ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕೆಪಿಎಸ್‌ಸಿ ಅಕ್ರಮ: ಭ್ರಷ್ಟ ಅಧಿಕಾರಿಗಳ ರಕ್ಷಣೆಗೆ ಸರ್ಕಾರ ಯತ್ನ; ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಎಚ್.ಡಿ. ಕುಮಾರಸ್ವಾಮಿ ಆಗ್ರಹ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಕೆಪಿಎಸ್‌ಸಿ ಅಕ್ರಮ: ಭ್ರಷ್ಟ ಅಧಿಕಾರಿಗಳ ರಕ್ಷಣೆಗೆ ಸರ್ಕಾರ ಯತ್ನ; ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಎಚ್.ಡಿ. ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ರಾಜ್ಯದ ಹಲವೆಡೆ ಸತತ ದಾಳಿ ನಡೆಸುತ್ತಿರುವ ಬೆನ್ನಲ್ಲೇ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪಶುವೈದ್ಯಾಧಿಕಾರಿ ಹುದ್ದೆಯ ನೇಮಕಾತಿಗೆ ₹80 ಲಕ್ಷ ನಿಗದಿಪಡಿಸಲಾಗಿದೆ ಎಂದು ಯುವಕನೊಬ್ಬ ಗಂಭೀರ ಆರೋಪ ಮಾಡಿದ್ದ ಹಿನ್ನೆಲೆಯಲ್ಲಿ ಇಡಿ ತನಿಖೆ ಚುರುಕುಗೊಳಿಸಿದೆ ಎಂದು ಅವರು ತಿಳಿಸಿದರು.

ಈ ಹಗರಣದಲ್ಲಿ ಭಾಗಿಯಾದ ಪರೀಕ್ಷಾ ನಿಯಂತ್ರಕರೊಬ್ಬರು (ಕಸ್ಟೋಡಿಯನ್) ರಾಜ್ಯದಿಂದ ಪರಾರಿಯಾಗಿದ್ದು, ಅವರನ್ನು ರಕ್ಷಿಸಲು ಸರ್ಕಾರ ಯತ್ನಿಸುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು. “ಆ ಅಧಿಕಾರಿ ತಂದೆಯ ಅನಾರೋಗ್ಯದ ಕಾರಣಕ್ಕೆ ಹಿರಿಯ ಅಧಿಕಾರಿಗಳಿಂದ ಅನುಮತಿ ಪಡೆದು ತೆರಳಿದ್ದಾರೆ ಎಂದು ಈ ಹಿಂದೆ ಗೃಹ ಸಚಿವರು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದರು. ಆದರೆ ಈಗ ಆತ ಎಲ್ಲಿದ್ದಾನೆ ಎಂದೇ ಗೊತ್ತಿಲ್ಲ ಎನ್ನುತ್ತಿದ್ದಾರೆ. ಆಡಳಿತದಲ್ಲಿ ಪಾರದರ್ಶಕತೆ ತರುವುದಾಗಿ ಹೇಳಿಕೊಳ್ಳುವ ಈ ಸರ್ಕಾರ, ಭ್ರಷ್ಟ ಅಧಿಕಾರಿಗಳು ರಾಜ್ಯದಿಂದ ಪರಾರಿಯಾಗಲು ಅನುವು ಮಾಡಿಕೊಟ್ಟು ಅವರನ್ನು ರಕ್ಷಿಸುತ್ತಿದೆ,” ಎಂದು ಕಿಡಿಕಾರಿದರು.

ಹಿಂದೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅವಧಿಯಲ್ಲಿ ಪ್ರಿಯಾಂಕ್ ಖರ್ಗೆ ಅವರು ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದಾಗ ನಡೆದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (AEE) ಹುದ್ದೆಗಳ ನೇಮಕಾತಿಯಲ್ಲೂ ಅಕ್ರಮ ನಡೆದಿತ್ತು ಎಂದು ಕೆಪಿಎಸ್‌ಸಿ ವರದಿ ನೀಡಿತ್ತು. ಅಂತಹ ಅನರ್ಹರನ್ನು ನೇಮಕ ಮಾಡಿಕೊಳ್ಳದಂತೆ ಶಿಫಾರಸು ಮಾಡಿದ್ದರೂ ಅವರನ್ನು ರಕ್ಷಿಸಲಾಗಿತ್ತು ಎಂದು ನೆನಪಿಸಿದ ಕುಮಾರಸ್ವಾಮಿ, ಇಂತಹ ನೇಮಕಾತಿ ಅಕ್ರಮಗಳಿಗೆ ಸರ್ಕಾರವೇ ಕುಮ್ಮಕ್ಕು ನೀಡುತ್ತಿದೆ ಎಂದು ಆರೋಪಿಸಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು