ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ತ್ರಿವಳಿ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಅಲರ್ಟ್

PPeepal Media

Peepal Media ರಾಜ್ಯ

• 1 ನಿಮಿಷದ ಓದು

ತ್ರಿವಳಿ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಅಲರ್ಟ್

ನೈರುತ್ಯ ಮುಂಗಾರು ಮಳೆ ಚುರುಕಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಒಳನಾಡಿನಲ್ಲಿ ಸಾಧಾರಣ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ಇನ್ನೂ ಎರಡು ದಿನಗಳ ಕಾಲ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ. ಭಾಗಶಃ ಮೋಡ ಕವಿದ ವಾತಾವರಣವಿದ್ದು, ಆಗಾಗ್ಗೆ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.ಕೇರಳದಿಂದ ಮಹಾರಾಷ್ಟ್ರದವರೆಗೆ ಮೇಲುಬ್ಬರ ಉಂಟಾಗಿದ್ದು, ಬಂಗಾಳ ಕೊಲ್ಲಿಯಲ್ಲಿ ಮೇಲೈ ಸುಳಿಗಾಳಿ ಉಂಟಾಗಿರುವ ಪರಿಣಾಮ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಕೇರಳ, ಕೊಡಗು ಹಾಗೂ ಮಲೆನಾಡು ಭಾಗದಲ್ಲಿ ಕಳೆದ ಎಂಟತ್ತು ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಅದೇ ರೀತಿ ಪ್ರಮುಖ ಜಲಾಶಯಗಳಲ್ಲೂ ದಿನದಿಂದ ದಿನಕ್ಕೆ ನೀರಿನ ಮಟ್ಟ ಹೆಚ್ಚಾಗುತ್ತಿದೆ.ಭಾರೀ ಮಳೆಯಾಗುತ್ತಿರುವ ಕರಾವಳಿ ಹಾಗೂ ಮಲೆನಾಡಿನಲ್ಲಿ ಭೂ ಕುಸಿತ, ಮರ ಹಾಗೂ ವಿದ್ಯುತ್‌ ಕಂಬಗಳು ಉರುಳಿ ಬಿದ್ದಿವೆ. ನಿರಂತರ ಮಳೆಯಿಂದ ಜನಜೀವನವೂ ಅಸ್ತವ್ಯಸ್ತಗೊಂಡಿದೆ.

ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ರೈತರು ಸಹ ಬಿತ್ತನೆಗೆ ಭೂಮಿ ಹದ ಮಾಡತೊಡಗಿದ್ದಾರೆ. ಜೂನ್‌ ತಿಂಗಳಲ್ಲೂ ಉತ್ತಮ ಮಳೆಯಾಗಿತ್ತು. ಹೀಗಾಗಿ ಮುಂಗಾರು ಹಂಗಾಮಿನಲ್ಲಿ ವಿವಿಧ ಬೆಳೆಗಳ ಬಿತ್ತನೆಗೆ ರೈತರು ಸಿದ್ಧತೆ ನಡೆಸುತ್ತಿದ್ದಾರೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು