ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಇಂದಿನಿಂದ ರಾಜ್ಯಾದ್ಯಂತ “ಗೃಹ ಆರೋಗ್ಯ” ಯೋಜನೆ ವಿಸ್ತರಣೆ

PPeepal Media Desk

Peepal Media Desk • ಆರೋಗ್ಯ, ಮೀಡಿಯಾ, ರಾಜ್ಯ

• 1 ನಿಮಿಷದ ಓದು

ಇಂದಿನಿಂದ ರಾಜ್ಯಾದ್ಯಂತ “ಗೃಹ ಆರೋಗ್ಯ” ಯೋಜನೆ ವಿಸ್ತರಣೆ

ರಾಜ್ಯದಲ್ಲಿ ‘ಗೃಹ ಆರೋಗ್ಯ’ ಯೋಜನೆ ಸೋಮವಾರದಿಂದ ರಾಜ್ಯಾದ್ಯಂತ ವಿಸ್ತರಣೆಯಾಗಲಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಪ್ರತೀ ಮನೆ ಮನೆಗೂ ಭೇಟಿ ನೀಡುವ ಮೂಲಕ 30 ವರ್ಷ ಮೇಲ್ಪಟ್ಟವರ ಸಾಂಕ್ರಾಮಿಕ ಅಲ್ಲದ ರೋಗಗಳ ತಪಾಸಣೆ ನಡೆಸುವುದು, ಔಷಧ ವಿತರಣೆ, ಅಗತ್ಯ ಚಿಕಿತ್ಸೆಗೆ ಸಹಕರಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಸೋಮವಾರ ವಿಕಾಸಸೌಧದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಯೋಜನೆ ಕುರಿತು ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ಉದ್ಘಾಟಿಸುವ ಜೊತೆಗೆ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸುವುದಾಗಿ ಅಧಿಕೃತ ಘೋಷಣೆ ಮಾಡಲಿದ್ದಾರೆ.

ಈ ಕಾರ್ಯಕ್ರಮವನ್ನು ಗ್ರಾಮೀಣ ಪ್ರದೇಶಗಳಲ್ಲಿ ಜಾರಿಗೆ ತಂದು ಸಮುದಾಯ ಆರೋಗ್ಯ ಅಧಿಕಾರಿಗಳು ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತರು ಮತ್ತು ಸ್ವಯಂಸೇವಕರ ಸಹಾಯದಿಂದ ಮನೆ ಬಾಗಿಲಿಗೆ ತೆರಳಿ ತಪಾಸಣೆ ನಡೆಸುತ್ತಾರೆ. ಕಾಯಿಲೆಯನ್ನು ಮೊದಲೇ ಪತ್ತೆ ಹಚ್ಚುವುದು ಮತ್ತು ಚಿಕಿತ್ಸೆ ನೀಡುವುದು ಈ ಕಾರ್ಯಕ್ರಮ ಆರಂಭದ ಹಿಂದಿನ ಉದ್ದೇಶವಾಗಿದೆ.

ಸುಮಾರು 100 ಕೋಟಿ ವೆಚ್ಚದಲ್ಲಿ ಈ ಯೋಜನೆಯನ್ನು ವಿಸ್ತರಿಸುತ್ತಿದ್ದು, ಪ್ರತಿ ಸಿಬ್ಬಂದಿ ಮಂಗಳವಾರ, ಬುಧವಾರ, ಶುಕ್ರವಾರ ಮತ್ತು ಶನಿವಾರದಂದು ಪ್ರತಿದಿನ ಸುಮಾರು 15 ಮನೆಗಳನ್ನು ಪರಿಶೀಲಿಸುವ ಗುರಿ ಹೊಂದಿದೆ. ಭೇಟಿ ಸಮಯದಲ್ಲಿ ಮೌಖಿಕ, ಗರ್ಭಕಂಠದ ಮತ್ತು ಸ್ತನ ಕ್ಯಾನ್ಸರ್‌ಗಳ ಮೌಲ್ಯಮಾಪನಗಳನ್ನು ಮಾಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗೃಹ ಆರೋಗ್ಯ ಯೋಜನೆಯಡಿಯಲ್ಲಿ 14 ರೋಗಗಳ ತಪಾಸಣೆಗೆ ಆರೋಗ್ಯ ಇಲಾಖೆ ಮುಂದಾಗಲಿದೆ. ರಾಜ್ಯದ ಜನಸಂಖ್ಯೆಯ ಶೇ.26.9ಕ್ಕೂ ಅಧಿಕ ಮಂದಿ ರಕ್ತದ ಒತ್ತಡ, ಶೇ.15.6 ಜನರು ಮಧುಮೇಹದಿಂದ ಬಳಲುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಜನರು ರಕ್ತದೊತ್ತಡ ಮತ್ತು ಮಧುಮೇಹವನ್ನು ನಿರ್ಲಕ್ಷಿಸುತ್ತಿದ್ದು, ಖಾಯಿಲೆ ತಪಾಸಣೆ ಜೊತೆಗೆ ಅವುಗಳ ಬಗ್ಗೆ ಅರಿವು ಮೂಡಿಸುವುದೂ ಈ ಯೋಜನೆಯ ಉದ್ದೇಶ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PPeepal Media Desk

Peepal Media Desk

Peepal Media · ಆರೋಗ್ಯ ವಿಭಾಗ

ಸಂಬಂಧಿತ ಸುದ್ದಿಗಳು