ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕನ್ನಡ ಬೋರ್ಡ್‌ ಕಡ್ಡಾಯ: 2 ವಾರಗಳ ಕಾಲ ಗಡುವು ವಿಸ್ತರಿಸಿದ ಸರ್ಕಾರ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಕನ್ನಡ ಬೋರ್ಡ್‌ ಕಡ್ಡಾಯ: 2 ವಾರಗಳ ಕಾಲ ಗಡುವು ವಿಸ್ತರಿಸಿದ ಸರ್ಕಾರ

ಕರ್ನಾಟಕ ಸರ್ಕಾರವು ವಾಣಿಜ್ಯ ಸಂಸ್ಥೆಗಳು ಮತ್ತು ಕಚೇರಿಗಳಿಗೆ ಶೇಕಡಾ 60ರಷ್ಟು ಕನ್ನಡ ಭಾಷೆಯ ನಾಮಫಲಕಗಳನ್ನು ಬಳಸುವ ಆದೇಶವನ್ನು ಅನುಸರಿಸಲು ಎರಡು ವಾರಗಳ ವಿಸ್ತರಣೆಯನ್ನು ಗುರುವಾರ ಪ್ರಕಟಿಸಿದೆ.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈ ಕುರಿತು ತಮ್ಮ X ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಬೆಂಗಳೂರಿನ ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದಕಡೆ ಶೇ.60ರಷ್ಟು‌ ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ‌ ಕಾಲ ವಿಸ್ತರಿಸಲಾಗಿದೆ.

ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿ‌ಹಿಡಿಯುವುದು ಅತಿ ಮುಖ್ಯ. 2 ವಾರಗಳ‌ ನಂತರ ಎಲ್ಲರೂ ಕಾನೂನು ಪಾಲನೆ ಮಾಡುತ್ತಾರೆ‌ ಎಂದು ನಿರೀಕ್ಷಿಸಿದ್ದೇನೆ.” ಎಂದು ಅವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ, ನಗರದ ಪೂರ್ವ ಭಾಗದ ತಂಬುಚೆಟ್ಟಿಪಾಳ್ಯ ರಸ್ತೆಯಲ್ಲಿರುವ ಅಂಗಡಿಗಳಇಂಗ್ಲಿಷ್ ನಾಮಫಲಕಗಳನ್ನು ಕೆಲವು ಬಿಬಿಎಂಪಿ ಪೌರಕಾರ್ಮಿಕರು ತೆಗೆದುಹಾಕುವ ವೀಡಿಯೊಗಳು ವೈರಲ್ ಆದ ನಂತರ ಶನಿವಾರ ಕನ್ನಡ ಬೋರ್ಡ್‌ ಆಳವಡಿಸುವ ಕೆಲಸ ವೇಗಗೊಂಡಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಆಡಳಿತದ ರಾಜ್ಯ ಸರ್ಕಾರವು ರಾಜ್ಯದಲ್ಲಿ ಹುಟ್ಟಿ, ಬೆಳೆದು ಇಲ್ಲಿ ವಾಸಿಸುತ್ತಿರುವವರಿಗೆ ಬದ್ಧವಾಗಿದೆ ಎಂದು ಹೇಳಿದ್ದರು. ಅಂದು ಸಂಸ್ಥೆಗಳಿಗೆ ಶೇ.60ರಷ್ಟು ಕನ್ನಡ ಇರುವ ನಾಮಫಲಕ ಹಾಕುವಂತೆ ತಿಳಿಸಲಾಗುವುದು ಎಂದಿದ್ದರು.

“ಫೆಬ್ರವರಿ 28, 2024ರ ಮೊದಲು ಕಂಪನಿಗಳು, ಸಂಸ್ಥೆಗಳು ಮತ್ತು ಇತರ ಅಂಗಡಿಗಳು ತಮ್ಮ ನಾಮಫಲಕಗಳನ್ನು ಬದಲಾಯಿಸಲು ನಾನು ವಿನಂತಿಸುತ್ತೇನೆ. ಜನರು ಭಯಪಡುವ ಅಗತ್ಯವಿಲ್ಲ” ಎಂದು ಕರ್ನಾಟಕ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು