ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹೆಚ್ಚಾದ ಕಾಡಾನೆ ಹಾವಳಿ : ಪರಿಹಾರಕ್ಕಾಗಿ ಮಲೆನಾಡಿಗೆ ಭೇಟಿ ನೀಡಿದ ಅರಣ್ಯಪಡೆ

PPeepal Media Desk

Peepal Media Desk • ರಾಜ್ಯ

• 1 ನಿಮಿಷದ ಓದು

<strong>ಹೆಚ್ಚಾದ ಕಾಡಾನೆ ಹಾವಳಿ : ಪರಿಹಾರಕ್ಕಾಗಿ ಮಲೆನಾಡಿಗೆ ಭೇಟಿ ನೀಡಿದ ಅರಣ್ಯಪಡೆ</strong>

ಸಕಲೇಶಪುರ : ದಿನ ಕಳೆದ ಹಾಗೆ ಮಲೆನಾಡು ಭಾಗಗಳಲ್ಲಿ ಕಾಡಾನೆ ಹಾವಳಿ ಹೆಚ್ಚಾಗುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಉನ್ನತ ಮಟ್ಟತ ತಂಡವು ಕಾಡಾನೆ ಮಾನವ ನಿಯಂತ್ರಣ ಅಧ್ಯಯನಕ್ಕೆ ಹಾಸನ ಮತ್ತು ಕೊಡಗಿನ ಹಲವು ಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಕಳೆದ ಎರಡು ದಶಕಗಳಿಂದಲೂ ಹಾಸನ ಜಿಲ್ಲೆಯ, ಸಕಲೇಶಪುರ, ಆಲೂರು ತಾಲ್ಲೂಕಿನ ಕಾಡಾನೆಗಳ‌ ಸಮಸ್ಯೆಯಿದ್ದು, ಬೇಲೂರು, ಅರಕಲಗೂಡು ತಾಲ್ಲೂಕಿಗೂ ಇದು ವ್ಯಾಪಿಸಿದೆ. ಇದುವರೆಗೂ ಕಾಡಾನೆ ದಾಳಿಯಿಂದ 77 ಜನರು ಮೃತಪಟ್ಟಿದ್ದಾರೆ. ಒಂದು ಸಾವಿರ ಕೋಟಿಗೂ ಹೆಚ್ಚು ಪ್ರಮಾಣದ ಬೆಳೆ ಹಾನಿಯಾಗಿದೆ. 34 ಕಾಡಾನೆಗಳು ಗುಂಡೇಟು, ವಿದ್ಯುತ್ ಶಾಕ್‌ನಿಂದ ಸಾವನ್ನಪ್ಪಿವೆ.‌ ಕಾಡಾನೆ ದಾಳಿಗೆ ಕಳೆದ ಒಂದು ವಾರದ ಹಿಂದೆ ಮನು ಎಂಬುವವರು ಮೃತಪಟ್ಟಿದ್ದರು. ಮೃತ ವ್ಯಕ್ತಿಯ ಶವವನ್ನು ಇಟ್ಟು ಅಹೋರಾತ್ರಿ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನೆಗೆ ಮಣಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅಧಿಕಾರಿಗಳ ತಂಡ ಕಳುಹಿಸಿ ಕೊಡುವುದಾಗಿ ಹೇಳಿದ್ದರು.

ಇದೀಗ ಸಿಎಂ ಸೂಚನೆಯಂತೆ ಇಂದಿನಿಂದ ಹಾಸನ‌, ಕೊಡಗು ಭಾಗದಲ್ಲಿ ಅಧ್ಯಯನಕ್ಕೆ ಅರಣ್ಯ ಪಡೆ ಮುಖ್ಯಸ್ಥರಾದ ರಾಜಕೀಶೋರ್ ಸಿಂಗ್, ರಂಗರಾವ್.ಜಿ.ವಿ., ಸಮನ್ವಯ ಅಧಿಕಾರಿ ಶಾಶ್ವತಿ ನಿಷ್ಠ, ಫ್ರೊ.ನಿಶಾಂತ್, ಸಿದ್ದರಾಮಪ್ಪ ಸೇರಿ ಎಂಟು ಜನರ ತಂಡವು ವನ್ಯಜೀವಿ ಬಾದಿತ ಪ್ರದೇಶಗಳಿಗೆ ಭೇಟಿ ನೀಡಿದ್ದು, ವಿವಿಧ ಸಂಘ ಸಂಸ್ಥೆಗಳ ಮುಖಂಡರ ಜೊತೆ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ʼಪರಿಸರವಾದಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮಾತನಾಡಿದ್ದಲ್ಲದೇ  ಕಾಡಾನೆ ಸ್ಥಳಾಂತರಿಸುವುದೇ ಶಾಶ್ವತ ಪರಿಹಾರ ಎಂದು ವರದಿ ಸಲ್ಲಿಸಬೇಕು ಇಲ್ಲವಾದಲ್ಲಿ ಕಾಡಾನೆಗಳನ್ನು ಗುಂಡು ಹಾರಿಸಿ ಸಾಯಿಸುತ್ತೇವೆ ಎಂದು ಗ್ರಾಮಸ್ಥರು ಕಿಡಿ ಕಾರಿದರು. ಇನ್ನೂ ಕೆಲವರು ಮೃತ ಕುಟುಂಬಕ್ಕೆ ಪರಿಹಾರ ಹೆಚ್ಚಿಸಿ, ಸರ್ಕಾರಿ ಉದ್ಯೋಗ ಕೊಡುವಂತೆ ಒತ್ತಾಯಿಸಿದರು.

ಈ ಕುರಿತು ಸಭೆಯಲ್ಲಿ ಮಾತನಾಡಿದ ಶಾಸಕ ಎಚ್.ಕೆ.ಕುಮಾರಸ್ವಾಮಿ, ʼಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ರೂಪಿಸುವಂತೆ ಹತ್ತಾರು ಸಭೆಗಳನ್ನು ಮಾಡಿದ್ದರೂ ಅಧಿಕಾರಿಗಳು ಸರಿಯಾಗಿ ಸರ್ಕಾರಕ್ಕೆ ವರದಿ ಸಲ್ಲಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈಗ ಕಾಡಾನೆಗಳನ್ನು ಸ್ಥಳಾಂತರ ಮಾಡವುದೊಂದೆ ಪರಿಹಾರ. ಅಧಿಕಾರಿಗಳು ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಹಾಗೂ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಬೇಕುʼ ಎಂದು ಹೇಳಿದರು.

ಸಭೆಯಲ್ಲಿ ಎಲ್ಲರ ಅಭಿಪ್ರಾಯ, ಸಲಹೆ ಹಾಗೂ ಮನವಿ ಸ್ವೀಕರಿಸಿದ ನಂತರ ಮಾತನಾಡಿದ ಪಿಸಿಸಿಎಫ್ ರಾಜ್ ‌ಕಿಶೋರ್ ಸಿಂಗ್, ʼಮೂರು ದಿನಗಳ ಕಾಲ ಹಾಸನ, ಕೊಡಗು ಭಾಗದಲ್ಲಿ ಅಧ್ಯಯನ ಮಾಡಲಿದ್ದೇವೆ. ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಜಾಸ್ತಿಯಾಗಿರುವುದು ಮನದಟ್ಟಾಗಿದೆ. ಕಾಡಾನೆಗಳ ದಾಳಿಯಿಂದ ಮನುಷ್ಯನ ಪ್ರಾಣ ಹಾನಿ ತಪ್ಪಿಸುವುದು ಬಹಳ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಬೇಕಾದ ಕ್ರಮಕೈಗೊಳ್ಳಲು ಸರ್ಕಾರಕ್ಕೆ ವರದಿ ಸಲ್ಲಿಸುತ್ತೇವೆ ಎಂದರು.‌

ಮಾಜಿ ಶಾಸಕ ಎಚ್ ಎಂ ವಿಶ್ವನಾಥ್ ಮಾತನಾಡಿ, ʼಮಳೆನಾಡಿನ ಜನರು ತುಂಬಾ ಶಾಂತಿ ಪ್ರಿಯರು. ಇದನ್ನು ದುರುಪಯೋಗ ಮಾಡಿ ಕೊಳ್ಳ ಬೇಡಿ ಮುಂದಿನ ದಿನಗಳಲ್ಲಿ ಆನೆಯಿಂದ ನಮ್ಮ ಪ್ರಾಣ ರಕ್ಷಣೆ ಮಾಡಿಕೊಳ್ಳಲು ನಾವು ಬಂದೂಕನ್ನು ಕೈಯಲ್ಲಿ ಹಿಡಿಯುವ ಮೊದಲು ಆನೆಗಳನ್ನು ಸಂಪೂರ್ಣ ಸ್ಥಳಾಂತರ ಮಾಡಿ ನಮ್ಮ ಜೀವಗಳನ್ನು ಉಳಿಸಲು ಬಂದಿರುವ ಅಧಿಕಾರಿಗಳು ನೈಜ ವರದಿಯನ್ನು ನೀಡಬೇಕುʼ ಎಂದು ಒತ್ತಾಯಿಸಿದರು

ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು, ಕನ್ನಡಪರ ಸಂಘಟನೆಗಳು, ಜನಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು