ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹನೂರು ಎನ್‌ಕೌಂಟರ್ ಕೇವಲ ಕಟ್ಟುಕಥೆ, ಇದು ಅರಣ್ಯ ಇಲಾಖೆ ನಡೆಸಿದ ಹಸಿ ಕೊಲೆ: ಹಿರಿಯ ವಕೀಲ ಸಿ.ಎಚ್. ಹನುಮಂತರಾಯ

P

Peepal Media • ರಾಜ್ಯ

• 1 ನಿಮಿಷದ ಓದು

ಹನೂರು ಎನ್‌ಕೌಂಟರ್ ಕೇವಲ ಕಟ್ಟುಕಥೆ, ಇದು ಅರಣ್ಯ ಇಲಾಖೆ ನಡೆಸಿದ ಹಸಿ ಕೊಲೆ: ಹಿರಿಯ ವಕೀಲ ಸಿ.ಎಚ್. ಹನುಮಂತರಾಯ

ಸುಮಾರು ಎರಡು ತಿಂಗಳ ಹಿಂದೆ ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಸಾವನ್ನಪ್ಪಿದ ಘಟನೆಯು ಕೇವಲ ಮುಖಾಮುಖಿ ಗುಂಡಿನ ಚಕಮಕಿಯಲ್ಲ, ಬದಲಿಗೆ ಅದು “ಪೂರ್ಣ ಪ್ರಮಾಣದ ಕೊಲೆ” (Outright murder) ಎಂದು ಹಿರಿಯ ವಕೀಲ ಸಿ.ಎಚ್. ಹನುಮಂತರಾಯ ಗಂಭೀರವಾಗಿ ಆರೋಪಿಸಿದ್ದಾರೆ.

ನಗರದ ಗಾಂಧಿ ಭವನದಲ್ಲಿ ಶುಕ್ರವಾರ ಕರ್ನಾಟಕ ಪ್ರಾಂತ ರೈತ ಸಂಘ (KPRS) ಮತ್ತು ಅಖಿಲ ಭಾರತ ವಕೀಲರ ಒಕ್ಕೂಟದ (AILU) ಕರ್ನಾಟಕ ರಾಜ್ಯ ಸಮಿತಿ ಜಂಟಿಯಾಗಿ ಆಯೋಜಿಸಿದ್ದ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಅರಣ್ಯ ಇಲಾಖೆ ಸಿಬ್ಬಂದಿಯು ತಮ್ಮ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದರಿಂದ ಬೇಟೆಗಾರರೆನ್ನಲಾದ ಮೂವರು ಸಾವನ್ನಪ್ಪಿದ್ದಾರೆ ಎಂದು ಹೇಳುತ್ತಿರುವುದು ಕಟ್ಟುಕಥೆಯಂತೆ ತೋರುತ್ತಿದೆ ಎಂದರು.

ಅರಣ್ಯ ಸಿಬ್ಬಂದಿಯ ದೂರಿನಲ್ಲಿ ಮೃತಪಟ್ಟವರು ಸಿಬ್ಬಂದಿಯನ್ನು ಕೊಲ್ಲಲು ಯತ್ನಿಸಿದ್ದರು ಎಂದು ಉಲ್ಲೇಖಿಸಿದ್ದರೂ, ಆ ಸಂಬಂಧ ಸೂಕ್ತ ಕಾನೂನು ವಿಧಿಗಳಡಿ ಪ್ರತ್ಯೇಕ ಎಫ್‌ಐಆರ್ ದಾಖಲಿಸದಿರುವುದನ್ನು ಅವರು ತೀವ್ರವಾಗಿ ಪ್ರಶ್ನಿಸಿದರು. “ಇಡೀ ತನಿಖೆಯ ನಿಯಂತ್ರಣವನ್ನು ಅರಣ್ಯ ಇಲಾಖೆಯ ಕೈಯಲ್ಲೇ ಉಳಿಸಿಕೊಳ್ಳಲು ಹೀಗೆ ಮಾಡಲಾಗಿದೆಯೇ ಎಂಬ ಅನುಮಾನ ಮೂಡುತ್ತಿದೆ. ಈ ಗಂಭೀರ ಲೋಪವನ್ನು ಮ್ಯಾಜಿಸ್ಟ್ರೇಟ್ ಗಮನಿಸದಿರುವುದು ಅಚ್ಚರಿ ತಂದಿದೆ,” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಹನೂರು ತಾಲೂಕಿನ ಮರಿಯಮಂಗಳ ಪ್ರದೇಶದಲ್ಲಿ ಇನ್‌ಕ್ವೆಸ್ಟ್ ಹಾಗೂ ಸ್ಥಳ ಮಹಜರು ನಡೆಸುವಾಗ ಗಂಭೀರ ನಿಯಮಾವಳಿಗಳ ಉಲ್ಲಂಘನೆಯಾಗಿದೆ ಎಂದೂ ಅವರು ಆಪಾದಿಸಿದರು.

ಇದೇ ವೇಳೆ ಮಾತನಾಡಿದ ಹಿರಿಯ ವಕೀಲ ಎಸ್. ಬಾಲನ್, ಈ ಹತ್ಯಾಕಾಂಡದಲ್ಲಿ ಭಾಗಿಯಾಗಿರುವ ಚಾಮರಾಜನಗರ ಜಿಲ್ಲಾ ಅರಣ್ಯ ಅಧಿಕಾರಿಗಳನ್ನು ತಕ್ಷಣವೇ ಸೇವೆಯಿಂದ ಅಮಾನತುಗೊಳಿಸಬೇಕೆಂದು ಪಟ್ಟುಹಿಡಿದರು. ಇದು ಸರ್ಕಾರವೇ ನಡೆಸಿದ ಹತ್ಯೆಯಾಗಿದ್ದು, ಸಂತ್ರಸ್ತ ಕುಟುಂಬಗಳಿಗೆ ನೀಡಲಾಗಿರುವ ₹5 ಲಕ್ಷ ಪರಿಹಾರವು ತೀರಾ ಕನಿಷ್ಠವಾಗಿದ್ದು, ಬಡ ರೈತರಿಗೆ ಮಾಡಿದ ಅವಮಾನವಾಗಿದೆ ಎಂದರು.

ಮೃತಪಟ್ಟವರನ್ನು ಅತ್ಯಂತ ಸನಿಹದಿಂದ ಗುಂಡಿಟ್ಟು ಕೊಲ್ಲಲಾಗಿದೆ ಎಂಬುದನ್ನು ಮರಣೋತ್ತರ ಪರೀಕ್ಷಾ ವರದಿಯೂ ಪುಷ್ಟೀಕರಿಸುತ್ತಿದೆ ಎಂದು ಆರೋಪಿಸಿದ ಅವರು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಶೀಘ್ರದಲ್ಲೇ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಲಾಗುವುದು ಎಂದು ಎಚ್ಚರಿಸಿದರು.

ಈ ಸಭೆಯಲ್ಲಿ ಎನ್‌ಕೌಂಟರ್‌ನಲ್ಲಿ ಮೃತಪಟ್ಟವರ ಪತ್ನಿಯರಾದ ಲೂರ್ದು ಮೇರಿ, ಪೆರಿಯನಾಯಗಮ್ಮಾಳ್, ಡೊಮಿನೊ ಮೇರಿ ಹಾಗೂ ಗುಂಡಿನ ದಾಳಿಯಿಂದ ಕೂದಲೆಳೆಯ ಅಂತರದಲ್ಲಿ ಬದುಕುಳಿದ ಮಹಿಮದಾಸ್ ಪಾಲ್ಗೊಂಡಿದ್ದರು. ಜತೆಗೆ ರೈತ ಮತ್ತು ವಕೀಲರ ಸಂಘಟನೆಗಳ ಪ್ರಮುಖರಾದ ಚುಕ್ಕಿ ನಂಜುಂಡಸ್ವಾಮಿ, ಯು. ಬಸವರಾಜ್, ಎಸ್. ವರಲಕ್ಷ್ಮಿ, ಹರೀಂದ್ರ, ಎಂ. ಪುಟ್ಟಮಾದು, ಸುಶೀಲಾ, ಯಶವಂತ್ ಟಿ. ಹಾಗೂ ಶ್ರೀನಿವಾಸ್ ಕುಮಾರ್ ಭಾಗವಹಿಸಿದ್ದರು.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version