ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮುಖ್ಯ ಶಿಕ್ಷಕ ಆತ್ಮಹ*ತ್ಯೆ 10 ಜನರ ವಿರುದ್ಧ ಎಫ್‌ಐಆರ್

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಮುಖ್ಯ ಶಿಕ್ಷಕ ಆತ್ಮಹ*ತ್ಯೆ 10 ಜನರ ವಿರುದ್ಧ ಎಫ್‌ಐಆರ್

ದಾವಣಗೆರೆ : ಹರಿಹರ ತಾಲೂಕಿನ ಕೊಕ್ಕನೂರು ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಜಯಪ್ಪ (54) ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ (Crime) ಪ್ರಕರಣಕ್ಕೆ (Tragedy) ಸಂಬಂಧಿಸಿದಂತೆ ಐವರು ಸಹ ಶಿಕ್ಷಕರು ಹಾಗೂ ಬಿಸಿಯೂಟದ ಸಿಬ್ಬಂದಿ ಸೇರಿದಂತೆ ಒಟ್ಟು 10 ಜನರ ವಿರುದ್ಧ ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮೃತರ ಪತ್ನಿ ಅಂಜನಮ್ಮ ನೀಡಿದ ಅಧಿಕೃತ ದೂರಿನ ಮೇರೆಗೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಸಹ ಶಿಕ್ಷಕರಾದ ಶ್ರೀಕಾಂತಚಾರಿ, ವೆಂಕಟೇಶ್, ರಂಜನಿ, ಚೇತನಾ, ಮಹಾಂತೇಶ್ ಗೌಳಿ ಹಾಗೂ ಅಡುಗೆ ಸಹಾಯಕರಾದ ಸುಮಾ, ಚೆನ್ನಮ್ಮ, ರೂಪಾ, ವಿಜಯಮ್ಮ ಸೇರಿದಂತೆ ಸಿಆರ್‌ಪಿ ಮತ್ತು ಬಿಆರ್‌ಪಿ ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ.

ಗಂಭೀರ ಆರೋಪ ಮಾಡಿದ್ದ ಮೃತ ಶಿಕ್ಷಕರ ಪತ್ನಿ
ಮೃತ ಜಯಪ್ಪ ಅವರ ಪತ್ನಿ ಅಂಜನಮ್ಮ ದೂರಿನಲ್ಲಿ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಕಳೆದ 10 ತಿಂಗಳಿಂದ ಕೊಕ್ಕನೂರು ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ತಮ್ಮ ಪತಿಗೆ ಅಲ್ಲಿನ ಸಹ ಶಿಕ್ಷಕರು ಮತ್ತು ಸಿಬ್ಬಂದಿ ನಿರಂತರವಾಗಿ ಮಾನಸಿಕ ಹಿಂಸೆ ಹಾಗೂ ಕಿರುಕುಳ ನೀಡುತ್ತಿದ್ದರು ಎಂದು ಅವರು ತಿಳಿಸಿದ್ದಾರೆ. ತಾವು ಪರಿಶಿಷ್ಟ ಜಾತಿಗೆ ಸೇರಿರುವುದರಿಂದ ನಿತ್ಯವೂ ಜಾತಿ ನಿಂದನೆ ಮಾಡಿ ಅವಮಾನಿಸಲಾಗುತ್ತಿತ್ತು. ಈ ಕಹಿ ಘಟನೆಗಳ ಬಗ್ಗೆ ತಮ್ಮ ಪತಿ ಮನೆಯಲ್ಲಿ ಹತ್ತಾರು ಬಾರಿ ಹೇಳಿಕೊಂಡು ನೊಂದಿದ್ದರು. ಶಾಲೆಯ ಸಿಬ್ಬಂದಿ ನೀಡಿದ ನಿರಂತರ ಮಾನಸಿಕ ಕಿರುಕುಳ ಹಾಗೂ ಜಾತಿ ನಿಂದನೆಯೇ ತಮ್ಮ ಪತಿಯ ಆತ್ಮಹತ್ಯೆಗೆ ನೇರ ಕಾರಣ ಎಂದು ಅಂಜನಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಏನಿದು ಘಟನೆ?
ಸಹಶಿಕ್ಷಕರೊಂದಿಗೆ ಉಂಟಾಗಿದ್ದ ಕಲಹದಿಂದ ಮನನೊಂದು ಆತ್ಮಹತ್ಯೆಗೆ (Self Harming ) ಯತ್ನಿಸಿದ್ದ ಹರಿಹರ ತಾಲೂಕಿನ ಕೊಕ್ಕನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ (Head Master ) ಜಯಪ್ಪ (55) ಅವರು ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ ಸಾವನ್ನಪ್ಪಿದ್ದರು.

ಶಾಲೆಯಲ್ಲಿ ಮುಖ್ಯಶಿಕ್ಷಕರು ಹಾಗೂ ಸಹಶಿಕ್ಷಕರ ನಡುವೆ ಉಂಟಾಗಿದ್ದ ಜಗಳದ ಹಿನ್ನೆಲೆಯಲ್ಲಿ, ಮೊನ್ನೆ ಬಿಆರ್‌ಸಿ (BRC) ಹಾಗೂ ಎಸ್‌ಡಿಎಂಸಿ (SDMC) ನೇತೃತ್ವದಲ್ಲಿ ಶಾಂತಿಸಭೆ ಕರೆಯಲಾಗಿತ್ತು. ಸಭೆ ನಡೆಯುತ್ತಿದ್ದ ಮಧ್ಯದಲ್ಲೇ ತೀವ್ರವಾಗಿ ಮನನೊಂದ ಜಯಪ್ಪ ಅವರು, ಶೌಚಾಲಯಕ್ಕೆ ತೆರಳಿ ವಿಷ ಸೇವಿಸಿದ್ದರು.

ಕೂಡಲೇ ಸ್ಥಳೀಯರು ಅವರನ್ನು ದಾವಣಗೆರೆಯ ಚಿಗಟೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕುಟುಂಬಸ್ಥರು ನಗರದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದರು. ಆದರೆ ಪರಿಸ್ಥಿತಿ ಗಂಭೀರವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಸದ್ಯ ಜಯಪ್ಪ ಅವರ ಸಾವು ಇಡೀ ಗ್ರಾಮ ಹಾಗೂ ಶಿಕ್ಷಣ ಇಲಾಖೆಯಲ್ಲಿ ಈ ಘಟನೆ ತೀವ್ರ ವಿಷಾದ ಮೂಡಿಸಿದೆ. ಸ್ಥಳೀಯ ಸ್ಥಳೀಯ ಪೊಲೀಸರು ಈ ಸಂಬಂಧ ಕೇಸ್ ದಾಖಲು ಮಾಡಿಕೊಂಡಿದ್ದರು. ಇದೀಗ,  ಮಾನಸಿಕ ಹಿಂಸೆ, ಕಿರುಕುಳ ಹಾಗೂ ಜಾತಿನಿಂದನೆ ಆರೋಪದ ಅಡಿಯಲ್ಲಿ 10 ಜನರ ಮೇಲೆ ಪ್ರಕರಣ ದಾಖಲು ಮಾಡಿದ್ದಾರೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು