ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಾಮ್ರೇಡ್ ವಿಕ್ರಂ ರಾವ್ ನಿಧನಕ್ಕೆ ಹಾಸನ ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ

ರ

ರಮೇಶ್‌ ಹಾಸನ್‌ • ರಾಜ್ಯ

• 1 ನಿಮಿಷದ ಓದು

ಕಾಮ್ರೇಡ್ ವಿಕ್ರಂ ರಾವ್ ನಿಧನಕ್ಕೆ ಹಾಸನ ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ

ಹಾಸನ : ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದಲ್ಲಿ ಅಧ್ಯಕ್ಷರಾಗಿ ಸುಧೀರ್ಘ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತ ಹಾಗೂ ಕ್ರಿಯಾಶೀಲ ಸಂಘಟಕರಾದ ಕೆ.ವಿ. ವಿಕ್ರಮರಾವ್ ಅವರಿಗೆ ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಬುಧವಾರದಂದು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಒಂದು ನಿಮಿಷ ಮೌನ ಆಚರಿಸುವುದರ ಮೂಲಕ ಅರ್ಥಪೂರ್ಣವಾಗಿ ಶ್ರದ್ಶಾಂಜಲಿ ಅರ್ಪಿಸಿದರು. ಇದೆ ವೇಳೆ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹೆಚ್.ಪಿ. ಮದನ್ ಗೌಡ ಮಾತನಾಡಿ, ಪತ್ರಕರ್ತರ ಸಂಘಟಕರಾದ ಕೆ.ವಿ. ವಿಕ್ರಮರಾವ್ ಅವರ ನಿಧನ ಪತ್ರಕರ್ತರ ರಂಗಕ್ಕೆ ಬಾರಿ ನಷ್ಟವಾಗಿದೆ. ಪಕ್ಕದ ದೇಶಗಳಲ್ಲಿ ಕೂಡ ಭಾಂದವ್ಯ ಹೊಂದಿದ್ದರು. ಕೇಂದ್ರ ಸರಕಾರ ಇವರ ಮಾತಿಗೆ ಮಾನ್ಯತೆ ಕೊಡುತಿತ್ತು. ನನಗೆ ವಿಕ್ರಮ್ ಜೊತೆ ಹೆಚ್ಚಿನ ಒಡನಾಟವಿತ್ತು. ಇಡೀ ದೇಶಾಧ್ಯಂತ ವಿವಿಧ ಜಾಗಗಳಿಗೆ ನಮ್ಮನ್ನು ಕರೆದುಕೊಂಡು ಹೋಗಿದ್ದರು. ಇಡೀ ದೇಶದ ಪತ್ರಕರ್ತರನ್ನು ಒಂದು ಕುಟುಂಬ ಎಂದುಕೊAಡಿದ್ದರು. ವಿಕ್ರಮ್ ಅವರ ಅವಧಿಯಲ್ಲಿ ಬೆಳಗೊಳದಲ್ಲಿ ಎರಡು ಸಮ್ಮೇಳನ ಆಗಿದೆ. ಪತ್ರಕರ್ತರಿಗಾಗಿಯೇ ಜೀವನವನ್ನು ಮುಡಿಪಿಗಾಗೊಟ್ಟದ್ದವರು ಎಂದು ಇದೆ ವೇಳೆ ನೆನಪಿಸಿಕೊಂಡರು. ಅವರ ನಿಧನ ಪತ್ರಿಕಾರಂಗಕ್ಕೆ ತುಂಬಲಾರದ ನಷ್ಟವಾಗಿದೆ ಎಂದರು. ಮೃತರ ಆತ್ಮಕ್ಕೆ ಶಾಂತಿ ಸಿಗಲೆ ಎಂದು ಹೇಳಿದರು.


ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷೆ ಲೀಲಾವತಿ ಮಾತನಾಡಿ, ವಿಕ್ರಮ್ ಅವರು ಧೀಮಂತ ವ್ಯಕ್ತಿತ್ವ ಹೊಂದಿದ್ದರು. ನಮ್ಮ ಜಿಲ್ಲೆಯ ಪತ್ರಕರ್ತರಿಗೆ ಹೆಚ್ಚು ಗೌರವ ಕೊಡುತ್ತಿದ್ದರು. ನಾಯಕತ್ವದ ಗುಣ ಹೊಂದಿದ್ದ ಅವರು ಎಲ್ಲಾರನ್ನು ಗೌರವಿಸುತ್ತಿದ್ದರು. ಕಾಶ್ಮೀರದಿಂದ ಕನ್ಯಾಕುಮಾರಿ ಯವರಿಗೆ ಸಂಘಟಿಸಿದ್ದರು. ಪತ್ರಕರ್ತರ ಶ್ರೇಯಾಭಿವೃದ್ಧಿಗಾಗಿ ಶ್ರಮಿಸಿದ್ದಾರೆ ಎಂದು ಹೇಳಿದರು. ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಬಿ.ಆರ್. ಉದಯಕುಮಾರ್ ಮಾತನಾಡಿ, ವಿಕ್ರಂ ಅವರ ಬರಹದಲ್ಲಿ ಭಾಷೆ ಮೇಲೆ ಹಿಡಿತ ಹೊಂದಿದ್ದರು. ಇತ್ತಿಚಿನ ಕೆಲ ಘಟನೆ ಅವರಿಗೆ ಆತಂಕ ಉಂಟು ಮಾಡಿತ್ತು. ಎಲ್ಲಾರಿಗೂ ಗೌರವ ಕೊಡುತ್ತಿದ್ದರು. ಶ್ವಾಸ ಕೋಶ ಸಮಸ್ಯೆ ಆಗಿ ಕೊನೆ ಉಸಿರು ಎಳೆದಿದ್ದಾರೆ. ಅವರ ಈ ಸಾವು ಬೇಸರ ತಂದಿದೆ ಎಂದು ಹೇಳಿದರು.


ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಬಿ.ಆರ್. ಮಂಜುನಾಥ್ ಮಾತನಾಡಿ, ಅವರು ಒಬ್ಬ ಪತ್ರಕರ್ತರಲ್ಲ. ರಾಷ್ಟಿಯ ನಾಯಕರು. ಹಾಸನ ಜಿಲ್ಲೆಗೆ ನಿಕಟ ಸಂಪರ್ಕ ಹೊಂದಿದ್ದರು. ಉತ್ತಮ ವಾಗ್ಮಿಗಳು. ಅವರ ಗಟ್ಟಿ ಸಂಘಟನೆ ಇಂದು ಕೂಡ ಪತ್ರಿಕಾ ರಂಗ ಗಟ್ಟಿಯಾಗಿ ಉಳಿದಿದೆ ಎಂದರು.
ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ರವಿನಾಕಲಗೂಡು ಮಾತನಾಡಿ, ಇಂದು ಅವರ ದೇಹ ನಮ್ಮ ಮುಂದೆ ಇಲ್ಲದಿದ್ದರೂ ಅವರು ಮಾಡಿದ ಕೆಲಸ ಜೀವಂತವಾಗಿದೆ. ವಿಕ್ರಂ ಅವರ ಆತ್ಮಕ್ಕೆ ಶಾಂತಿ ಸಿಗಲಿ. ನೇರ ನುಡಿಯ ವ್ಯಕ್ತಿತ್ವ ಹೊಂದಿದ್ದರು. 16 ರಾಜ್ಯಗಳಲ್ಲಿ ಹಿಡಿತ ಹೊಂದಿದ್ದರು. ಪತ್ರಕರ್ತರ ಬಹುತೇಕ ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದರು. ಸಂಘಟನೆಗೆ ದೊಡ್ಡ ಶಕ್ತಿ ಆಗಿದ್ದರು ಎಂದು ಹಳೆಯ ನೆನಪನ್ನು ಇದೆ ವೇಳೆ ಮೆಲುಕು ಹಾಕಿದರು.
ಜಿಲ್ಲಾ ಪತ್ರಕರ್ತರ ಸಂಘ ಪ್ರಧಾನ ಕಾರ್ಯದರ್ಶಿ ಬಿ.ಸಿ. ಶಶಿಧರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವಿಷಯಗಳು: #news #peepal
ರ

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version