ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಚಾರ್ಮಾಡಿಯಲ್ಲಿ ಮಳೆಯ ಅಬ್ಬರ, ಭೂಕುಸಿತ – ಲಘು ಅಪಘಾತ 

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಚಾರ್ಮಾಡಿಯಲ್ಲಿ ಮಳೆಯ ಅಬ್ಬರ, ಭೂಕುಸಿತ – ಲಘು ಅಪಘಾತ 

ಮೂಡಿಗೆರೆ: ಕರಾವಳಿ ಹಾಗೂ ಮಲೆನಾಡು ಭಾಗವನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾದ ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ 73ರ ಚಾರ್ಮಾಡಿ ಘಾಟಿ (Charmadi Ghat )ಪ್ರದೇಶದಲ್ಲಿ ಮುಂಗಾರು ಮಳೆಯ (Rain )ಅಬ್ಬರ ತೀವ್ರಗೊಂಡಿದೆ.

ಕಳೆದೆರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಘಾಟಿಯ ಪ್ರಮುಖ ಕಿರಿದಾದ ತಿರುವುಗಳಲ್ಲಿ ಸಣ್ಣಪುಟ್ಟ ಲಘು ಭೂಕುಸಿತಗಳು (Minor Landslides) ಸಂಭವಿಸುತ್ತಿವೆ. ನಿರಂತರ ಮಳೆಗೆ ರಸ್ತೆಯ ಬದಿಯ ಗುಡ್ಡಗಳಿಂದ ಕಲ್ಲು-ಮಣ್ಣುಗಳು ಜಾರುತ್ತಿರುವುದು ಸವಾರರಲ್ಲಿ ಆತಂಕ ಮೂಡಿಸಿದೆ.

ಮಳೆಯ ಜೊತೆಗೆ ಇಡೀ ಘಾಟ್ ನ ಪ್ರದೇಶದಲ್ಲಿ ದಟ್ಟವಾದ ಮಂಜು ಕವಿದಿರುವುದರಿಂದ ವಾಹನ ಸವಾರರು ತೀವ್ರ ಪರದಾಡುವಂತಾಗಿದೆ. ರಸ್ತೆಯ ಕಡಿದಾದ 11 ಹೇರ್‌ಪಿನ್ ತಿರುವುಗಳಲ್ಲಿ ಎದುರಿಗಿನ ರಸ್ತೆ ಹಾಗೂ ವಾಹನಗಳು ಸರಿಯಾಗಿ ಕಾಣಿಸದೆ ದೃಶ್ಯ ಗೋಚರತೆ (Visibility) ಸಂಪೂರ್ಣ ಕುಸಿದಿದೆ. ಇದೇ ದಟ್ಟ ಮಂಜಿನ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿದ ಕಾರೊಂದು ಚಾರ್ಮಾಡಿ ಘಾಟ್ ರಸ್ತೆಯಲ್ಲೇ ಪಲ್ಟಿಯಾಗಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಾಟ್ ನಲ್ಲಿ ಹವಾಮಾನ ಪರಿಸ್ಥಿತಿ ಬಿಗಡಾಯಿಸುತ್ತಿರುವುದರಿಂದ ಜಿಲ್ಲಾಡಳಿತ ಹಾಗೂ ಹೆದ್ದಾರಿ ಇಲಾಖೆ ಪ್ರಯಾಣಿಕರಿಗೆ ಕಟ್ಟುನಿಟ್ಟಿನ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ನೀಡಿದೆ. ವಾಹನ ಚಾಲಕರು ಕಡ್ಡಾಯವಾಗಿ ಫಾಗ್ ಲೈಟ್‌ಗಳನ್ನು ಆನ್ ಮಾಡಿಕೊಂಡು ನಿಧಾನಗತಿಯಲ್ಲಿ ಚಲಿಸುವಂತೆ ಸೂಚಿಸಲಾಗಿದೆ. ಅಲ್ಲದೆ, ಅಪಾಯಕಾರಿ ತಿರುವುಗಳು ಹಾಗೂ ಜಲಪಾತಗಳ ಬಳಿ ಸೆಲ್ಫಿ ತೆಗೆದುಕೊಳ್ಳಲು ವಾಹನಗಳನ್ನು ನಿಲ್ಲಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಸಾಧ್ಯವಾದಷ್ಟು ಪರ್ಯಾಯ ಮಾರ್ಗಗಳನ್ನು ಬಳಸಲು ಕೋರಲಾಗಿದೆ.

ಮುಂದಿನ ದಿನಗಳಲ್ಲಿ ಮಳೆ ಹೀಗೆಯೇ ಮುಂದುವರಿದರೆ ಗುಡ್ಡ ಕುಸಿತ ಹಾಗೂ ಮರಗಳು ಧರೆಗುರುಳುವ ಸಾಧ್ಯತೆ ಹೆಚ್ಚಿರುವುದರಿಂದ, ರಾಷ್ಟ್ರೀಯ ಹೆದ್ದಾರಿ ಇಲಾಖೆ, ಅರಣ್ಯ ಇಲಾಖೆ ಹಾಗೂ ಸ್ಥಳೀಯ ಸಮಾಜಸೇವಕರು ಕಟ್ಟೆಚ್ಚರ ವಹಿಸಿದ್ದಾರೆ. ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಎರಡೂ ವಿಭಾಗಗಳಿಂದ ರಸ್ತೆ ಸಂಚಾರ ಸುಗಮಗೊಳಿಸಲು ಜೆಸಿಬಿ ಯಂತ್ರಗಳು ಹಾಗೂ ಅಗತ್ಯ ಕಾರ್ಮಿಕರನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ಹಿಂದೆಂದಿಗಿಂತ ರಸ್ತೆ ಅಗಲಗೊಂಡಿರುವುದು ಹಾಗೂ ತಡೆಗೋಡೆಗಳ ನಿರ್ಮಾಣ ಕಾರ್ಯ ಬಹುತೇಕ ಪೂರ್ಣಗೊಂಡಿರುವುದು ಸದ್ಯಕ್ಕೆ ಸಮಾಧಾನ ಸಂಗತಿಯಾಗಿದೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು