ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪಾಯಕಾರಿ ದೆಹಲಿ ಗಾಳಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ – ಸುಪ್ರೀಂ ಕೋರ್ಟ್ ಕಡಕ್ ಸೂಚನೆಕರ್ರೆಗುಟ್ಟಾ ಬೆಟ್ಟದಲ್ಲಿ ಸ್ಫೋಟಕ ಪತ್ತೆ: 711 BGL ಶೆಲ್‌ಗಳು ವಶಕ್ಕೆಸ್ಟಿಂಗ್ ಕೇಂದ್ರಿತ ರಾಜಕಾರಣದ ಹಿಂದಿರುವ ಸಂಚು ವಂಚನೆಗಳ ಅನಾವರಣಸ್ಟಿಂಗ್ ಆಪರೇಷನ್ ನಲ್ಲಿ ಕುಮಾರಸ್ವಾಮಿ‌‌ ಪ್ರಯತ್ನ ಸಂಪೂರ್ಣ ವಿಫಲ – ಶಿವರಾಜ್ ಎಸ್. ತಂಗಡಗಿಕರ್ನಾಟಕದ ಪೆಟ್ರೋಲ್‌ನಲ್ಲಿ 31.2% ಎಥೆನಾಲ್! ವಾಹನ ಸವಾರರಿಗೆ ಆತಂಕ; E20 ಪ್ರಚಾರದ ಜಾಹೀರಾತುಗಳ ಹಿಂದಿನ ಹುನ್ನಾರವೇನು?ಬಯಲು ಸಂತೆಯ ಮೌನ – 3 : ಮೂರು ದಾರಿಯ ಖತ್ರಿಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ: 4 ಬೋಗಿಗಳಿಗೆ ಹಾನಿ, ಪ್ರಯಾಣಿಕರು ಸುರಕ್ಷಿತಪಂಜಾಬ್‌ನಲ್ಲಿ ಕರ್ಮಭೂಮಿ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳಿಗೆ ಬೆಂಕಿ: ಪ್ರಯಾಣಿಕರು ಸುರಕ್ಷಿತ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಟೀಸರ್ ವಿರುದ್ಧ ಆಕ್ರೋಶ: ಕೋಮು ಸಾಮರಸ್ಯಕ್ಕೆ ಧಕ್ಕೆ ಆರೋಪ, ಸಿನೆಮಾ ಬಿಡುಗಡೆ ಮಾಡದಂತೆ ಒತ್ತಾಯಗೃಹಲಕ್ಷ್ಮೀ ಫಲಾನುಭವಿಗಳ ಜೊತೆ ಡಿಕೆಶಿ ಸಂವಾದ – ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲರಾಜ್ಯದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗಾಗಿ 20,000 ಕೋಟಿ ರೂ –  ಈಶ್ವರ ಖಂಡ್ರೆಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮತಪತ್ರಗಳ ಬಳಕೆ – ಸಚಿವ ಈಶ್ವರ ಖಂಡ್ರೆKSRTC ಬಸ್ ಪಾಸ್ ದರವೂ ಭಾರಿ ಏರಿಕೆ – ಶೇಕಡಾ 23 ರಷ್ಟು ಏರಿಕೆಅಪರಾಧಗಳ ರಾಜಧಾನಿಯಾಗುತ್ತಿದೆಯೇ ಬೆಂಗಳೂರು?ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ಗೆ ಇನ್ನು ಕಾನೂನು ರಕ್ಷಣೆ ಇಲ್ಲವೇ? ನಿಮ್ಮ ಒಂದು ಪೋಸ್ಟ್‌ಗೆ ಕಂಪನಿಗಳೇ ಹೊಣೆ!ಕುವೆಂಪು ಚಿಂತನೆಗಳು ಇಂದು: ವಿಷಯ ಮಂಡನೆ ಮತ್ತು ಸಂವಾದಹಿರಿಯ ಸಾಹಿತಿ, ಭಾಷಾಶಾಸ್ತ್ರಜ್ಞ ಪ್ರೊ. ಕೆ.ವಿ. ನಾರಾಯಣ ಇನ್ನಿಲ್ಲಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ: ನಂದಿಬೆಟ್ಟದ ತಪ್ಪಲಿನಲ್ಲಿ ಬಾಲಕನ ಮೃತದೇಹ ಪತ್ತೆ‘ಕನ್ನಡಿಗರಿಗೆ ಉದ್ಯೋಗ ಕೊಡಿ, ಕಂಪನಿಗಳಿಗೆ ಕಿರುಕುಳ ಕೊಡಬೇಡಿ’: ಸರಕಾರದ ಇಬ್ಬಗೆ ನೀತಿ & ಅಸಲಿ ಪರಿಹಾರ

ಮಾಶಾಸನ ಪಡೆಯಲು ಎರಡು ಕಿಲೋಮೀಟರ್‌ ತೆವಳಿಕೊಂಡೇ ಬಂದ ಅಜ್ಜಿ!

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಮಾಶಾಸನ ಪಡೆಯಲು ಎರಡು ಕಿಲೋಮೀಟರ್‌ ತೆವಳಿಕೊಂಡೇ ಬಂದ ಅಜ್ಜಿ!

ದಾವಣಗೆರೆ: ಜಿಲ್ಲೆಯ ಹರಿಹರದ ಕುಣಿಬೆಳಕೆರೆ ಎನ್ನುವಲ್ಲಿ ತಿಂಗಳ ಹಿರಿಯ ನಾಗರಿಕರ ಪಿಂಚಣಿ ಪಡೆಯುವ ಸಲುವಾಗಿ ಅಜ್ಜಿಯೊಬ್ಬರು ಎರಡು ಕಿಲೋಮೀಟರ್‌ ದೂರ ತೆವಳಿಕೊಂಡೇ ಬಂದ ಹೃದಯ ವಿದ್ರಾವಕ ಘಟನೆ ನಡೆದಿದೆ.

ಕುಣೆಬೆಳಕೆರೆ ಪೋಸ್ಟ್‌ ಆಫೀಸ್‌ ಮೂಲಕ ಈ ಅಜ್ಜಿಗೆ ತಿಂಗಳ ಪಿಂಚಣಿ ಬರುತ್ತಿತ್ತು. ಆದರೆ, ಕಳೆದ ಎರಡು ತಿಂಗಳುಗಳಿಂದ ಈ ಹಣ ಅಜ್ಜಿಯ ಕೈಸೇರಿಲ್ಲ. ಈ ಬಗ್ಗೆ ಪೋಸ್ಟ್ ಮ್ಯಾನ್ ಬಳಿ ವಿಚಾರಿಸಿದಾಗ 2 ತಿಂಗಳುಗಳಿಂದ ಹಣ ಬಂದಿಲ್ಲ ಎಂದು ಹೇಳಿದ್ದ. ಮಕ್ಕಳಿಲ್ಲದ ಈ ಅಜ್ಜಿಯ ಪಾಲಿಗೆ ಪಿಂಚಣಿ ಹಣವೇ ಬದುಕಿಗೆ ಆಧಾರವಾಗಿತ್ತು. ಹೀಗಾಗಿ ಅಜ್ಜಿ ಗಿರಿಜಮ್ಮ ಪಿಂಚಣಿ ಕುರಿತು ವಿಚಾರಿಸಲೆಂದು 2 ಕಿಮೀ ತೆವಳಿಕೊಂಡು ಕುಣಿಬೆಳೆಕೆರೆ ಗ್ರಾಮದ ಅಂಚೆ ಕಚೇರಿಗೆ ಬಂದಿದ್ದಾರೆ. ಪಿಂಚಣಿ ತೆಗೆದುಕೊಳ್ಳಲು ತೆವಳಿಕೊಂಡು ಬಂದಿದ್ದರಿಂದ ಅಜ್ಜಿಗೆ ಕಾಲಲ್ಲಿ ಬೊಬ್ಬೆಗಳೆದ್ದಿವೆ. ಇದರಿಂದ ಎಚ್ಚೆತ್ತ ಗ್ರಾಮ ಪಂಚಾಯಿತಿ ಅಧಿಕಾರಿಗಳು ಅಜ್ಜಿಯನ್ನು ಹರಿಹರ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಈ ಕುರಿತು ಗಿರಿಜಮ್ಮ ಮಾತನಾಡಿ, “ಪಿಂಚಣಿ ಬಗ್ಗೆ ವಿಚಾರಿಸಲು ಬೆಳಗ್ಗೆ 8 ಗಂಟೆಗೆ ನಂದಿತಾವರೆ ರೇಣುಕಾ ಕ್ಯಾಂಪ್‌ನಿಂದ ಹೊರಟು ಸಂಜೆ 4 ಗಂಟಗೆ ಕುಣೆಬೆಳೆಕೆರೆಯ ಪೋಸ್ಟ್ ಆಫೀಸ್‌ ತಲುಪಿದೆ. ನನಗೆ ಎರಡು ತಿಂಗಳಿನಿಂದ ಪಿಂಚಣಿ ಹಣ ಬಂದಿಲ್ಲ. ಈ ಬಗ್ಗೆ ಪೋಸ್ಟ್ ಮ್ಯಾನ್ ಬಳಿ ಕೇಳಿದರೆ ಹಣ ಬಂದಿಲ್ಲ ನಡಿ ಎಂದು ಗದರಿಸಿ ಕಳುಹಿಸುತ್ತಾನೆ. ನನ್ನ ಮೃತ ಪತಿಯ 10 ಸಾವಿರ ರೂಪಾಯಿ ಹಣ ಬರಬೇಕಿತ್ತು ಅದನ್ನು ಸಹ ಕೊಟ್ಟಿಲ್ಲ. ಆಟೋಗೆ ಹಣ ಇಲ್ಲದ ಕಾರಣ ತೆವಳಿಕೊಂಡು ಬಂದಿದ್ದೇನೆ. ನನಗೆ ಮಕ್ಕಳು ಯಾರೂ ಇಲ್ಲ” ಎಂದು ಅಳಲು ತೊಡಿಕೊಂಡರು.

ಕುಣೆಬೆಳೆಕೆರೆ ಆಶಾ ಕಾರ್ಯಕರ್ತೆ ಆಶಾ ಎನ್ನುವವರು ಮಾತನಾಡಿ, “ಹಿರಿಯರಾದ ಗಿರಿಜಮ್ಮ ಪಿಂಚಣಿ ಹಣ ಬಂದಿಲ್ಲ ಎಂದು ಕುಣೆಬೆಳಕೆರೆ ಗ್ರಾಮಕ್ಕೆ ತೆವಳಿಕೊಂಡು ಬರುತ್ತಿದ್ದರು. ಅವರ ವಿಡಿಯೋವನ್ನು ಸಾರ್ವಜನಿಕರು ಯಾರೋ ತಹಶೀಲ್ದಾರ್‌ಗೆ ಕಳುಹಿಸಿದ್ದಾರೆ. ವೃದ್ಧೆಗೆ ಸಮಸ್ಯೆಯಾಗಿದ್ದು, ನೀವು ನೋಡಿಕೊಳ್ಳಿ ಎಂದು ನನಗೆ ಸೂಚಿಸಿದರು. ಅದರಂತೆ ನಾನು ಆಸ್ಪತ್ರೆಗೆ ಕರೆದುಕೊಂಡು ಬಂದು ದಾಖಲು ಮಾಡಿದ್ದೇನೆ. ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಅವರಿಗೆ ಊಟ ತಿಂಡಿ ವ್ಯವಸ್ಥೆ ಮಾಡಲಾಗಿದೆ. ಅವರಿಗೆ ಸಂಬಂಧಿಕರು ಯಾರೂ ಇಲ್ಲ. ಅವರು ಒಬ್ಬರೇ ಇರುವುದು” ಎಂದು ಮಾಹಿತಿ ನೀಡಿದ್ದಾರೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು