ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪೆನ್ ಡ್ರೈವ್ ಪ್ರಕರಣ: ಎಸ್‌ಐಟಿ ದೋಷಾರೋಪ ಪಟ್ಟಿಗೆ ಹಾಸನ ಶಾಸಕ ಸ್ವರೂಪ್ ಪ್ರಕಾಶ್ ಆಕ್ಷೇಪ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಪೆನ್ ಡ್ರೈವ್ ಪ್ರಕರಣ: ಎಸ್‌ಐಟಿ ದೋಷಾರೋಪ ಪಟ್ಟಿಗೆ ಹಾಸನ ಶಾಸಕ ಸ್ವರೂಪ್ ಪ್ರಕಾಶ್ ಆಕ್ಷೇಪ

2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಶೇಷ ತನಿಖಾ ದಳ (SIT) ಸಲ್ಲಿಸಿರುವ ದೋಷಾರೋಪ ಪಟ್ಟಿಯನ್ನು ಹಾಸನ ಶಾಸಕ ಸ್ವರೂಪ್ ಪ್ರಕಾಶ್ ಖಂಡಿಸಿದ್ದಾರೆ. ಶುಕ್ರವಾರ ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ದೋಷಾರೋಪ ಪಟ್ಟಿಯಲ್ಲಿ ಜೆಡಿಎಸ್ ನಾಯಕರು, ಪ್ರಜ್ವಲ್ ಅವರ ಸಂಬಂಧಿಕರು ಮತ್ತು ಪಕ್ಷದ ಕಾರ್ಯಕರ್ತರ ಹೆಸರನ್ನು ಸೇರಿಸಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೋಷಾರೋಪ ಪಟ್ಟಿಯಲ್ಲಿ ಹಲವಾರು ತಾಂತ್ರಿಕ ಲೋಪದೋಷಗಳಿವೆ ಎಂದು ಆರೋಪಿಸಿದ ಶಾಸಕರು, “ಮೂರು ಮತ್ತು ನಾಲ್ಕನೇ ಆರೋಪಿಗಳ ಹೆಸರನ್ನು ಏಕೆ ಉಲ್ಲೇಖಿಸಿಲ್ಲ?” ಎಂದು ಪ್ರಶ್ನಿಸಿದರು. ತನಿಖೆಯ ಹಾದಿಯನ್ನು ತಪ್ಪಿಸುವ ಉದ್ದೇಶದಿಂದ ಕೆಲವು ಪ್ರಭಾವಿ ವ್ಯಕ್ತಿಗಳ ಹೆಸರನ್ನು ಉದ್ದೇಶಪೂರ್ವಕವಾಗಿ ಕೈಬಿಡಲಾಗಿದೆ. ಈ ಪ್ರಕರಣದ ಮೊದಲ ಆರೋಪಿ ನವೀನ್ ಎಂಬಾತನನ್ನು ನಾರ್ಕೋ ಅನಾಲಿಸಿಸ್ (Narco-analysis) ಪರೀಕ್ಷೆಗೆ ಒಳಪಡಿಸಿದರೆ ಮಾತ್ರ ಸತ್ಯಾಂಶ ಹೊರಬರಲು ಸಾಧ್ಯ ಎಂದು ಅವರು ಪ್ರತಿಪಾದಿಸಿದರು.

ಲೋಕಸಭಾ ಚುನಾವಣೆಯ ಸಮಯದಲ್ಲಿ ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಕಾಂಗ್ರೆಸ್ ನಾಯಕರು ಪೆನ್ ಡ್ರೈವ್‌ಗಳನ್ನು ಹಂಚಿದ್ದಾರೆ ಎಂಬುದು ಹಾಸನ ಜಿಲ್ಲೆಯ ಜನರಿಗೆ ತಿಳಿದಿದೆ. ನಿಜವಾದ ಆರೋಪಿಗಳನ್ನು ಬಿಟ್ಟು ಜೆಡಿಎಸ್ ನಾಯಕರು ಮತ್ತು ಕಾರ್ಯಕರ್ತರ ಹೆಸರನ್ನು ಸೇರಿಸಿರುವುದು ರಾಜಕೀಯ ಪಿತೂರಿಯ ಭಾಗವಾಗಿದೆ ಎಂದು ಸ್ವರೂಪ್ ಪ್ರಕಾಶ್ ಕಿಡಿಕಾರಿದರು. ಒಟ್ಟು 39 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದ್ದು, ಇದರಲ್ಲಿ 12 ಜೆಡಿಎಸ್ ನಾಯಕರು ಮತ್ತು ಕಾರ್ಯಕರ್ತರ ಹೆಸರಿರುವುದು ಸರ್ಕಾರದ ಹಸ್ತಕ್ಷೇಪಕ್ಕೆ ಸಾಕ್ಷಿಯಾಗಿದೆ ಎಂದು ಅವರು ದೂರಿದರು.

ತಮ್ಮ ಮತ್ತು ಹೊಳೆನರಸೀಪುರ ಶಾಸಕ ಎಚ್.ಡಿ. ರೇವಣ್ಣ ಅವರ ಕುಟುಂಬದ ನಡುವೆ ಬಿರುಕು ಮೂಡಿಸಲು ಉದ್ದೇಶಪೂರ್ವಕವಾಗಿ ಪಿತೂರಿ ನಡೆಸಲಾಗುತ್ತಿದೆ ಎಂದು ಸ್ವರೂಪ್ ಆರೋಪಿಸಿದರು. ಪ್ರಭಾವಿ ವ್ಯಕ್ತಿಗಳ ಹಸ್ತಕ್ಷೇಪದಿಂದಾಗಿ ಏಕಪಕ್ಷೀಯವಾಗಿ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ಈ ಪ್ರಕರಣದಲ್ಲಿ ಸತ್ಯ ಹೊರಬರಲು ಪಕ್ಷಪಾತವಿಲ್ಲದ ತನಿಖೆಯ ಅಗತ್ಯವಿದೆ ಎಂದು ಅವರು ಒತ್ತಾಯಿಸಿದರು.

ಪಕ್ಷದ ಕಾರ್ಯಕರ್ತರು ಮತ್ತು ನಾಯಕರು ಧೃತಿಗೆಡಬಾರದು, ನಾವು ಅವರ ಬೆನ್ನಿಗಿದ್ದೇವೆ ಮತ್ತು ಈ ವಿಚಾರವಾಗಿ ನ್ಯಾಯಾಲಯದ ಮೊರೆ ಹೋಗುವುದಾಗಿ ಅವರು ತಿಳಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಎಸ್. ದ್ಯಾವೇಗೌಡ, ವಕ್ತಾರರಾದ ರಘು ಹೊಂಗೆರೆ ಮತ್ತು ಸಮೀರ್ ಅಹಮದ್ ಉಪಸ್ಥಿತರಿದ್ದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು