ಬೆಂಗಳೂರು: ಮಹದೇವಪುರದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಐಟಿ ಕಂಪನಿ ಸೆಕ್ಯೂರಿಟಿ ಗಾರ್ಡ್ ಬಂಧನ
ಲಿಂಕ್ ನಕಲಿಸಲಾಗಿದೆ ✓
ಬೆಂಗಳೂರು: ಮಹದೇವಪುರದ ಲಕ್ಷ್ಮೀ ಸಾಗರ ಲೇಔಟ್ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ನಗರ ಪೊಲೀಸರು ಬಂಧಿಸಿದ್ದಾರೆ. 21 ವರ್ಷದ ಮಹಾನಂದಾ ಗುರುವಾರ ರಾತ್ರಿ ಮನೆಯಿಂದ ನಾಪತ್ತೆಯಾಗಿದ್ದು, ಶುಕ್ರವಾರ ಬೆಳಗ್ಗೆ ಮನೆಯ ಮುಂದೆ ಶವವಾಗಿ ಪತ್ತೆಯಾಗಿದ್ದಾರೆ.
ಐಟಿ ಕಂಪನಿಯೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಒಡಿಶಾ ಮೂಲದ ಕೃಷ್ಣ ಚಂದಾ ಸೇಠ್ ಎಂಬಾತನನ್ನು ತನ್ನ ನೆರೆಮನೆಯ ಮಹಾನಂದ ಎನ್ನುವವರನ್ನು ಕೊಂದಿದ್ದಕ್ಕಾಗಿ ಬಂಧಿಸಲಾಗಿದೆ. ಕಲಬುರಗಿ ಜಿಲ್ಲೆಯವರಾದ ಇವರು ಲಕ್ಷ್ಮೀ ಸಾಗರ ಲೇಔಟ್ನಲ್ಲಿ ಸಹೋದರಿಯೊಂದಿಗೆ ವಾಸವಾಗಿದ್ದರು. ಇಬ್ಬರು ಸಹೋದರಿಯರು ನಗರದ ಶೆಲ್ ಪೆಟ್ರೋಲ್ ಬಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು.
ಶುಕ್ರವಾರ ರಾತ್ರಿ ಮನೆಯಿಂದ ಹೊರಗೆ ಬಂದಾಗ ಚಂದಾ ಸೇಠ್ ಮಹಾನಂದರನ್ನು ತನ್ನ ಮನೆಯೊಳಗೆ ಬಲವಂತದಿಂದ ಎಳೆದುಕೊಂಡು ಹೋಗಿದ್ದಾನೆ. ಚಂದಾ ಸೇಠ್ ತನ್ನ ಮೇಲೆ ಅತ್ಯಾಚಾರ ಮಾಡಲು ಪ್ರಯತ್ನಿಸಿದಾಗ ಮಹಾನಂದ ಸಹಾಯಕ್ಕಾಗಿ ಕೂಗಲು ಪ್ರಾರಂಭಿಸಿದರು ಆಗ ಅವನು ಆಕೆಯನ್ನು ಕತ್ತು ಹಿಸುಕಿ ಸಾಯಿಸಿದನು ಎಂದು ಟಿವಿ ವಾಹಿನಿಯೊಂದು ವರದಿ ಮಾಡಿದೆ.
ಆಕೆಯನ್ನು ಕೊಲೆ ಮಾಡಿದ ನಂತರ ಶವವನ್ನು ಮನೆಯೊಳಗೆ ಇಟ್ಟುಕೊಂಡು, ಬೆಳಿಗ್ಗೆ ಶವವನ್ನು ಆಕೆಯ ಮನೆಯ ಹೊರಗೆ ವಿಲೇವಾರಿ ಮಾಡಿದ್ದಾನೆ ಎಂದು ವರದಿಯಾಗಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹದೇವಪುರ ಪೊಲೀಸರು ಚಂದಾ ಸೇಠನ್ನು ಬಂಧಿಸಿದ್ದಾರೆ.
Peepal Media Desk
Peepal Media · ರಾಜ್ಯ ವಿಭಾಗ