ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮೀಸಲಾತಿ ವಿಷಯದಲ್ಲಿ ಸರ್ಕಾರ SC-ST ಸಮುದಾಯವನ್ನು ತಪ್ಪುದಾರಿಗೆಳೆಯುತ್ತಿದೆ: ಸಿದ್ದರಾಮಯ್ಯ

PPeepal Media Desk

Peepal Media Desk • ರಾಜ್ಯ

• 1 ನಿಮಿಷದ ಓದು

<strong>ಮೀಸಲಾತಿ ವಿಷಯದಲ್ಲಿ ಸರ್ಕಾರ SC-ST ಸಮುದಾಯವನ್ನು ತಪ್ಪುದಾರಿಗೆಳೆಯುತ್ತಿದೆ: ಸಿದ್ದರಾಮಯ್ಯ</strong>

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ನಿರ್ಧಾರವನ್ನು ತಮ್ಮ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿರುವ ರಾಜ್ಯದ ಬಿಜೆಪಿ ಸರ್ಕಾರ, ಈ ಹೆಚ್ಚಳದ ಅನುಷ್ಠಾನದ ಪ್ರಕ್ರಿಯೆ ಬಗ್ಗೆ ವಿವರ ನೀಡದೆ ಮೌನವಾಗಿದ್ದುಕೊಂಡು ಎಸ್ ಸಿ/ಎಸ್ ಟಿ ಸಮುದಾಯವನ್ನು ತಪ್ಪುದಾರಿಗೆಳೆಯುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೂರಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಸ್ ಸಿ/ಎಸ್ ಟಿ ಮೀಸಲಾತಿ ಯನ್ನು ಹೆಚ್ಚಿಸಬೇಕೆಂಬ ಬೇಡಿಕೆಯ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯನ್ನು ನೇಮಿಸಿತ್ತು. ಸಮಿತಿಯ ಶಿಫಾರಸುಗಳಿಗೆ ಅನುಗುಣವಾಗಿ ಎಸ್ ಸಿ/ಎಸ್ ಟಿ ಮೀಸಲಾತಿಯನ್ನು ಕ್ರಮವಾಗಿ ಶೇ.17 ಮತ್ತು ಶೇ.7ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ. ಈ ಮೀಸಲಾತಿ ಹೆಚ್ಚಳದ ಅನುಷ್ಠಾನದ ಪ್ರಕ್ರಿಯೆ ದೀರ್ಘವಾದುದು ಮಾತ್ರವಲ್ಲ ಆಳುವ ಪಕ್ಷದ ರಾಜಕೀಯ ಇಚ್ಛಾಶಕ್ತಿಯನ್ನೂ ಅವಲಂಬಿಸಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಎಸ್ ಸಿ/ಎಸ್ ಟಿ ಸಮುದಾಯದ ಮೀಸಲಾತಿಯ ಹೆಚ್ಚಳವಾಗಬೇಕಾದರೆ ಮೊದಲು ರಾಜ್ಯದ ವಿಧಾನಮಂಡಲ ನಿರ್ಣಯ ಕೈಗೊಂಡು ಸಂವಿಧಾನದ ತಿದ್ದುಪಡಿಗಾಗಿ ಕೇಂದ್ರ ಸರ್ಕಾರಕ್ಕೆ ಕಳಿಸಬೇಕಾಗುತ್ತದೆ. ಕೇಂದ್ರ ಸರ್ಕಾರ ಸಂಸತ್ ನಲ್ಲಿ ಸಂವಿಧಾನ ತಿದ್ದುಪಡಿ ಮಸೂದೆಗೆ ಅಂಗೀಕಾರ ಪಡೆಯಬೇಕು. ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕಿದ ನಂತರ ಮೀಸಲಾತಿ ಹೆಚ್ಚಳ ಜಾರಿಯಾಗಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಮೀಸಲಾತಿ ಹೆಚ್ಚಳದ ಈ ಪ್ರಕ್ರಿಯೆ ಸುಲಭದ ಕೆಲಸ ಅಲ್ಲ.ರಾಜ್ಯದಲ್ಲಿ ಈಗ ಹಿಂದುಳಿದ ಜಾತಿಗಳಿಗೆ ಶೇ.32, ಪರಿಶಿಷ್ಟ ಜಾತಿಗಳಿಗೆ ಶೇ.15 ಮತ್ತು ಪರಿಶಿಷ್ಟ ಪಂಗಡಗಳಿಗೆ ಶೇ.3ರಷ್ಟು ಅಂದರೆ ಒಟ್ಟು ಶೇ.50ರಷ್ಟು ಮೀಸಲಾತಿ ಇದೆ. ಎಸ್ ಸಿ/ಎಸ್ ಟಿ ಮೀಸಲು ಹೆಚ್ಚಳದಿಂದ ಈ ಪ್ರಮಾಣ ಶೇ.56ರಷ್ಟು ಆಗಲಿದೆ ಎಂದರು.

ಸುಪ್ರೀಂ ಕೋರ್ಟ್ (ಇಂದಿರಾ ಸಹಾನಿ ಪ್ರಕರಣದ) ತೀರ್ಪಿನ ಪ್ರಕಾರ ಒಟ್ಟು ಮೀಸಲಾತಿ ಶೇ.ಐವತ್ತನ್ನು ಮೀರುವಂತಿಲ್ಲ. ಈ ಮಿತಿಯನ್ನು ಮೀರದೆ ಎಸ್ ಸಿ/ಎಸ್ ಟಿ ಮೀಸಲಾತಿಯನ್ನು ಒಟ್ಟು ಶೇ.ಆರರಷ್ಟು ಹೆಚ್ಚಿಸಲು ಹೇಗೆ ಸಾಧ್ಯ? ಇದರ ಬಗ್ಗೆ ತನ್ನ ನಿಲುವನ್ನು ರಾಜ್ಯ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು