ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕರಾವಳಿಯಲ್ಲಿ ವರುಣಾರ್ಭಟ 3 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ – ಘೋಷಣೆ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಕರಾವಳಿಯಲ್ಲಿ ವರುಣಾರ್ಭಟ 3 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ – ಘೋಷಣೆ

ಬೆಂಗಳೂರು : ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಕರಾವಳಿಗೆ ಭಾಗಕ್ಕೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಜೊತೆಗೆ, ಮಳೆಯೊಂದಿಗೆ ಗಂಟೆಗೆ 30-40 ಕಿಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ. ಮುಂಗಾರು ಮಳೆಯ ಅಬ್ಬರ ಜೋರಾಗುವ ಹಿನ್ನೆಲೆ ಕಡಲ ತೀರದ ನಿವಾಸಿಗಳು ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ವಹಿಸಲು ಹವಾಮಾನ ಇಲಾಖೆ ಸೂಚಿಸಿದೆ.

ಕರಾವಳಿ ಸೇರಿದಂತೆ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.

ಇನ್ನು ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಾಪುರ ಮತ್ತು ಯಾದಗಿರಿ ಜಿಲ್ಲೆಗಳ ಹಲವು ಸ್ಥಳಗಳಲ್ಲಿ 30-40 ಕಿಮೀ ವೇಗದಲ್ಲಿ ನಿರಂತರ ಗಾಳಿ ಬೀಸುವುದರೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಬಲವಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು