ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಿದದಿ ಟೌನ್‌ಶಿಪ್ ಯೋಜನೆ: ಕಾಂಗ್ರೆಸ್‌ಗೆ ಫ್ರೀಡಂ ಪಾರ್ಕ್‌ನಲ್ಲಿ ಬಹಿರಂಗ ಚರ್ಚೆಗೆ ಎಚ್‌ಡಿಕೆ ಸವಾಲು

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಬಿದದಿ ಟೌನ್‌ಶಿಪ್ ಯೋಜನೆ: ಕಾಂಗ್ರೆಸ್‌ಗೆ ಫ್ರೀಡಂ ಪಾರ್ಕ್‌ನಲ್ಲಿ ಬಹಿರಂಗ ಚರ್ಚೆಗೆ ಎಚ್‌ಡಿಕೆ ಸವಾಲು

ಬೆಂಗಳೂರು: ಪ್ರಸ್ತಾವಿತ ಬಿದದಿ ಸ್ಮಾರ್ಟ್ ಸಿಟಿ/ಟೌನ್‌ಶಿಪ್ ಯೋಜನೆ ಮತ್ತು ನೈಸ್ (NICE) ರಸ್ತೆ ಅಕ್ರಮಗಳ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಕಾಂಗ್ರೆಸ್ ನಾಯಕರಿಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮುಖಾಮುಖಿ ಬಹಿರಂಗ ಚರ್ಚೆಗೆ ಸವಾಲು ಹಾಕಿದ್ದಾರೆ.

ರಾಮನಗರವನ್ನು ‘ಬೆಂಗಳೂರು ದಕ್ಷಿಣ’ ಎಂದು ಮರುನಾಮಕರಣ ಮಾಡುವ ಸರ್ಕಾರದ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ ಕುಮಾರಸ್ವಾಮಿ, “ಹೆಸರು ಬದಲಾಯಿಸಿದ ತಕ್ಷಣ ಭೂಮಿಯ ಬೆಲೆ ಗಗನಕ್ಕೇರುತ್ತದೆ ಎಂಬ ಭ್ರಮೆಯನ್ನು ಸೃಷ್ಟಿಸಿ, ರೈತರು ಜಮೀನು ಮಾರಾಟ ಮಾಡದಂತೆ ಡಿ.ಕೆ. ಶಿವಕುಮಾರ್ ಪ್ರಚಾರ ಮಾಡುತ್ತಿದ್ದಾರೆ. ಈ ಹಿಂದೆ ನೈಸ್ ಯೋಜನೆ ಹೆಸರಿನಲ್ಲಿ ರೈತರ ಭೂಮಿಯನ್ನು ಕೊಳ್ಳೆಹೊಡೆಯಲಾಗಿತ್ತು. ಐದು ಟೌನ್‌ಶಿಪ್‌ಗಳ ಹೆಸರಿನಲ್ಲಿ ಸುಮಾರು 1.75 ಲಕ್ಷ ಎಕರೆ ರೈತರ ಭೂಸ್ವಾಧೀನಕ್ಕೆ ಯತ್ನಿಸಿದ ಅದೇ ಹಳೆಯ ಮಾದರಿಯನ್ನು ಈಗ ಬಿದದಿ ಯೋಜನೆಯಲ್ಲೂ ಪುನರಾವರ್ತಿಸಲಾಗುತ್ತಿದೆ,” ಎಂದು ಗಂಭೀರ ಆರೋಪ ಮಾಡಿದರು.

ಯೋಜನೆಯ ಇತಿಹಾಸವನ್ನು ಪ್ರಸ್ತಾಪಿಸಿದ ಅವರು, “1995ರ ಫೆಬ್ರವರಿ 2 ರಂದು ಅಂದಿನ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದಲ್ಲಿ ಅಮೆರಿಕನ್ ಸಂಸ್ಥೆಯೊಂದಿಗೆ ಈ ಯೋಜನೆಗೆ ಒಡಂಬಡಿಕೆ ಮಾಡಿಕೊಳ್ಳಲಾಗಿತ್ತು. ಸರ್ಕಾರದ ಯಾವುದೇ ಆರ್ಥಿಕ ನೆರವಿಲ್ಲದೆ ಕಂಪನಿಯೇ ಹಣ ಹೂಡಿಕೆ ಮಾಡಬೇಕೆಂಬ ಷರತ್ತು ವಿಧಿಸಲಾಗಿತ್ತು. ಆದರೆ ನಂತರ ಮೂಲ ಅಮೆರಿಕನ್ ಕಂಪನಿಯನ್ನು ಮೂಲೆಗುಂಪು ಮಾಡಿ ಮಧ್ಯವರ್ತಿಗಳಿಗೆ ಮಣೆ ಹಾಕಿ ಇಡೀ ಯೋಜನೆಯನ್ನು ಹಳ್ಳಹಿಡಿಸಿದ್ದು ಯಾರು?” ಎಂದು ಪ್ರಶ್ನಿಸಿದರು.

ವಿಧಾನಸೌಧದ ಮೆಟ್ಟಿಲು ಮತ್ತು ಮುಖ್ಯಮಂತ್ರಿ ಕುರ್ಚಿಗೆ ಡಿ.ಕೆ. ಶಿವಕುಮಾರ್ ತಲೆಬಾಗಿದ್ದನ್ನು ವ್ಯಂಗ್ಯವಾಡಿದ ಕುಮಾರಸ್ವಾಮಿ, “ಕೇವಲ ಫೋಟೋಗಳಿಗೆ ಪೋಸ್ ಕೊಡುವ ಬದಲು ರಾಜ್ಯಕ್ಕೆ ಏನು ಮಾಡಿದ್ದೇವೆ ಎಂದು ತಮ್ಮ ಆತ್ಮಸಾಕ್ಷಿಯನ್ನು ಕೇಳಿಕೊಳ್ಳಲಿ. ಕಳೆದ 525 ದಿನಗಳಿಂದ ಬಿದದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಮಹಿಳೆಯರು ಮತ್ತು ರೈತರು ಪ್ರತಿಭಟನೆ ನಡೆಸುತ್ತಿದ್ದರೂ, ಸರ್ಕಾರ ಅವರನ್ನು ಒಮ್ಮೆಯೂ ಮಾತುಕತೆಗೆ ಕರೆಯುವ ಸೌಜನ್ಯ ತೋರಿಲ್ಲ. ವಿಧಾನಸೌಧದಲ್ಲಿ ನನಗೆ ಮಾತನಾಡಲು ಅವಕಾಶ ಸಿಗದಿದ್ದರೂ, ಫ್ರೀಡಂ ಪಾರ್ಕ್‌ನಲ್ಲಿ ವೇದಿಕೆ ಸಿದ್ಧಪಡಿಸಿ ಮಾಜಿ ಶಾಸಕರು ಸೇರಿದಂತೆ ಕಾಂಗ್ರೆಸ್‌ನ ಎಲ್ಲಾ 224 ನಾಯಕರ ಪ್ರಶ್ನೆಗಳಿಗೂ ಉತ್ತರಿಸಲು ನಾನು ಸಿದ್ಧನಿದ್ದೇನೆ,” ಎಂದರು.

ಜೆಡಿಎಸ್ ಪಕ್ಷವು ಕಾನೂನುಬಾಹಿರವಾಗಿ ಎಂದಿಗೂ ನಡೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಬಿದದಿ ಟೌನ್‌ಶಿಪ್ ಯೋಜನೆಯ ವಿರುದ್ಧ ದೆಹಲಿ ಮಾದರಿಯ ಹೋರಾಟ ರೂಪಿಸಲು ಫ್ರೀಡಂ ಪಾರ್ಕ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಒಗ್ಗೂಡುವಂತೆ ಜನತೆಗೆ ಕರೆ ನೀಡಿದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು