ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಜ್ಯ ಸರ್ಕಾರ ಕನ್ನಡ ಪರ ಹೋರಾಟಗಾರರ ಧ್ವನಿ ಹತ್ತಿಕ್ಕುವ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಚಂದ್ರು

PPeepal Media Desk

Peepal Media Desk ರಾಜ್ಯ

• 2 ನಿಮಿಷದ ಓದು

ರಾಜ್ಯ ಸರ್ಕಾರ ಕನ್ನಡ ಪರ ಹೋರಾಟಗಾರರ ಧ್ವನಿ ಹತ್ತಿಕ್ಕುವ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ರಾಜ್ಯಗಳು ಉದಯವಾಗಿರುವುದೇ ಭಾಷೆಯ ಆಧಾರದ ಮೇಲೆ. ಕನ್ನಡ ಕಡ್ಡಾಯ ಎನ್ನುವ ಕಾನೂನು ಇದ್ದರೂ ಪಾಲಿಸದೇ ಇದ್ದಾಗ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದರು. ಅದನ್ನು ಎತ್ತಿ ತೋರಿಸಿದ್ದಕ್ಕೆ ಕನ್ನಡ ಪರ ಹೋರಾಟಗಾರರನ್ನು ಬಂಧಿಸಲಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಅಸಮಾಧಾನ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿನ ವಾಣಿಜ್ಯ ಸಂಸ್ಥೆಗಳ ನಾಮಫಲಕಗಳು ಕನ್ನಡದಲ್ಲಿಯೇ ಇರಬೇಕು ಎಂಬ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕನ್ನಡಪರ ಸಂಘಟನೆಗಳು ನಡೆಸುತ್ತಿರುವ ಹೋರಾಟಕ್ಕೆ ಆಮ್ ಆದ್ಮಿ ಪಕ್ಷ ಹಾಗೂ ಕರ್ನಾಟಕ ಜಲಸಂರಕ್ಷಣಾ ಸಮಿತಿ ಬೆಂಬಲ ವ್ಯಕ್ತಪಡಿಸಿದೆ. ರಾಜ್ಯ ಸರ್ಕಾರವು ಅಕ್ರಮವಾಗಿ ಬಂಧಿಸಿರುವ ಕನ್ನಡಪರ ಹೋರಾಟಗಾರರನ್ನು ಈ ಕೂಡಲೇ ಬಿಡುಗಡೆ ಮಾಡಬೇಕು ಮತ್ತು ಕನ್ನಡಪರ ಹೋರಾಟಗಾರರ ಮೇಲೆ ದಾಖಲಿಸಿರುವ ಎಲ್ಲಾ ಕೇಸುಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ನಗರದ ಫ್ರೀಡಂಪಾರ್ಕ್‌ನಲ್ಲಿ ಡಾ. ಮುಖ್ಯಮಂತ್ರಿ ಚಂದ್ರು ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಮುಖ್ಯಮಂತ್ರಿ ಚಂದ್ರು, ಕನ್ನಡ ಪರ ಹೋರಾಟಗಾರರು ಯಾರ ಮೇಲಾದ್ರೂ ಹಲ್ಲೆ ಮಾಡಿದ್ದಾರ? ಕಾನೂನಿಗೆ ವಿರುದ್ಧವಾಗಿ ಹಾಕಿರುವ ನಾಮಫಲಕ ಕಿತ್ತುಹಾಕಿದ್ದಾರೆ. ನಿಯಮ ಪಾಲನೆಯಾಗಿಲ್ಲ ಎನ್ನುವುದನ್ನು ಎತ್ತಿ ತೋರಿಸಿದ್ದಾರೆ ಅಷ್ಟಕ್ಕೆ ಬಂಧಿಸಲಾಗಿದೆ. ಕೋಟಿ ಕೋಟಿ ಲೂಟಿ ಮಾಡಿದವರು, ಭ್ರಷ್ಟಾಚಾರ ಮಾಡಿವರನ್ನು ಸುಮ್ಮನೆ ಬಿಡುವ ಸರ್ಕಾರ, ನಾಡು ನುಡಿಗಾಗಿ ಧ್ವನಿ ಎತ್ತಿದವರನ್ನು ಬಂಧಿಸುತ್ತಿದೆ. ಈ ಮೂಲಕ ಕನ್ನಡ ಪರ ಹೋರಾಟಗಾರರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದರು.

ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಇರಬೇಕು ಎನ್ನುವ ನಿಯಮ ಇದ್ದರೂ ಯಾಕೆ ಪಾಲನೆಯಾಗುತ್ತಿಲ್ಲ, ಅಧಿಕಾರಿಗಳು ಏನು ಮಾಡುತ್ತಿದ್ದಾರೆ. ಹೋರಾಟ ಮಾಡುವ ಮುನ್ನವೇ ಎಚ್ಚೆತ್ತು ಕನ್ನಡ ನಾಮಫಲಕ ಹಾಕದವರ ವಿರುದ್ಧ ಕ್ರಮ ತೆಗೆದುಕೊಂಡಿದ್ದರೆ ಪ್ರತಿಭಟನೆ ಯಾಕೆ ನಡೆಯುತ್ತಿತ್ತು ಎಂದು ಪ್ರಶ್ನಿಸಿದರು.

ಕಾನೂನು ಪಾಲನೆಯಾಗಿಲ್ಲ ಅಂದಾಗ ಬಿಬಿಎಂಪಿ ಅಧಿಕಾರಿಗಳು ಆ ನಾಮಫಲಕಗಳನ್ನು ತೆರವು ಮಾಡಬೇಕಿತ್ತು, ಅವರ ನಿರ್ಲಕ್ಷ್ಯ ಇದಕ್ಕೆಲ್ಲ ಕಾರಣ. ಹೋರಾಟ ಮಾಡುವವರೆಗೂ ಸುಮ್ಮನೆ ಇದ್ದು, ಈಗ ಫೆಬ್ರುವರಿ 28ರವರೆಗೆ ಗಡುವು ನೀಡಲಾಗಿದೆ. ರಾಜ್ಯದಾದ್ಯಂತ ಎಲ್ಲ ಕಡೆ ನಾಮಫಲಕಗಳಲ್ಲಿ ನಿಯಮದಂತೆ ಕನ್ನಡ ಕಡ್ಡಾಯ ಆಗಬೇಕು ಎಂದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಮಾತನಾಡುತ್ತಾ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಚಿವ ಎಂಬಿ ಪಾಟೀಲ್ ಅವರು ಯಾರ ಪರವಾಗಿ ಇದ್ದೀರಾ?. ನಾಡದ್ರೋಹಿಗಳು, ಶ್ರೀಮಂತರು, ನೆಲದ ಕಾನೂನು ಪಾಲಿಸದವರ ಪರವಾಗಿ ನಿಲ್ಲಬೇಡಿ. ಹೀಗೆ ಮಾಡಿದ್ರೆ ಬಂಡವಾಳ ಹೂಡಲ್ಲ ಅನ್ನುವ ಸಬೂಬು ಹೇಳುವುದು ಬಿಡಿ. ನಿಮಗೆ ಕಿಕ್ ಬ್ಯಾಕ್ ಬರುತ್ತೆ ಎಂದು ರಾಜ್ಯವನ್ನು ಬಲಿ ಕೊಡಬೇಡಿ, ಭಾಷೆಗೆ ಧಕ್ಕೆ ತರಬೇಡಿ ಎಂದು ಎಚ್ಚರಿಕೆ ನೀಡಿದರು.

ಕನ್ನಡ, ಕನ್ನಡಿಗರು, ಕರ್ನಾಟಕ ಹಾಳಾಗಿ ಹೋದರೂ ಚಿಂತೆಯಿಲ್ಲ ನನಗೆ ಬರಬೇಕಾದ ಕಿಕ್‌ ಬ್ಯಾಕ್ ಬರಲಿ ಎನ್ನುವಂತೆ ಸಚಿವ ಎಂಬಿ ಪಾಟೀಲ್ ಮಾತನಾಡಿದ್ದಾರೆ. ಇಂತಹ ಸರ್ಕಾರ ನಮಗೆ ಬೇಕಾ ಎಂದು ಅವರು ಪ್ರಶ್ನಿಸಿದರು.

ರಾಜ್ಯದಾದ್ಯಂತ ಹೋರಾಟವನ್ನು ವಿಸ್ತರಿಸಲಾಗುವುದು. ಕಾನೂನು ಪ್ರಕಾರವೇ ನಮ್ಮ ಹೋರಾಟ ನಡೆಯಲಿದೆ. ನಾಮಫಲಕ ಮಾತ್ರವೇ ಅಲ್ಲ, ಕನ್ನಡಿಗರಿಗೆ ಉದ್ಯೋಗ ಬೇಕು. ಶಿಕ್ಷಣದಲ್ಲಿ ಕನ್ನಡ ಬೇಕು, ಕರ್ನಾಟಕದಲ್ಲಿ ಕನ್ನಡಕ್ಕೆ ಸಿಗಬೇಕಾದ ಆದ್ಯತೆ ಸಿಗಬೇಕು ಅಲ್ಲಿವರೆಗೂ ಹೋರಾಟ ಮುಂದುವರೆಯಲಿದೆ ಎಂದು ಮೋಹನ್ ದಾಸರಿ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಡಾ. ರಮೇಶ್ ಬೆಲ್ಲಂಕೊಂಡ, ಜಗದೀಶ್ ವಿ ಸದಂ, ಜಗದೀಶ್ ಚಂದ್ರ, ಸುಷ್ಮಾ ವೀರ, ಅಶೋಕ್ ಮೃತ್ಯುಂಜಯ, ಜಗದೀಶ್ ಬಾಬು ಸೇರಿದಂತೆ ಪಕ್ಷದ ಇತರ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು. ಹಲವು ಕನ್ನಡಪರ ಸಂಘಟನೆಗಳು ಭಾಗವಹಿಸಿದ್ದವು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು