ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನಮ್ಮ ಕ್ಲಿನಿಕ್ ಮೇಲ್ದರ್ಜೆಗೇರಿಸಲು ಮುಂದಿನ ಬಜೆಟ್ ನಲ್ಲಿ ಅನುದಾನ : ಸಿಎಂ ಬೊಮ್ಮಾಯಿ

PPeepal Media Desk

Peepal Media Desk • ರಾಜ್ಯ

• 1 ನಿಮಿಷದ ಓದು

ನಮ್ಮ ಕ್ಲಿನಿಕ್ ಮೇಲ್ದರ್ಜೆಗೇರಿಸಲು ಮುಂದಿನ ಬಜೆಟ್ ನಲ್ಲಿ ಅನುದಾನ : ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ನಮ್ಮ್ ಕ್ಲಿನಿಕ್ ಗಳನ್ನು ಮೇಲ್ದರ್ಜೆಗೇರಿಸಲು ಮುಂದಿನ ಬಜೆಟ್ ನಲ್ಲಿ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತು ಬುಧವಾರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದೆ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಡಿಸ್ಪೆನ್ಸರಿಗಳಿದ್ದವು. ವೈದ್ಯರು ನೆಗಡಿ, ಜ್ವರ ಇತ್ಯಾದಿ ಸಣ್ಣಪುಟ್ಟ ಪರೀಕ್ಷೆ ಮಾಡಿ ಚಿಕಿತ್ಸೆ ನೀಡುತ್ತಿದ್ದರು. ಬಡವರಿಗೆ ಪ್ರಾಥಮಿಕವಾಗಿ ಚಿಕಿತ್ಸೆ ನೀಡುವ ದೃಷ್ಟಿಯಿಂದ ನಮ್ಮ ಕ್ಲಿನಿಕ್ ಸ್ಥಾಪಿಸಲಾಗುತ್ತಿದೆ. 437 ಇಡೀ ರಾಜ್ಯ ದಲ್ಲಿ ಸ್ಥಾಪನೆಯಾಗುತ್ತಿದೆ. ಪ್ರಥಮ ಹಂತದಲ್ಲಿ ನೂರು ಕ್ಲಿನಿಕ್ ಗಳು ಪ್ರಾರಂಭವಾಗುತ್ತದೆ. ನಮ್ಮ ಕ್ಲಿನಿಕ್ ಗಳ ಕಾರ್ಯವೈಖರಿ ನೋಡಿಕೊಂಡು ತಪಾಸಣೆ ಮಾಡಿ ಔಷಧ ನೀಡುವುದಲ್ಲದೆ, ರಕ್ತ ಪರೀಕ್ಷೆ ಮುಂತಾದ ಪೂರ್ವಭಾವಿ ಪರೀಕ್ಷೆಗಳನ್ನು ಕೈಗೊಳ್ಳಲು ವ್ಯವಸ್ಥೆ ಕಲ್ಪಿಸಲಾಗುವುದು. ಟೆಲಿ ಮೆಡಿಸಿನ್ ವ್ಯವಸ್ಥೆಯನ್ನೂ ಇದಕ್ಕೇ ಜೋಡಿಸಲಾಗುವುದು ಎಂದರು.

ಕೇಂದ್ರ ಗೃಹ ಸಚಿವರೊಂದಿಗೆ ಸಭೆ
ಕೇಂದ್ರ ಗೃಹ ಸಚಿವರು ಎರಡೂ ರಾಜ್ಯ ಗಳ ಮುಖ್ಯಮಂತ್ರಿಗಳನ್ನು ಕರೆದು ಶಾಂತಿ ಸುವ್ಯವಸ್ಥೆ ಕಾಪಾಡಲು ಇಂದಿನ ಸಭೆ ಕರೆಯಲಾಗಿದೆ. ಅಲ್ಲಿ ಕರ್ನಾಟಕದ ನಿಲುವನ್ನು ಕಾನೂನಾತ್ಮಕ, ಆಡಳಿತಾತ್ಮಕ ಹಾಗೂ ರಾಜಕೀಯವಾಗಿ ತಿಳಿಸಲಾಗುವುದು. ಕರ್ನಾಟಕದ ನಿಲುವು ಸ್ಪಷ್ಟವಿದೆ ಎಂದು ಮನವರಿಕೆ ಮಾಡಲು ಸಿದ್ದವಾಗಿ ಹೋಗುತ್ತಿರುವುದಾಗಿ ತಿಳಿಸಿದರು.

ವ್ಯಾಖ್ಯಾನಿಸುವುದಿಲ್ಲ
ರಾಜ್ಯಗಳ ಪುನರ್ ವಿಂಗಡನಾ ಕಾಯ್ದೆಗೂ ಮುನ್ನ ಹಲವಾರು ವರದಿಗಳು ಬಂದಿದೆ. ಕಾಯ್ದೆ ಆಗಿ ಅಂತಿಮಗೊಂಡಿದೆ. ಇದು ಈಗಿನ ಕಾನೂನಿನ ವಸ್ತುಸ್ಥಿತಿ. ರಾಜ್ಯಗಳ ಪುನರ್ ವಿಂಗಡನಾ ಕಾಯ್ದೆಯ ನಿರ್ಣಯಗಳನ್ನು ಅವರು ಪ್ರಶ್ನಿಸಿದ್ದಾರೆ. ಇದನ್ನು ನಿರ್ವಹಿಸಬೇಕೋ, ಬೇಡವೋ ಎಂದೇ ಸರ್ವೋಚ್ಚ ನ್ಯಾಯಾಲಯ ತೀರ್ಮಾನ ಮಾಡಿಲ್ಲ. ಸಂವಿಧಾನಬದ್ಧವಾಗಿ ಯೋಚನೆ ಮಾಡಿದಾಗ ಅದು ಮೆಂಟೇನಬಲ್ ಆಗೋಲ್ಲ. ಈಗಾಗಲೇ ಅದರ ಬಗ್ಗೆ ಸಾಕಷ್ಟು ವಾದಗಳಾಗಿವೆ. ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಕರಣವಿರುವಾಗ ಯಾವುದೇ ವ್ಯಾಖ್ಯಾನ ಮಾಡುವುದಿಲ್ಲ. ಪ್ರಕರಣದ ಮೇಲೆ ಯಾವುದೇ ಪ್ರಭಾವ ಬೀರಬಾರದು ಎನ್ನುವ ಕಾರಣದಿಂದ ನಾನು ವ್ಯಾಖ್ಯಾನ ಮಾಡುವುದಿಲ್ಲ ಎಂದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು