಿತ ಪ್ರಕರಣದಿಂದ ಎಚ್ಚೆತ್ತ ಸರ್ಕಾರ; ಇನ್ಮುಂದೆ ಯಾವುದೇ ಸಮಾರಂಭಕ್ಕೆ ಈ ಮಾರ್ಗಸೂಚಿ ಪಾಲನೆ ಕಡ್ಡಾಯ

PPeepal Media Desk

Peepal Media Desk • ಮೀಡಿಯಾ, ರಾಜ್ಯ

• 1 ನಿಮಿಷದ ಓದು

ಕಾಲ್ತುಳಿತ ಪ್ರಕರಣದಿಂದ ಎಚ್ಚೆತ್ತ ಸರ್ಕಾರ; ಇನ್ಮುಂದೆ ಯಾವುದೇ ಸಮಾರಂಭಕ್ಕೆ ಈ ಮಾರ್ಗಸೂಚಿ ಪಾಲನೆ ಕಡ್ಡಾಯ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ಕಾಲ್ತುಳಿತದ ದುರ್ಘಟನೆಯಿಂದ ಎಚ್ಚೆತ್ತ ರಾಜ್ಯ ಸರ್ಕಾರ ಈಗ ಬೃಹತ್‌ ಸಭೆ, ಸಮಾರಂಭ, ವಿಜಯೋತ್ಸವ ಕಾರ್ಯಕ್ರಮಗಳಿಗೆಂದೇ ಬಿಗಿಯಾದ ಮಾರ್ಗಸೂಚಿ (ಎಸ್‌ಒಪಿ/ ಸ್ಟ್ಯಾಂಡರ್ಡ್‌ ಆಪರೇಟಿಂಗ್‌ ಪ್ರೊಸೀಜರ್‌) ಹೊರಡಿಸಲು ನಿರ್ಧರಿಸಿದೆ. ಯಾವುದೇ ಅಹಿತಕರ ದುರ್ಘಟನೆ ನಡೆದರೆ ಅದರ ಆಯೋಜಕರೇ ಇದಕ್ಕೆ ನೇರ ಹೊಣೆ ಆಗಬೇಕು ಎಂಬುದು ಈ ಮಾರ್ಗಸೂಚಿಯಲ್ಲಿ ಅಡಕವಾಗಿದೆ.

ಈಗಾಗಲೇ ಇರುವ ನಿಯಮಾವಳಿಗಳ ಅಡಿಯಲ್ಲಿ ಈ ಹೊಸ ನಿಯಮಗಳನ್ನು ರೂಪಿಸಲಾಗಿದೆ. ಹೊಸ ಪರಿಷ್ಕೃತ ಎಸ್‌ಒಪಿ ಪಾಲನೆಗೆ ಸಂಬಂಧಿಸಿದ ಸಂಘ, ಸಂಸ್ಥೆಗಳು, ರಾಜಕೀಯ ಪಕ್ಷಗಳು ಮುಚ್ಚಳಿಕೆ ಬರೆದುಕೊಟ್ಟ ಬಳಿಕವೇ ಸಭೆಗಳಿಗೆ ಅನುಮತಿ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಈ SOP ಕೇವಲ ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಯಾವುದೇ ಮೂಲೆಯಲ್ಲಿ ಸಭೆ ಸಮಾರಂಭ ಮತ್ತು ಮೆರವಣಿಗೆ ನಡೆಯುವ ಸಂದರ್ಭದಲ್ಲಿ ಅನ್ವಯವಾಗಲಿದೆ. ಜತೆಗೆ ಸಾರ್ವಜನಿಕ ಸಮಾರಂಭಗಳಲ್ಲಿಈ ಸೂಚನೆಯನ್ನು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಪರಮೇಶ್ವರ್ ”ರಾಜ್ಯದಲ್ಲಿ ಇನ್ನು ಮುಂದೆ ಬೃಹತ್‌ ಸಭೆ, ಸಮಾರಂಭ, ವಿಜಯೋತ್ಸವಗಳ ವೇಳೆ ನಿಯಮಾವಳಿಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಸಂಬಂಧ ಹೊಸ ಎಸ್‌ಒಪಿ ಮಾಡಲಾಗುವುದು,” ಎಂದು ಹೇಳಿದರು.

”ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ನಡೆದ ಘಟನೆ ಮರುಕಳಿಸಬಾರದು. ಇಂತಹ ವಿಜಯೋತ್ಸವ, ಸಭೆ, ಸಮಾರಂಭಗಳನ್ನು ಪೊಲೀಸ್‌ ಇಲಾಖೆ ನೀಡುವ ನಿರ್ದೇಶನದ ಚೌಕಟ್ಟಿನಲ್ಲೇ ಮಾಡಬೇಕು. ಅದಕ್ಕೆ ಬೇಕಾದ ಹೊಸ ಎಸ್‌ಒಪಿಯನ್ನು ಗೃಹ ಇಲಾಖೆಯಿಂದ ಹೊರಡಿಸಲಾಗುವುದು,” ಎಂದು ತಿಳಿಸಿದರು.

‘ಬುಧವಾರ ನಡೆದಿರುವ ಘಟನೆ ದುರದೃಷ್ಟಕರ. ರಾಜ್ಯದ ಕ್ರಿಕೆಟ್‌ ಇತಿಹಾಸದಲ್ಲಿಆಗಿರಲಿಲ್ಲ. ಘಟನೆಗೆ ಸಂಬಂಧಿಸಿದಂತೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಎಲ್ಲಿಲೋಪವಾಗಿದೆ ಎಂಬುದನ್ನು ಪರಿಶೀಲಿಸುತ್ತೇವೆ. ಮತ್ತೆ ಎಂದೂ ಈ ರೀತಿ ಅಮಾಯಕರ ಸಾವುಗಳು ಸಂಭವಿಸಬಾರದು. ಇದೆಲ್ಲವನ್ನು ನೋಡಿದಾಗ ನೋವಾಗುತ್ತದೆ. 20-25 ವರ್ಷ ವಯಸ್ಸಿನವರು ಸಂತೋಷದಿಂದ ಆಚರಣೆಗೆ ಬಂದಾಗ ಜೀವವನ್ನೇ ಕಳೆದುಕೊಂಡಿದ್ದಾರೆ. ಇದೆಲ್ಲವನ್ನು ಊಹೆ ಮಾಡಿರಲಿಲ್ಲ. ಈಗಾಗಲೇ ತನಿಖೆಗೆ ಆದೇಶಿಸಲಾಗಿದ್ದು, ನಂತರ ಸೂಕ್ತ ಕ್ರಮವಾಗಲಿದೆ,” ಎಂದರು.

PPeepal Media Desk

Peepal Media Desk

Peepal Media · ಮೀಡಿಯಾ ವಿಭಾಗ

ಸಂಬಂಧಿತ ಸುದ್ದಿಗಳು