ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪಂಚರತ್ನ ರಥಯಾತ್ರೆಯನ್ನು ನಾಲ್ಕು ದಿನ ಮುಂದೂಡಿದ ಹೆಚ್‌ಡಿಕೆ

P

Peepal Media Desk • ರಾಜ್ಯ

• 1 ನಿಮಿಷದ ಓದು

ಪಂಚರತ್ನ ರಥಯಾತ್ರೆಯನ್ನು ನಾಲ್ಕು ದಿನ ಮುಂದೂಡಿದ ಹೆಚ್‌ಡಿಕೆ

ತುಮಕೂರು : ಭಾನುವಾರದಿಂದ ಚಿಕ್ಕನಾಯಕನಹಳ್ಳಿ ವಿಧಾನಸಭೆ ಕ್ಷೇತ್ರದಿಂದ ಪುನಾರಂಭ ಆಗಬೇಕಿದ್ದ ಪಂಚರತ್ನ ರಥಯಾತ್ರೆಯನ್ನು ನಾಲ್ಕು ದಿನಗಳ ಮಟ್ಟಿಗೆ ಮುಂದೂಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಹೆಚ್‌ಡಿ ಕುಮಾರಸ್ವಾಮಿಯವರು, ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ತುಮಕೂರು ಜಿಲ್ಲೆ ಸೇರಿದಂತೆ ರಾಜ್ಯದ ಒಳನಾಡು ಭಾಗಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಈ ಕಾರಣಕ್ಕೆ ಪಂಚರತ್ನ ರಥಯಾತ್ರೆಯನ್ನು ಅನಿವಾರ್ಯವಾಗಿ ಮುಂದಕ್ಕೆ ಹಾಕಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪೂರ್ವ ನಿಗದಿತ ವೇಳಾಪಟ್ಟಿಯಂತೆ ರಥಯಾತ್ರೆಯು ಚಿಕ್ಕನಾಯಕನಹಳ್ಳಿಯಿಂದ ಶುರುವಾಗಬೇಕಿತ್ತು. ತದನಂತರ ತುರುವೇಕೆರೆ, ತುಮಕೂರು ಗ್ರಾಮಾಂತರ, ಕುಣಿಗಲ್ ಕ್ಷೇತ್ರಗಳಲ್ಲಿ ರಥಯಾತ್ರೆ ನಡೆಯಬೇಕಿತ್ತು. ಆದರೆ, ತುಮಕೂರು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿರುವ ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ, ಪಂಚರತ್ನ ರಥಯಾತ್ರೆ ಮಾರ್ಗವನ್ನು ವೇಳಾಪಟ್ಟಿಯಲ್ಲಿ ಪರಿಷ್ಕರಣೆ ಮಾಡಲಾಗಿದೆ.

ಡಿಸೆಂಬರ್ 15ರಂದು ಮಾಗಡಿಯಲ್ಲಿ ರಥಯಾತ್ರೆ ನಡೆಯಲಿದ್ದು, ಡಿಸೆಂಬರ್ 27ರಂದು ಮತ್ತೆ ತುಮಕೂರು ಜಿಲ್ಲೆಗೆ ರಥಯಾತ್ರೆ ಪ್ರವೇಶ ಮಾಡಲಿದೆ ಎಂದು ಅವರು ತಿಳಿಸಿದ್ದಾರೆ.

ಡಿಸೆಂಬರ್ 27ರಂದು ತುರುವೇಕೆರೆ, 28ರಂದು ಚಿಕ್ಕನಾಯಕನಹಳ್ಳಿ, 29ರಂದು ತುಮಕೂರು ಗ್ರಾಮಾಂತರ, 30ರಂದು ಕುಣಿಗಲ್ ಕ್ಷೇತ್ರದಲ್ಲಿ ರಥಯಾತ್ರೆ ನಡೆಯಲಿದೆ.

ಡಿಸೆಂಬರ್ 15ರಂದು ಮಾಗಡಿ, 16ರಂದು ರಾಮನಗರ, 17ರಂದು ಹಾರೋಹಳ್ಳಿ, 18ರಂದು ಕನಕಪುರ, 19ರಂದು ಚನ್ನಪಟ್ಟಣ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದೆ.

ಡಿಸೆಂಬರ್ 20ರಂದು ಮಂಡ್ಯ ಜಿಲ್ಲೆಗೆ ರಥಯಾತ್ರೆ ಪ್ರವೇಶ ಮಾಡಲಿದ್ದು, 20ರಂದು ಮಳವಳ್ಳಿ, 21ಕ್ಕೆ ಮದ್ದೂರು, 22ಕ್ಕೆ ಮಂಡ್ಯ, 23ಕ್ಕೆ ಶ್ರೀರಂಗಪಟ್ಟಣ, 24ಕ್ಕೆ ಪಾಂಡವಪುರ, 25ಕ್ಕೆ ಕೆ.ಆರ್.ಪೇಟೆ, 26ಕ್ಕೆ ನಾಗಮಂಗಲ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಅವರು ಹೇಳಿದ್ದಾರೆ.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version