ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಜನಸಾಮಾನ್ಯರ ಹಿತಕಾಯುವಲ್ಲಿ ಗ್ಯಾರಂಟಿ ಯೋಜನೆಗಳ ಪಾತ್ರ ಮಹತ್ವದ್ದು: ಸಚಿವ ಮಧು ಎಸ್.ಬಂಗಾರಪ್ಪ

P

Peepal Media • ರಾಜ್ಯ

• 1 ನಿಮಿಷದ ಓದು

ಜನಸಾಮಾನ್ಯರ ಹಿತಕಾಯುವಲ್ಲಿ ಗ್ಯಾರಂಟಿ ಯೋಜನೆಗಳ ಪಾತ್ರ ಮಹತ್ವದ್ದು: ಸಚಿವ ಮಧು ಎಸ್.ಬಂಗಾರಪ್ಪ

ಶಿವಮೊಗ್ಗ : ಆಗಸ್ಟ್ 07 : (ಕರ್ನಾಟಕ ವಾರ್ತೆ) : ಆಡಳಿತಾರೂಢ ಸರ್ಕಾರವು ಚುನಾವಣಾ ಪೂರ್ವದಲ್ಲಿ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಸರ್ಕಾರಿ ನೌಕರರ ಏಳನೇ ವೇತನ ಆಯೋಗದ ಅನುಷ್ಠಾನ ಮಾತ್ರವಲ್ಲದೇ ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ ಮತ್ತು ಯುವನಿಧಿ ಸೇರಿದಂತೆ ಒಟ್ಟು ಐದು ಜನಪ್ರಿಯ ಗ್ಯಾರಂಟಿ ಯೋಜನೆಗಳನ್ನು ಕಾಲಮಿತಿಯೊಳಗಾಗಿ ಅನುಷ್ಠಾನಗೊಳಿಸಿ ನುಡಿದಂತೆ ನಡೆದು, ರಾಜ್ಯದ ಜನಸಾಮಾನ್ಯರ ಹಿತಕಾಯುವಲ್ಲಿ ಸಕ್ರಿಯವಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರು ಹೇಳಿದರು.


ಅವರು ಇಂದು ಜಿಲ್ಲಾ ಪಂಚಾಯಿತಿ ಕಟ್ಟಡದಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕವನ್ನು ಉದ್ಘಾಟಿಸುವ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ರಾಜ್ಯದ ಅತಿ ಹೆಚ್ಚಿನ ಜನರು ಈ ಯೋಜನೆಗಳ ಲಾಭ ಪಡೆದು ನೆಮ್ಮದಿಯ ಜೀವನ ನಡೆಸುತ್ತಿರುವುದು ಎಲ್ಲರಿಗೂ ಹರ್ಷದ ಸಂಗತಿಯಾಗಿದೆ ಎಂದ ಅವರು, ಇಂತಹ ಜನಪರ ಯೋಜನೆಗಳನ್ನು ವ್ಯವಸ್ಥಿತವಾಗಿ ಅನುಷ್ಟಾನಗೊಳಿಸಿದ ದೇಶದ ಮೊದಲ ರಾಜ್ಯ ಇದಾಗಿದೆ ಎಂದ ಅವರು, ಅನೇಕ ಸಮಸ್ಯೆ-ಸವಾಲುಗಳ ನಡುವೆಯೂ ಸರ್ಕಾರ ಜನರ ಅಹವಾಲುಗಳಿಗೆ ಕಿವಿಯಾಗಿದೆ ಮಾತ್ರವಲ್ಲದೇ ಜನಸಾಮಾನ್ಯರ ನೆರವಿಗೆ ಧಾವಿಸುತ್ತಿದೆ, ಅಭಿವೃದ್ಧಿ ಕಾರ್ಯಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿದೆ ಎಂದರು.


ರಾಜ್ಯದ ಖಾಸಗಿ ಶಾಲೆಗಳ ಬೇಕು-ಬೇಡಗಳನ್ನು ಸರ್ಕಾರದ ವತಿಯಿಂದ ಚರ್ಚಿಸಲು ನಾಳೆ ಬೆಂಗಳೂರಿನಲ್ಲಿ ಸಭೆ ಆಯೋಜಿಸಲಾಗಿದೆ. ಈಗಾಗಲೇ ಅವರು ನೀಡಿರುವ ಮನವಿಯನ್ನು ಗಮನಿಸಲಾಗಿದ್ದು, ಅವರ ಬೇಡಿಕೆಯನ್ನು ಮಾನ್ಯ ಮುಖ್ಯಮಂತ್ರಿಗಳು ಸೇರಿದಂತೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ನಿರ್ಣಯ ಕೈಗೊಳ್ಳಲಾಗುವುದು ಎಂದರು.


ಶಿವಮೊಗ್ಗದ ವಿಮಾನ ನಿಲ್ದಾಣವನ್ನು ರಾಜ್ಯ ಸರ್ಕಾರದಿಂದ ನಿರ್ವಹಿಸಲಾಗುತ್ತಿದ್ದು, ಅಲ್ಲಿನ ಇನ್ನಷ್ಟು ರಚನಾತ್ಮಕ ಕಾರ್ಯಕ್ರಮಗಳು, ಯೋಜನೆಗಳ ಅನುಷ್ಠಾನಕ್ಕಾಗಿ ಸರ್ಕಾರ ಬದ್ದವಾಗಿದೆ ಎಂದ ಅವರು, ರಾಜ್ಯದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರವು ಪ್ರತಿ ಗ್ರಾಮ ಪಂಚಾಯಿತಿಗಳಿಗೆ ವಾರ್ಷಿಕವಾಗಿ 9ಕೋಟಿ ಅನುದಾನ ವ್ಯಯ ಮಾಡಲಾಗುತ್ತಿದೆ ಎಂದರು.


ಶರಾವತಿ ಸಂತ್ರಸ್ಥರ ನೆರವಿಗೆ ಸರ್ಕಾರ ಬದ್ಧವಾಗಿದ್ದು, ಸಂತ್ರಸ್ಥರ ಹಿತಕಾಯಲು ದೇಶದ ಸರ್ವೋಚ್ಛ ನ್ಯಾಯಾಲಯದಲ್ಲಿ ಅಗತ್ಯ ಮಾಹಿತಿಯೊಂದಿಗೆ ಮೊಕದ್ದಮೆಯನ್ನು ಹೂಡಿ, ರಾಜ್ಯದ ಪರವಾಗಿ ಸಮರ್ಥವಾಗಿ ವಾದ ಮಂಡಿಸಲು ಹಿರಿಯ ವಕೀಲರೊಬ್ಬರನ್ನು ನೇಮಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದರು.


ನAತರ ಸಚಿವರು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕವನ್ನು ಉದ್ಘಾಟಿಸಿ, ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಚಂದ್ರಭೂಪಾಲ್ ಅವರಿಗೆ ಪುಷ್ಪಗುಚ್ಚ ನೀಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಸೂರಜ್ ಎಂ.ಎನ್.ಹೆಗಡೆ, ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ಬಲ್ಕಿಷ್‌ಬಾನು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್ ಮತ್ತಿತರರು ಉಪಸ್ಥಿತರಿದ್ದರು.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version