ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸರ್ಕಾರ ಏನಾದರೂ ಮಾಡಿ ನನ್ನನ್ನು ಒಳಗೆ ತಳ್ಳಲು ನೋಡುತ್ತಿದೆ: ಚಕ್ರವರ್ತಿ ಸೂಲಿಬೆಲೆ

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ಸರ್ಕಾರ ಏನಾದರೂ ಮಾಡಿ ನನ್ನನ್ನು ಒಳಗೆ ತಳ್ಳಲು ನೋಡುತ್ತಿದೆ: ಚಕ್ರವರ್ತಿ ಸೂಲಿಬೆಲೆ

ಶಿವಮೊಗ್ಗ: ಕೋಮು ಹಿಂಸೆ ತಡೆ ಪಡೆ ರಚನೆಯಾಗುತ್ತಿದ್ದ ಹಾಗೆಯೇ ಸದಾ ದ್ವೇಷ ಭಾಷಣಗಳಿಂದ ಸುದ್ದಿಯಲ್ಲಿರುವ ಚಕ್ರವರ್ತಿ ಸೂಲಿಬೆಲೆ ಅಲರ್ಟ್‌ ಆಗಿದ್ದಾರೆ. ಅವರು ಈ ಕುರಿತು ಹೇಳಿಕೆ ನೀಡಿದ್ದು ಸರ್ಕಾರ ನನ್ನನ್ನು ಹೇಗಾದರೂ ಮಾಡಿ ಒಳಗೆ ಹಾಕಲು ನೋಡುತ್ತಿದೆ ಎಂದಿದ್ದಾರೆ,

ಬುಧವಾರ(ಜೂ11) ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ ”ಕಾಂಗ್ರೆಸ್ ನನ್ನನ್ನ ಹೇಟ್ ಮಾಡುತ್ತದೆ ಎಂದು ಹೇಳಿದ್ದಾರೆ. ”ಹಿಂದೂ ಮುಖಂಡರು, ಕಾರ್ಯಕರ್ತರನ್ನ ರಾಜ್ಯ ಕಾಂಗ್ರೆಸ್ ಸರಕಾರ ಟಾರ್ಗೆಟ್ ಮಾಡುತ್ತಿದೆ” ಎಂದು ಚಕ್ರವರ್ತಿ ಸೂಲಿಬೆಲೆ ಗಂಭೀರ ಆರೋಪ ಮಾಡಿದ್ದಾರೆ.

ನನ್ನನ್ನು ಕಂಡರೆ ಅವರಿಗೆ ಕೋಪ. ಐಜಿ- ಡಿಐಜಿಗಳು‌ ಎಲ್ಲಾ ಪೊಲೀಸ್ ಠಾಣೆಗೆ ಮಾಹಿತಿ ಕೇಳಿದ್ದಾರೆ.2022 ರಿಂದ 2025 ರ ಜೂನ್ ವರೆಗೆ ಯಾವ್ಯಾವ ಕೇಸ್ ಗಳು ಇವೆ ಎಂದು ಮಾಹಿತಿ ಕೇಳಿದ್ದಾರೆ.ಹೇಗಾದರೂ ಮಾಡಿ, ಒಳಗೆ ಹಾಕಿ ಧ್ವನಿ ಅಡಗಿಸಲು ನೋಡುತ್ತಿದ್ದಾರೆ ಎಂದರು.

”ನಾನು ಇದಕ್ಕೆಲ್ಲಾ ಹೆದರುವುದಿಲ್ಲ, ಐ ಡೋಂಟ್ ಕೇರ್, ಐ ಡೋಂಟ್ ಮೈಂಡ್ . ನೀವು ನನ್ನ ಒಳಗೆ ಹಾಕಿದರೆ ತುಂಬಾ ದಿನದಿಂದ ಓದದೇ ಇರುವ 15-20 ಪುಸ್ತಕ ಇದ್ದಾವೆ. ಅದೆಲ್ಲವನ್ನೂ ಓದಿ ಮುಗಿಸಿ ಹೊರಗೆ ಬರುತ್ತೇನೆ” ಎಂದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು