ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರ 6 ಕೋಟಿ ರೂ. ನಗದು ಬಹುಮಾನ ನೀಡಲಿದೆ-ಮುಖ್ಯಮಂತ್ರಿ ಸಿದ್ದರಾಮಯ್ಯ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರ 6 ಕೋಟಿ ರೂ. ನಗದು ಬಹುಮಾನ ನೀಡಲಿದೆ-ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಸೆಪ್ಟೆಂಬರ್ 22: ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಕರ್ನಾಟಕ ಸರ್ಕಾರ 6 ಕೋಟಿ ರೂ. ನಗದು ಬಹುಮಾನ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟ ವನ್ನು ಉದ್ಘಾಟಿಸಿ ಮಾತನಾಡಿದರು.

ಈ ಕ್ರೀಡಾಕೂಟದಲ್ಲಿ ಒಂದು ವಿಭಾಗದಿಂದ 720 ಕ್ರೀಡಾಪಟುಗಳಂತೆ 5 ವಿಭಾಗಗಳಿಂದ ಒಟ್ಟು 3600 ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳಿಗೆ ಶುಭಕೋರಿದ ಮುಖ್ಯಮಂತ್ರಿಗಳು, ಸೋಲುಗೆಲುವುಗಳಿಗಿಂತ, ಕ್ರೀಡಾಮನೋಭಾವ ಮುಖ್ಯ. ಇಂದು ಚಾಮುಂಡಿವಿಹಾರ ಕ್ರೀಡಾಂಗಣದ ಗ್ಯಾಲರಿ ಹಾಗೂ ಈಜುಕೊಳಗಳಿಗೆ ಅತ್ಯಾಧುನಿಕ ಟೆನ್ಸೈಲ್ ಮೆಂಬ್ರೇನ್ ಛಾವಣಿ ಅಳವಡಿಸುವ ಮತ್ತು ಫುಟ್ಬಾಲ್ ಅಂಕಣ ನಿರ್ಮಿಸುವ ಕಾಮಗಾರಿಯನ್ನು ರೂ. 20.78 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ ಎಂದರು.

ವಿನೇಶ್ ಫೋಗಟ್ ಅವರು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟು
ಸಮಾರಂಭದಲ್ಲಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ
ಪ್ರಶಸ್ತಿ ಪುರಸ್ಕೃತ ಅಂತರರಾಷ್ಟ್ರೀಯ ಮಹಿಳಾ ಕುಸ್ತಿಪಟು ಶ್ರೀಮತಿ ವಿನೇಶ್ ಫೋಗಟ್ ಭಾಗವಹಿಸಿರುವುದು ವಿಶೇಷ. ಕುಸ್ತಿ ಕೇವಲ ಪುರುಷರ ಕ್ರೀಡೆ ಎಂದು ಪರಿಗಣಿಸಲಾಗಿದ್ದ ಕಾಲದಲ್ಲಿ ಸಾಮಾಜಿಕ ಅಡೆತಡೆಗಳು ಮತ್ತು ಹಿನ್ನಡೆಗಳನ್ನು ಅನುಭವಿಸಿದರೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಾಗಿದ್ದಾರೆ. ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ, ಭಾರತದ ಕೀರ್ತಿ ಮೆರೆದ ವಿನೇಶ್ ಅವರು ಹರಿಯಾಣ ರಾಜ್ಯದಲ್ಲಿ ಶಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.

ಕ್ರೀಡಾಪಟುಗಳಿಗೆ ಸರ್ಕಾರದ ನೆರವು
ಸರ್ಕಾರ ಕ್ರೀಡಾಪಟುಗಳಿಗೆ ಎಲ್ಲ ರೀತಿಯ ಸಹಕಾರವನ್ನು ನೀಡುತ್ತಿದೆ. ಮುಂದಿನ ಒಲಿಂಪಿಕ್ಸ್ಗೆ ತರಬೇತಿ ಪಡೆಯಲು ರಾಜ್ಯದ 60 ಅತ್ಯಂತ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ವಾರ್ಷಿಕ ತಲಾ ರೂ 10.00 ಲಕ್ಷ ಸಹಾಯಧನ ನೀಡಿ ತರಬೇತಿ ನೀಡಲಾಗುವುದು. ಅಲ್ಲದೇ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಪದಕವಿಜೇತ ಕ್ರೀಡಾಪಟುಗಳಿಗೆ ಸರ್ಕಾರ 6 ಕೋಟಿ ರೂ.ಗಳ ನಗದು ಬಹುಮಾನವನ್ನೂ ನೀಡಲಿದೆ. ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ಒದಗಿಸಲು ಎಲ್ಲ ಇಲಾಖೆಗಳಲ್ಲಿ ಶೇ.2 ರಷ್ಟು ಮೀಸಲಾತಿಯನ್ನೂ, ಹಾಗೂ ಪೊಲೀಸ್ ಇಲಾಖೆಯಲ್ಲಿ 2 ರಿಂದ ಶೇ.3 ರಷ್ಟು ಕ್ರೀಡಾಮೀಸಲಾತಿಯನ್ನು ನೀಡಲಾಗುತ್ತಿದೆ ಎಂದರು.
ಸದೃಢ ಆರೋಗ್ಯಕ್ಕೆ ಕ್ರೀಡೆ-ವ್ಯಾಯಾಮ
ಇಂದಿನ ಯುವಜನತೆ ಶಿಕ್ಷಣ ಹಾಗೂ ಕ್ರೀಡೆಗೆ ಹೆಚ್ಚು ಒತ್ತು ನೀಡಿದರೆ ಅವರ ದೈಹಿಕ ಹಾಗೂ ಮಾನಸಿಕ ವಿಕಸನಕ್ಕೆ ಸಹಕಾರಿಯಾಗಿದೆ. ಸದೃಢ ಆರೋಗ್ಯಕ್ಕೆ ಕ್ರೀಡೆ ಹಾಗೂ ವ್ಯಾಯಾಮ ಅತ್ಯಗತ್ಯ ಎಂದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು