ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಚಿಲ್ಲರೆ ಹಣ ಇಲ್ಲ ಎಂಬ ನೆಪದಲ್ಲಿ ಪ್ರಯಾಣಿಕರನ್ನು ಬಸ್‌ನಿಂದ ಕೆಳಗಿಳಸಿದರೆ ಕಠಿಣ ಕ್ರಮ – ಸರ್ಕಾರ ವಾರ್ನಿಂಗ್

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ • ರಾಜ್ಯ

• 1 ನಿಮಿಷದ ಓದು

ಚಿಲ್ಲರೆ ಹಣ ಇಲ್ಲ ಎಂಬ ನೆಪದಲ್ಲಿ ಪ್ರಯಾಣಿಕರನ್ನು ಬಸ್‌ನಿಂದ  ಕೆಳಗಿಳಸಿದರೆ ಕಠಿಣ ಕ್ರಮ – ಸರ್ಕಾರ ವಾರ್ನಿಂಗ್

ಬೆಂಗಳೂರು: ಬಸ್ ಪ್ರಯಾಣಿಕರು ಚಿಲ್ಲರೆ ಹಣ (ಚೇಂಜ್) ಹೊಂದಿಲ್ಲ ಎಂಬ ಕಾರಣಕ್ಕೆ ಅವರನ್ನು ಕಿರುಕುಳ ನೀಡುವುದು ಅಥವಾ ಮಧ್ಯದಲ್ಲೇ ಬಸ್‌ನಿಂದ ಇಳಿಸುವುದು ಸಹಿಸಲಾಗದ ವರ್ತನೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಹೇಳಿದ್ದು, ದುರ್ವರ್ತನೆ ತೋರುವ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಬುಧವಾರ ಪ್ರಕಟಣೆ ಹೊರಡಿಸಿದ ಸಚಿವರುಬಿಎಂಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಚಾಲಕರು ಮತ್ತು ನಿರ್ವಾಹಕರು ಪ್ರಯಾಣಿಕರೊಂದಿಗೆ ಗೌರವಯುತವಾಗಿ ವರ್ತಿಸಬೇಕು, ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಚಿಲ್ಲರೆ ಹಣ ಇಲ್ಲ ಎಂಬ ನೆಪದಲ್ಲಿ ಪ್ರಯಾಣಿಕರನ್ನು ಬಸ್‌ನಿಂದ ಇಳಿಸುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬಂದಿವೆ. ಇದೇ ರೀತಿಯ ಅನುಭವ ತಮಗೂ ಈ ತಿಂಗಳ ಆರಂಭದಲ್ಲಿ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುವಾಗ ಆಗಿತ್ತು.

ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ಪ್ರಯಾಣಿಕರನ್ನು ಅರ್ಧ ದಾರಿಯಲ್ಲಿ ಬಸ್‌ನಿಂದ ಇಳಿಸುವುದು ಅಮಾನವೀಯ ಕೃತ್ಯವಾಗಿದ್ದು, ಇದು ಪ್ರಯಾಣಿಕರಿಗೆ ಕಿರುಕುಳ ನೀಡಿದಂತೆಯೇ. ಇಂತಹ ಪದ್ಧತಿ ಕೂಡಲೇ ನಿಲ್ಲಬೇಕು. ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸಿದರೆ ಸಂಬಂಧಿಸಿದ ನಿರ್ವಾಹಕರು ಹಾಗೂ ಚಾಲಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ, ಜುಲೈ 11ರಂದು ಸಚಿವ ಬೈರತಿ ಸುರೇಶ್ ಅವರನ್ನು ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ಬಸ್‌ನಿಂದ ಇಳಿಯುವಂತೆ ಹೇಳಿದ್ದ ಬಿಎಂಟಿಸಿ ನಿರ್ವಾಹಕ ಟಿ.ಜಿ. ರಾಮಕೃಷ್ಣ ಅವರ ಅಮಾನತು ಆದೇಶವನ್ನು ಹಿಂಪಡೆಯುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬುಧವಾರ ಸಚಿವರನ್ನು ಭೇಟಿಯಾದ ಟಿ.ಜಿ. ರಾಮಕೃಷ್ಣ ಅವರು ನಡೆದ ಘಟನೆಗೆ ವಿಷಾದ ವ್ಯಕ್ತಪಡಿಸಿ ಕ್ಷಮೆಯಾಚಿಸಿದರು.

ಬಳಿಕ ಸಚಿವರು ಅವರ ಅಮಾನತನ್ನು ಹಿಂಪಡೆದು ಕರ್ತವ್ಯಕ್ಕೆ ಮರುನೇಮಕ ಮಾಡುವಂತೆ ಸೂಚಿಸಿದರೂ, ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸುವಂತೆ ನಿರ್ದೇಶನ ನೀಡಿದರು.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು