ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ಬಿ ಕೆ ಸಿಂಗ್‌ ನೇತ್ರತ್ವದ ವಿಶೇಷ ತಂಡವನ್ನು ರಚಿಸಿದ ಸರ್ಕಾರ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ಬಿ ಕೆ ಸಿಂಗ್‌ ನೇತ್ರತ್ವದ ವಿಶೇಷ ತಂಡವನ್ನು ರಚಿಸಿದ ಸರ್ಕಾರ

ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಸರಣಿ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತನಿಖೆಯನ್ನು ಇನ್ನಷ್ಟು ತೀವ್ರಗೊಳಿಸುವ ನಿಟ್ಟಿನಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಿ ಆದೇಶ ಹೊರಡಿಸಿದೆ.

ಈ ತನಿಖಾ ತಂಡವು ಮುನಿರತ್ನ ವಿರುದ್ಧ ಹೊರಿಸಲಾಗಿರುವ ಆರೋಪಗಳ ಕುರಿತು ಕೂಲಂಕುಷವಾಗಿ ತನಿಖೆ ನಡಸಲಿದೆ. ತನಿಖಾ ತಂಡದ ಚುಕ್ಕಾಣಿಯನ್ನು ಸರ್ಕಾರ ಬಿ.ಕೆ.ಸಿಂಗ್ ಅವರಿಗೆ ವಹಿಸಿದೆ. ಬಿ ಕೆ ಸಿಂಗ್‌ ಈ ಹಿಂದೆ ಪ್ರಜ್ವಲ್‌ ರೇವಣ್ಣ ಪ್ರಕರಣದ ತನಿಖೆಗಾಗಿ ನಿಯೋಜಿಸಿದ್ದ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿಯೂ ಕಾರ್ಯನಿರ್ವಹಿಸಿದ್ದರು.

ಉಳಿದಂತೆ ತಂಡದ ಸದಸ್ಯರಾಗಿ ಲಾಭೂರಾಮ್‌ (ಐಪಿಎಸ್)‌, ಸೌಮ್ಯಲತಾ (ಐಪಿಎಸ್) ಸಿ.ಎ ಸೈಮನ್ (ಪೊಲೀಸ್‌ ಅಧೀಕ್ಷಕರು) ತಂಡದ ಸದಸ್ಯರಾಗಿರಲಿದ್ದಾರೆ.

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಬಂಧಿಸಲ್ಪಟ್ಟ ಶಾಸಕ ಜೈಲು ಸೇರುತ್ತಿದ್ದಂತೆ ಮುನಿರತ್ನ ವಿರುದ್ಧ ಅತ್ಯಾಚಾರ, ಬ್ಲ್ಯಾಕ್ ಮೇಲ್, ಹನಿಟ್ರ್ಯಾಪ್ ಪ್ರಕರಣ ದಾಖಲಾಗಿತ್ತು. ಜೈಲಿನಿಂದ ಬಿಡುಗಡೆಯಾಗಿ ಹೊರ ಬರುತ್ತಿದ್ದಂತೆ ಮುನಿರತ್ನ ಅವರನ್ನು ಅತ್ಯಾಚಾರ ಆರೋಪ ಪ್ರಕರಣದಲ್ಲಿ ಪೊಲೀಸರು ಮತ್ತೆ ಬಂಧಿಸಿದ್ದರು.

ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುನಿರತ್ನ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಈ ಮಧ್ಯೆ ರಾಜ್ಯ ಸರ್ಕಾರ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚನೆ ಮಾಡಿ ಆದೇಶ ಹೊರಡಿಸಿದೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು