ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದೈಹಿಕ, ಮಾನಸಿಕ ಮತ್ತು ಆಹಾರ ಪದ್ಧತಿಗಳ ಮೂಲಕ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಬಹುದು: ಡಾ. ಕೆ. ಸುಧಾಕರ್‌

PPeepal Media Desk

Peepal Media Desk ಆರೋಗ್ಯ, ರಾಜ್ಯ

• 2 ನಿಮಿಷದ ಓದು

ದೈಹಿಕ, ಮಾನಸಿಕ ಮತ್ತು ಆಹಾರ ಪದ್ಧತಿಗಳ ಮೂಲಕ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಬಹುದು: ಡಾ. ಕೆ. ಸುಧಾಕರ್‌

ಬೆಂಗಳೂರು: ಅಭಿವೃದ್ಧಿ ಹೊಂದುತ್ತಿರುವ ದೇಶ, ಬಡವರು ಹಾಗೂ ಮಧ್ಯಮ ವರ್ಗದ ಜನರಲ್ಲಿ ಅಧಿಕ ರಕ್ತದೊತ್ತಡದ ಸಮಸ್ಯೆಗಳ ಪ್ರಮಾಣ ಹೆಚ್ಚಾಗಿ ಕಂಡು ಬರುತ್ತಿದೆ. ಸಾಂಕ್ರಾಮಿಕ ರೋಗಗಳಿಂದ ಉಂಟಾಗುವ ಸಾವಿನ ಪ್ರಮಾಣಕ್ಕಿಂತ, ಅಸಾಂಕ್ರಾಮಿಕ ರೋಗದಿಂದ ಎದುರಾಗುತ್ತಿರುವ ಸಾವಿನ ಸಂಖ್ಯೆ ಹೆಚ್ಚಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್‌ ಕಳವಳ ವ್ಯಕ್ತಪಡಿಸಿದ್ದಾರೆ.

ವಿಶ್ವ ಪಾರ್ಶ್ವವಾಯು ದಿನದ ಅಂಗವಾಗಿ ಆಯೋಜಿಸಲಾಗಿದ್ದ ಬೆಂಗಳೂರು ಮೆಡಿಕಲ್ ಕಾಲೇಜ್ ಸಭಾಂಗಣದಲ್ಲಿ ನಡೆದ ” ಬೆಂಗಳೂರು ಸ್ಟ್ರೋಕ್ ನರ್ಸಿಂಗ್ ಕಾನ್ ಕ್ಲೈವ್ 2022″ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿವಿಧ ಕಾರಣಗಳಿಂದಾಗಿ ಶೇ. 70ರಷ್ಟು ಪ್ರಕರಣಗಳು ಬಡತನ ರೇಖೆಗಿಂತ ಕೆಳಗಡೆ ಇರುವ ಮತ್ತು ಮಧ್ಯಮ ವರ್ಗದವರಲ್ಲಿ ಅಧಿಕ ರಕ್ತದೊತ್ತಡ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಬಡ ಹಾಗೂ ಅಭಿವೃದ್ಧಿ ಹೊಂದುತ್ತಿರುವ ದೇಶಗಳಿಗೆ ಇದು ದೊಡ್ಡ ಸವಾಲಾಗಿ ಪರಿಣಮಿಸುತ್ತಿದೆ ಎಂದು ಹೇಳಿದರು.

ಅಕ್ಟೋಬರ್‌ 29 ರಂದು ವಿಶ್ವ ಸ್ಟ್ರೋಕ್‌ ದಿನವನ್ನಾಚರಿಸಲಾಗುತ್ತಿದೆ. ವಿಶ್ವದ ಅನೇಕ ರಾಷ್ಟ್ರಗಳಲ್ಲಿ ಈ ಸಮಸ್ಯೆ ಪರಿಹಾರ ಕಂಡುಕೊಳ್ಳುವ ಪ್ರಯತ್ನಗಳು ಸತತವಾಗಿ ನಡೆಯುತ್ತಿವೆ. ಅಚ್ಚರಿ ಅಂದರೆ ಸಾಂಕ್ರಾಮಿಕ ರೋಗಗಳಿಂದ ಉಂಟಾಗುವ ಸಾವಿಗಿಗಿಂತ ಸಕ್ಕರೆ ಕಾಯಿಲೆ, ಅಧಿಕ ರಕ್ತದೊತ್ತಡ ಸೇರಿದಂತೆ ಇತರೆ ಅಸಾಂಕ್ರಮಿಕ ರೋಗಗಳಿಂದ ಉಂಟಾಗುತ್ತಿರುವುದರಿಂದ ಸಾವು ಹೆಚ್ಚಾಗುತ್ತಿದೆ. ಇದನ್ನು ನಿಯಂತ್ರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾಕಷ್ಟು ಕ್ರಮಗಳನ್ನು ಕೈಗೊಂಡಿವೆ.  ರೋಗ ಬಂದ ಮೇಲೆ ಚಿಕಿತ್ಸೆ ನೀಡುವುದಕ್ಕಿಂತ ರೋಗ ಬಾರದೆ ಇರುವ ಹಾಗೇ ನೋಡಿಕೊಳ್ಳುವುದೇ ಉತ್ತಮ.  ಹೀಗಾಗಿ ಆರೋಗ್ಯದ ಬಗ್ಗೆ ತಿಳುವಳಿಕೆ ನೀಡುವ ಕಾರ್ಯಗಳು ಸರ್ಕಾರದಿಂದಲೇ ನಡೆಯುತ್ತಿದೆ ಎಂದರು.

ಬಡತನ ರೇಖೆಗಿಂತ ಕೆಳಗಿರುವ, ಕಡಿಮೆ ಶಿಕ್ಷಣ ಹೊಂದಿರುವ, ಆರೋಗ್ಯ ಕ್ಷೇತ್ರದ ಬಗ್ಗೆ ಹೆಚ್ಚು ತಿಳುವಳಿಕೆ ಹೊಂದಿರದ ಗ್ರಾಮೀಣ ಜನರಿಗೆ ಆರೋಗ್ಯದ ಮಹತ್ವವನ್ನು ತಿಳಿ ಹೇಳುವುದು ದಾದಿಯರ ಪಾಲಿನ ಅತಿದೊಡ್ಡ ಕೆಲಸವಾಗಿದೆ. ಸ್ಟ್ರೋಕ್‌ ರೋಗಿಗೆ ವೈದ್ಯರು ಚಿಕಿತ್ಸೆ ಮಾತ್ರ ನೀಡುತ್ತಾರೆ. ಆದರೆ ಉಳಿದ ಕೆಲಸಗಳನ್ನು ಆರೈಕೆ ಮೂಲಕವೇ ದಾರಿಯರು ಮಾಡುತ್ತಾರೆ. ಹೀಗಾಗಿ ಸರಿಯಾದ ಆರೈಕೆ, ಕಾಯಿಲೆ ಬಗ್ಗೆ ತಿಳಿ ಹೇಳುವುದು ಮತ್ತು ರೋಗಿಗೆ ಆತ್ಮವಿಶ್ವಾಸ ತುಂಬುವುದು ದಾದಿಯರ ಮೊದಲ ಕೆಲಸವಾಗಿದೆ. ಇದರಿಂದಲೇ ಚಿಕಿತ್ಸೆ ಪಡೆಯುತ್ತಿರುವವರು ಗುಣಮುಖರಾಗಲು ಸಾಧ್ಯ ಎಂದು ಹೇಳಿದರು.

ದೇಶದಲ್ಲಿ ಖಿನ್ನತೆ, ಹೈಪರ್‌ ಟೆನ್ಷನ್‌ಗೆ ಒಳಗಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಭಾರತ ಸಕ್ಕರೆ ಕಾಯಿಲೆಯಲ್ಲಿ ವಿಶ್ವಕ್ಕೆ ರಾಜಧಾನಿ ಯಾಗುತ್ತಿದೆ. ಎಷ್ಟು ರಕ್ತದೊತ್ತಡ ಕಡಿಮೆ ಮಾಡುತ್ತೇವೆಯೋ ಅಷ್ಟು ಸ್ಟ್ರೋಕ್‌ಗೆ ಒಳಗಾಗುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಸ್ಸ್ಟ್ರೋಕ್‌ಗೆ ಮೊದಲ ಕಾರಣವೇ ಹೈಪರ್‌ ಟೆನ್ಷನ್‌ ಆಗಿದೆ. ಜೀವನ ಶೈಲಿ, ಆಹಾರ ಪದ್ಧತಿ, ದೈಹಿಕ, ಮಾನಸಿಕ ಹಾಗೂ ಸಾಮಾಜಿಕವಾಗಿ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಮೂಲಕ ಸ್ಟ್ರೋಕ್‌ಗೆ ಒಳಗಾಗುವುದನ್ನು ತಪ್ಪಿಸಬಹುದು ಎಂದು ತಿಳಿಸಿದರು.

ಸರ್ಕಾರ ಈಗಾಗಲೇ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಎನ್‌ಸಿಡಿ ಕ್ಲಿನಿಕ್‌ಗಳ 9000 ಸಬ್‌ ಸೆಂಟರ್‌ಗಳು ರಾಜ್ಯದಲ್ಲಿ ಸ್ಥಾಪಿಸಲಾಗಿದೆ. ಇದಕ್ಕಾಗಿ 6000 ಸಿಎಚ್‌ಒಗಳನ್ನು ನೇಮಕ ಮಾಡಲಾಗಿದೆ. ನಮ್ಮ ಕ್ಲಿನಿಕ್‌ಗಳ ಸ್ಥಾಪನೆಯ ಮೂಲ ಉದ್ದೇಶವೂ ಇದಾಗಿದೆ. ಈ ಮೂಲಕ ಸಕ್ಕರೆ ಕಾಯಿಲೆ ಹೈಪರ್‌ ಟೆನ್ಷನ್‌ ಸೇರಿದಂತೆ ಎಲ್ಲಾ ಅಸಾಂಕ್ರಾಮಿಕ ರೋಗಿಗಳ ಚಿಕಿತ್ಸೆಗೆ ನೆರವು ನೀಡಲಾಗುತ್ತಿದೆ. ಅವರ ಡೇಟಾಗಳನ್ನು ಸಂಗ್ರಹಿಸಿ, ರೋಗಿಗಳ ಡಯಟ್‌, ಪೋಷಕಾಂಶಯುಕ್ತ ಆಹಾರ ಸೇವನೆ ಬಗ್ಗೆ ಪರಿಣಾಮಕಾರಿಯಾಗಿ ತಿಳಿಸುವ ಕೆಲಸ ನಡೆಯುತ್ತಿದೆ ಎಂದು ತಿಳಿಸಿದರು.

ಸ್ಟೋಕ್‌ ಆದಾಗ ಸಮಯ ಪ್ರಜ್ಞೆ ತುಂಬಾ ಪ್ರಮುಖ. ಡಾಕ್ಟರ್‌ ಹತ್ತಿರ ಹೇಗೆ ಮತ್ತು ಎಷ್ಟು ಬೇಗ ಹೋಗುತ್ತಿರಾ ಅನ್ನುವುದು ತುಂಬಾ ಮುಖ್ಯವಾಗುತ್ತದೆ. ಚಿಕಿತ್ಸೆ ಎಷ್ಟು ಬೇಗನೆ ಸಿಗುತ್ತದೆ ಅನ್ನುವುದೇ ನಿರ್ಣಾಯಕ. ವೈದ್ಯರು ಹಾಗೂ ಸಿಬ್ಬಂದಿಗಳು ರೋಗಿಯನ್ನು ಹಾಗೂ ಅವರ ಸಂಬಂಧಿಕರನ್ನು ನಿಭಾಯಿಸುವುದು ಕೂಡ ಪ್ರಮುಖವಾಗುತ್ತದೆ. ಆರೈಕೆ ಹಾಗೂ ಚಿಕಿತ್ಸೆ ಎರಡೂ ಕೂಡ ಸರಿಯಾದ ಕ್ರಮದಲ್ಲಿ ಹಾಗೂ ಸರಿಯಾದ ಸಮಯಕ್ಕೆ ಸಿಕ್ಕರೆ ಬೇಗನೆ ಗುಣಮುಖವಾಗಲು ಸಾಧ್ಯವಾಗುತ್ತದೆ. ಹೀಗಾಗಿ ತಂತ್ರಜ್ಞಾನದ ಬಳಕೆ ಮೂಲಕ ಆರೋಗ್ಯ ಕರ್ನಾಟಕವನ್ನು ಕಟ್ಟಬೇಕಿದೆ ಎಂದು ಸಚಿವರು ಹೇಳಿದರು.

PPeepal Media Desk

Peepal Media Desk

Peepal Media · ಆರೋಗ್ಯ ವಿಭಾಗ

ಸಂಬಂಧಿತ ಸುದ್ದಿಗಳು