ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಿದ್ಧರಾಮಯ್ಯನವರ ರಾಜೀನಾಮೆ ಕೇಳುವ ಕುಮಾರಸ್ವಾಮಿ ತಾನು ರಾಜೀನಾಮೆ ಕೊಡುತ್ತಾರೆಯೇ? ಎಫ್‌ಐಆರ್‌ ಅವರ ಮೇಲೂ ಆಗಿಲ್ಲವೆ?: ಜಿ ಟಿ ದೇವೇಗೌಡ

P

Peepal Media • ರಾಜ್ಯ

• 1 ನಿಮಿಷದ ಓದು

ಸಿದ್ಧರಾಮಯ್ಯನವರ ರಾಜೀನಾಮೆ ಕೇಳುವ ಕುಮಾರಸ್ವಾಮಿ ತಾನು ರಾಜೀನಾಮೆ ಕೊಡುತ್ತಾರೆಯೇ? ಎಫ್‌ಐಆರ್‌ ಅವರ ಮೇಲೂ ಆಗಿಲ್ಲವೆ?: ಜಿ ಟಿ ದೇವೇಗೌಡ

ಮೈಸೂರು: ಸಿದ್ಧರಾಮಯ್ಯನವರ ಬಳಿ ರಾಜೀನಾಮೆ ಕೇಳುವವರು ಮೊದಲು ತಮ್ಮ ಪಕ್ಷದಲ್ಲಿ ಎಫ್‌ಐಆರ್‌ ದಾಖಲಾಗಿರುವ ನಾಯಕರಿಂದ ರಾಜೀನಾಮೆ ಕೊಡಿಸಲಿ ಎಂದು ಜೆಡಿಎಸ್‌ ಶಾಸಕ ಜಿಟಿ ದೇವೇಗೌಡ ಹೇಳಿದ್ದಾರೆ.

ಸಿದ್ಧರಾಮಯ್ಯನವರ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ ಹಾಗೂ ರಾಜ್ಯಪಾಲರ ಕಚೇರಿ ತನಿಖೆ ನಡೆಸುವಂತೆ ಹೇಳಿದೆಯೇ ಹೊರತು ಅವರಿಗೆ ರಾಜೀನಾಮೆ ನೀಡಲು ಹೇಳಿಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಹೇಳಿದರು.

ಇಂದು ನಾಡಹಬ್ಬ ದಸರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು “ಎಂತಹ ಸಂದರ್ಭದಲ್ಲಿಯೂ ತಾಯಿ ಚಾಮುಂಡೇಶ್ವರಿ ಅವರ ಪಾಲಿಗೆ ಇದ್ದಾರೆ. ಉಪ ಚುನಾವಣೆ ವೇಳೆ ಸಿದ್ದರಾಮಯ್ಯರನ್ನು ಸೋಲಿಸಲು ನಾವು ತೀರ್ಮಾನ ಮಾಡಿದ್ದೆವು. ಆದರೆ, ಸಿಎಂ ಆ ಚುನಾವಣೆಯಲ್ಲಿ ಗೆದ್ದರು ಇದಕ್ಕೆ ಕಾರಣ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಸಿದ್ದರಾಮಯ್ಯಗೆ ಇದೆ. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಕಾರಣ. ಸಚಿವ ಮಹದೇವಪ್ಪ ಎಲ್ಲಾ ಸಚಿವ ಸ್ಥಾನವನ್ನೂ ಪಡೆದಿದ್ದಾರೆ. ಒಬ್ಬ ದಲಿತ ನಾಯಕನನ್ನು ರಾಜ್ಯಮಟ್ಟಕ್ಕೆ ಕೊಂಡೊಯ್ದಿರುವುದು ಸಿದ್ದರಾಮಯ್ಯ” ಎಂದು ಮುಖ್ಯಮಂತ್ರಿಯನ್ನು ಮುಕ್ತ ಕಂಠದಿಂದ ಹಾಡಿ ಹೊಗಳಿದರು.

“ಹಿಂದೆ ಮೈಸೂರು ರಾಜ್ಯವಿತ್ತು, ಆಮೇಲೆ ಅದು ಕರ್ನಾಟಕ ಎಂದಾಯಿತು. ಮಹಾರಾಜರು ಕಟ್ಟಿದ್ದ ಮೈಸೂರು ನಮ್ಮದು. ದಸರಾ ಉದ್ಘಾಟಕರ ಆಯ್ಕೆಯನ್ನು ಮುಖ್ಯಮಂತ್ರಿಯವರಿಗೆ ಬಿಟ್ಟು ಕೊಟ್ಟಿದ್ದೆವು. ಹಂಪನಾ ಅವರ ಆಯ್ಕೆ ಉತ್ತಮವಾಗಿದೆ. ಯಾವುದೇ ವಿವಾದ ಇಲ್ಲದ ಸಾಹಿತಿಗಳು. ಹಂಪನಾ ಅವರಿಗೆ ಚಾಮುಂಡೇಶ್ವರಿ ತಾಯಿ ಆಯಸ್ಸು, ಆರೋಗ್ಯ ಕರುಣಿಸಲಿ” ಎಂದು ಈ ಸಂದರ್ಭದಲ್ಲಿ ಅವರು ಹಾರೈಸಿದರು.

ರಾಜ್ಯ ರಾಜಕಾರಣದ ಕುರಿತು ಮಾತನಾಡಿದ ಅವರು “ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ರಾಜೀನಾಮೆ ಕೇಳಿದ್ರೆ ಕೊಡ್ತಾರಾ? ಸಿಎಂ ಸಿದ್ದರಾಮಯ್ಯ ಯಾಕೆ ರಾಜೀನಾಮೆ ಕೊಡಬೇಕು?ʼ ತಮ್ಮದೇ ಪಕ್ಷದ ನಾಯಕ, ಸಚಿವ ಕುಮಾರಸ್ವಾಮಿಯವರ ವಿರುದ್ಧವೂ ಮಾತಿನ ಚಾಟಿ ಬೀಸಿದರು.

ಬಿಜೆಪಿ-ಜೆಡಿಎಸ್ ನವರಿಗೆ ಮಾಡಲು ಬೇರೆ ಕೆಲಸ ಇಲ್ಲ. ಯಾರ ಮೆಲೆ ಎಫ್ ಐಆರ್ ದಾಖಲಾಗಿದೆಯೋ ಅವರೆಲ್ಲ ವಿಧಾನಸೌಧದ ಬಳಿ ನಿಂತುಕೊಳ್ಳಿ. ಕೇಂದ್ರ ಸರ್ಕಾರದಿಂದ ಏನು ಯೋಜನೆ ತರಬೇಕು ಅದನ್ನು ಯೋಚಿಸಿ, ಸಿದ್ದರಾಮಯ್ಯ ಕಾಲದಲ್ಲಿ ಅಭಿವೃದ್ಧಿ ಆದಷ್ಟು ಯಾವತ್ತೂ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದಾರೆ.

ಮಾಧ್ಯಮಗಳನ್ನೂ ತರಾಟೆಗೆ ತೆಗೆದುಕೊಂಡ ಅವರು ಇಂದಿನ ಮಾಧ್ಯಮಗಳ ವರ್ತನೆಯಿಂದ ಹೊಸ ನಾಯಕರು ಹುಟ್ಟುತ್ತಿಲ್ಲ, ಯುವ ಪೀಳಿಗೆಯಲ್ಲಿ ನೈತಿಕತೆ, ಸಾಮಾಜಿಕ ಕಾಳಜಿ ಮೂಡಿಸುವ ಕೆಲಸವನ್ನು ಮಾಧ್ಯಮಗಳು ಮಾಡುತ್ತಿಲ್ಲ ಎಂದು ಕಿಡಿ ಕಾರಿದರು.

ಸಿದ್ಧರಾಮಯ್ಯ ಚಾಮುಂಡೇಶ್ವರಿಯ ವರಪುತ್ರ

ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ತಾಯಿಯ ವರಪುತ್ರ. ಅವರು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಕಾಲಿಟ್ಟ ವೇಳೆಯಿಂದ ಸಚಿವರಾಗಿ, ಉಪ ಮುಖ್ಯಮಂತ್ರಿಯಾಗಿ, ಎರಡು ಬಾರಿ ಮುಖ್ಯಮಂತ್ರಿ ಆಗಿದ್ದಾರೆಂದರೆ ತಾಯಿ ಚಾಮುಂಡೇಶ್ವರಿ ಆಶೀರ್ವಾದವೇ ಇದಕ್ಕೆ ಕಾರಣ ಎಂದು ಅವರು ಹೇಳಿದರು.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version